ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಪ್ರೀತಿ ‘ಪ್ಯಾಚ್‌ಅಪ್‌’ಗೆ ನಿರಾಕರಿಸಿದ್ದ ಮಾಜಿ ಗೆಳತಿಯ ಬಂಧನ-ಜಾಮೀನು

Date:

ಅಪಾರ್ಟ್‌ಮೆಂಟ್‌ನ ಏಳನೇ ಮಹಡಿಯಿಂದ ಬಿದ್ದು ಕಾನೂನು ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಶನಿವಾರ ನಡೆದಿತ್ತು. ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಕರಣ ದಾಖಲಿಸಲಾಗಿದೆ. ವಿದ್ಯಾರ್ಥಿಯ ಸಾವಿಗೆ ಆತನ ಮಾಜಿ ಗೆಳತಿಯೇ ಕಾರಣವೆಂದು ಹೇಳಲಾಗಿದ್ದು, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಮಾಜಿ ಗೆಳತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಕೆಗೆ ನ್ಯಾಯಾಲಯ ಜಾಮೀನು ನೀಡಿದೆ.

ಅಮಿಟಿ ವಿಶ್ವವಿದ್ಯಾಲಯದಲ್ಲಿ ಎಲ್‌ಎಲ್‌ಬಿ ವಿದ್ಯಾರ್ಥಿಯಾಗಿದ್ದ 23 ವರ್ಷದ ತಪಸ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಆತನ ಸಾವಿನ ಪ್ರಕರಣದಲ್ಲಿ ಅದೇ ವಿಶ್ವವಿದ್ಯಾಲಯ ತಪಸ್‌ನ ಮಾಜಿ ಗೆಳತಿಯನ್ನು ಪೊಲೀಸರು ಬಂಧಿಸಿ, ನ್ಯಾಯಾಲಯದ ಎದುರು ಹಾಜರುಪಡಿಸಿದ್ದಾರೆ.

“ವಿದ್ಯಾರ್ಥಿ ತನ್ನ ಮಾಜಿ ಗೆಳತಿಯೊಂದಿಗೆ ಪ್ರೀತಿಯನ್ನು ‘ಪ್ಯಾಚ್‌ಅಪ್’ ಮಾಡಿಕೊಳ್ಳಲು ಬಯಸಿದ್ದ. ಆಕೆಯ ಮನವೊಲಿಸಲು ಪ್ರಯತ್ನಿಸಿದ್ದ. ಆದರೆ, ಅದಕ್ಕೆ ಆಕೆ ನಿರಾಕರಸಿದ್ದಾಳೆ. ಕುಪಿತಗೊಂಡ ವಿದ್ಯಾರ್ಥಿ ಅಪಾರ್ಟ್‌ಮೆಂಟ್‌ನ 2ನೇ ಮಹಡಿಯಿಂದ ಬಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ಧಾನೆ” ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸರ ಹೇಳಿಕೆಯನ್ನು ಆಲಿಸಿದ ನ್ಯಾಯಾಲಯವು “ಇದು ಆತ್ಮಹತ್ಯೆಗೆ ಪ್ರಚೋದನೆಯಲ್ಲ” ಎಂದು ಹೇಳಿದ್ದು, ಯುವತಿಗೆ ಜಾಮೀನು ನೀಡಿದೆ.

ತಪಸ್ ಗಾಜಿಯಾಬಾದ್‌ನಲ್ಲಿ ವಾಸಿಸುತ್ತಿದ್ದು, ಶನಿವಾರ ನೋಯ್ಡಾದ ಸೆಕ್ಟರ್ 99ರಲ್ಲಿರುವ ಸುಪ್ರೀಂ ಟವರ್ಸ್‌ ಅಪಾರ್ಟ್‌ಮೆಂಟ್‌ನಲ್ಲಿದ್ದ ತನ್ನ ಸ್ನೇಹಿತನ ಮನೆಗೆ ಭೇಟಿ ನೀಡಿದ್ದರು. ಆತನ ಸ್ನೇಹಿತರು ತಪಸ್‌ನ ಮಾಜಿ ಗೆಳತಿಗೆ ಕರೆ ಮಾಡಿ ಅವನೊಂದಿಗೆ ‘ಪ್ಯಾಚ್‌ಅಪ್‌’ ಮಾಡಿಕೊಳ್ಳುವಂತೆ ಮನವೊಲಿಸಿದ್ದರು. ಆಕಯೂ ಅಪಾರ್ಟ್‌ಮೆಂಟ್‌ಗೆ ಬಂದಿದ್ದರು. ಆದರೆ, ತಮಗೆ ‘ಪ್ಯಾಚ್‌ಅಪ್’ ಮಾಡಿಕೊಳ್ಳಲು ಇಷ್ಟವಿಲ್ಲವೆಂದು ಹೇಳಿದ್ದರು. ಇದರಿಂದ ಅಸಮಾಧಾನಗೊಂಡ ತಪಸ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್‌ ತನಿಖೆಯಿಂದ ತಿಳಿದುಬಂದಿದೆ.

ಆತ್ಮಹತ್ಯೆ ಪರಿಹಾರವಲ್ಲ 4

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...