ವಿದ್ಯಾರ್ಥಿಯನ್ನು ವಿವಸ್ತ್ರಗೊಳಿಸಿ, ಚಪ್ಪಲಿಯಿಂದ ಹೊಡೆದು ಹಲ್ಲೆ; ಮೂವರು ಸಹಪಾಠಿಗಳ ಬಂಧನ

Date:

ಸರ್ಕಾರಿ ಹಾಸ್ಟೆಲ್‌ನಲ್ಲಿ ಕೈಗಾರಿಕಾ ತರಬೇತಿ ಸಂಸ್ಥೆಯ (ಐಟಿಐ) ವಿದ್ಯಾರ್ಥಿಯೊಬ್ಬನನ್ನು ಆತನ ಸಹಪಾಠಿಗಳು ವಿವಸ್ತ್ರಗೊಳಿಸಿ, ಚಪ್ಪಲಿಯಿಂದ ಹೊಡೆದು ದೌರ್ಜನ್ಯ ಎಸಗಿರುವ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ಪ್ರಕರಣದಲ್ಲಿ ಮೂವರು ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿದ್ದು, ಬಾಲಾಪರಾಧಿ ಗೃಹಕ್ಕೆ ಕಳಿಸಿದ್ದಾರೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ ಸಂತ್ರಸ್ತ ವಿದ್ಯಾರ್ಥಿ ವಿವಸ್ತ್ರನಾಗಿರುವುದು ಮತ್ತು ಆತನಿಗೆ ಕೆಲವು ವಿದ್ಯಾರ್ಥಿಗಳು ಕಿರುಕುಳ ನೀಡುತ್ತಿರುವುದು ಕಂಡುಬಂದಿದೆ.

ಸಂತ್ರಸ್ತ ವಿದ್ಯಾರ್ಥಿಯು ತನ್ನ ಪ್ಯಾಂಟ್‌ ಧರಿಸಲು ಅವಕಾಶ ನೀಡುವಂತೆ ಸಹಪಾಠಿಗಳ ಬಳಿ ಬೇಡಿಕೊಂಡರೂ, ಆರೋಪಿ ಬಾಲಕರು ಆತನ ಮೇಲೆ ದೌರ್ಜನ್ಯ ಮುಂದುವರೆಸಿದ್ದಾರೆ. ಆರೋಪಿತ ಮೂವರು ಬಾಲಕರಲ್ಲಿ ಓರ್ವ ಘಟನೆಯನ್ನು ಚಿತ್ರೀಕಸಿದ್ದು, ಇಬ್ಬರ ಸಂತ್ರಸ್ತ ವಿದ್ಯಾರ್ಥಿಗೆ ಚಪ್ಪಲಿಯಲ್ಲಿ ಹೊಡೆತ್ತಿರುವುದು ಹಾಗೂ ಮೂರನೇ ಬಾಲಕ ಸಂತ್ರಸ್ತ ಖಾಸಗಿ ಅಂಗಗಳ ಕುರಿತು ಅಶ್ಲೀಲವಾಗಿ ಮಾತನಾಡುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿದ್ಯಾರ್ಥಿಗಳು ಐಟಿಐನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಚೆಕ್ಕನೂರಾನಿಯಲ್ಲಿರುವ ಕಲ್ಲಾರ್ ರಿಕ್ಲಮೇಷನ್ ಹಾಸ್ಟೆಲ್‌ನಲ್ಲಿ ಘಟನೆ ನಡೆದಿದೆ. ಆರೋಪಿ ಬಾಲಕರನ್ನು ವಿಚಾರಣೆಗೆ ಒಳಪಡಿಸಿದ್ದೇವೆ. ತನಿಖೆ ನಡೆಯುತ್ತಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...