ದೆಹಲಿ | ಕ್ಷುಲ್ಲಕ ಕಾರಣಕ್ಕೆ ಚಾಕುವಿನಿಂದ ಇರಿದು ವಿದ್ಯಾರ್ಥಿ ಹತ್ಯೆ

Date:

  • ದೆಹಲಿ ವಿಶ್ವವಿದ್ಯಾಲಯದ ಹೊರಗೆ ಘಟನೆ
  • ಕಾಲೇಜಿನಲ್ಲಿ ಬಿಎ ಅಧ್ಯಯನ ಮಾಡುತ್ತಿದ್ದ ನಿಖಿಲ್

ದೆಹಲಿ ವಿಶ್ವವಿದ್ಯಾಲಯದ ಆರ್ಯಭಟ ಕಾಲೇಜಿನ ಹೊರಗೆ 19 ವರ್ಷದ ವಿದ್ಯಾರ್ಥಿಯೊಬ್ಬನನ್ನು ಭಾನುವಾರ (ಜೂನ್ 18) ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ವಿದ್ಯಾರ್ಥಿಯನ್ನು ನಿಖಿಲ್‌ ಚೌಹಾಣ್‌ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಯು ವಿಶ್ವವಿದ್ಯಾಲಯದಲ್ಲಿ ಮುಕ್ತ ಅಧ್ಯಯನ ಕಾಲೇಜಿಗೆ ದಾಖಲಾಗಿದ್ದ.

ವಿದ್ಯಾರ್ಥಿ ನಿಖಿಲ್‌ ಭಾನುವಾರ ತರಗತಿಗೆ ಹಾಜರಾಗಲು ದೆಹಲಿ ವಿಶ್ವವಿದ್ಯಾಲಯದ ಕಾಲೇಜಿಗೆ ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿ ವಿಶ್ವವಿದ್ಯಾಲಯದ ಅದೇ ಕಾಲೇಜಿನ ಮತ್ತೊಬ್ಬ ವಿದ್ಯಾರ್ಥಿ ಜತೆ ನಿಖಿಲ್ ಏಳು ದಿನಗಳ ಹಿಂದೆ ಕಲಹ ಮಾಡಿಕೊಂಡಿದ್ದ. ನಿಖಿಲ್‌ ವಿಶ್ವವಿದ್ಯಾಲಯಕ್ಕೆ ಆಗಮಿಸಿರುವುದನ್ನು ತಿಳಿದು ಅಲ್ಲಿಗೆ ಬಂದ ವಿದ್ಯಾರ್ಥಿಯು ನಿಖಿಲ್‌ ಜತೆ ಮತ್ತೆ ಜಗಳ ಪ್ರಾರಂಭಿಸಿ ನಿಖಿಲ್‌ಗೆ ಚಾಕುವಿನಿಂದ ಇರಿದಿದ್ದಾನೆ.

ವಿದ್ಯಾರ್ಥಿಯು ನಿಖಿಲ್‌ ಸ್ನೇಹಿತೆಯ ಜತೆ ಅಸಭ್ಯವಾಗಿ ವರ್ತಿಸಿದ್ದ ಎಂದು ಆರೋಪಿಸಲಾಗಿದೆ. ಈ ಸಂಬಂಧ ನಿಖಿಲ್‌ ಹಾಗೂ ವಿದ್ಯಾರ್ಥಿ ನಡುವೆ ಮಾತಿನ ಚಕಮಕಿ ನಡೆದಿತ್ತು.

ನಿಖಿಲ್‌ ಭಾನುವಾರ ವಿಶ್ವವಿದ್ಯಾಲಯಕ್ಕೆ ಆಗಮಿಸಿರುವುದನ್ನು ತಿಳಿದು ಆರೋಪಿತ ವಿದ್ಯಾರ್ಥಿಯು ತನ್ನ ಇತರ ಮೂವರು ಸಹಚರರ ಜೊತೆ ಕಾಲೇಜಿಗೆ ಆಗಮಿಸಿದನು. ಕಾಲೇಜಿನ ಗೇಟಿನ ಹೊರಗೆ ನಿಖಿಲ್‌ಗೆ ಚಾಕುವಿನಿಂದ ಇರಿದು ವಿದ್ಯಾರ್ಥಿ ಪರಾರಿಯಾದನು.

ತಕ್ಷಣ ನಿಖಿಲ್‌ನನ್ನು ಮೋತಿ ಬಾಗ್‌ನಲ್ಲಿರುವ ಚರಕ್‌ ಪಾಲಿಕಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಿ ನಿಖಿಲ್ ಮೃತಪಟ್ಟಿರುವುದಾಗಿ ವೈದ್ಯರು ಪ್ರಕಟಿಸಿದರು.

ವಿಶ್ವವಿದ್ಯಾಲಯದಲ್ಲಿ ರಾಜ್ಯಶಾಸ್ತ್ರದ ಬಿಎ ಪದವಿಯ ಮೊದಲ ವರ್ಷದ ವಿದ್ಯಾರ್ಥಿಯಾಗಿದ್ದ ನಿಖಿಲ್ ಪಶ್ಚಿಮ ವಿಹಾರದಲ್ಲಿ ವಾಸವಾಗಿದ್ದ.

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ | ಕಳ್ಳನೆಂದು ಮುಸ್ಲಿಂ ಯುವಕನನ್ನು ಮರಕ್ಕೆ ಕಟ್ಟಿ ʼಜೈ ಶ್ರೀರಾಮ್ʼ ಹೇಳುವಂತೆ ಹಲ್ಲೆ

ಈ ಸಂಬಂಧ ಪ್ರಕರಣವನ್ನು ದಾಖಲಿಸಲಾಗಿದ್ದು ಆರೋಪಿಯನ್ನು ಗುರುತಿಸಲಾಗಿದೆ. ಘಟನೆ ನಡೆದ ಕಾಲೇಜು ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ದೆಹಲಿ ವಿಶ್ವವಿದ್ಯಾಲಯ ನಿಖಿಲ್‌ ಹತ್ಯೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

“ಅಮೂಲ್ಯ ಜೀವವೊಂದನ್ನು ಕಳೆದುಕೊಂಡಿರುವುದಕ್ಕೆ ನಮಗೆ ಬೇಸರವಾಗಿದೆ. ವಿದ್ಯಾರ್ಥಿ ಆತ್ಮಕ್ಕೆ ದೇವರು ಶಾಂತಿ ಕರುಣಿಸಲಿ. ನಿಖಿಲ್‌ ಚೌಹಾಣ್‌ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ” ಎಂದು ವಿಶ್ವವಿದ್ಯಾಲಯ ಹೇಳಿಕೆಯೊಂದರಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...