ಜೆಎನ್‌ಯು ವಿವಿಯಲ್ಲಿ ಅಂಗವಿಕಲ ವಿದ್ಯಾರ್ಥಿಗೆ ಎಬಿವಿಪಿ ಸದಸ್ಯರಿಂದ ಹಲ್ಲೆ  

Date:

ನವದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ (ಜೆಎನ್‌ಯು) ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ಅಂಗವಿಕಲ ವಿದ್ಯಾರ್ಥಿಗೆ ಎಬಿವಿಪಿ ಸದಸ್ಯರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿಯನ್ನು ಫಾರೂಕ್ ಆಲಂ ಎಂದು ಗುರುತಿಸಲಾಗಿದೆ. ಫಾರೂಕ್ ಅವರು ಎನ್‌ಎಸ್‌ಯುಐ ಹಿರಿಯ ಕಾರ್ಯಕರ್ತರಾಗಿದ್ದಾರೆ.

ಬುಧವಾರದಂದು ಕಾವೇರಿ ಹಾಸ್ಟೆಲ್‌ನಲ್ಲಿ ಎಬಿವಿಪಿಯ ಕೆಲವು ಸದಸ್ಯರು ಫಾರೂಕ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎನ್‌ಎಸ್‌ಯುಐ ಹೇಳಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾವೇರಿ ಹಾಸ್ಟೆಲ್‌ನಲ್ಲಿ ಇಂದು ನಡೆದ ಭೀಕರ ಘಟನೆಯಲ್ಲಿ, ಕಾವೇರಿ ಹಾಸ್ಟೆಲ್‌ನ ಹಿರಿಯ ವಾರ್ಡನ್ ಮತ್ತು ಅವರ ಎಬಿವಿಪಿ ಗೂಂಡಾಗಳು ಎನ್‌ಎಸ್‌ಯುಐ ಕಾರ್ಯಕರ್ತ ಮತ್ತು ಜೆಎನ್‌ಯುನಲ್ಲಿ ಅಂಗವಿಕಲ ಸಂಶೋಧನಾ ವಿದ್ಯಾರ್ಥಿಯಾಗಿರುವ ಫಾರೂಕ್ ಆಲಂ ಮೇಲೆ ಹಲ್ಲೆ ನಡೆಸಿದ್ದಾರೆ. ಘಟನೆ ಕುರಿತು ಕ್ರಮ ಕೈಗೊಳ್ಳುವಂತೆ ಎನ್‌ಎಸ್‌ಯುಐ ಟ್ವೀಟ್ ಮೂಲಕ ಒತ್ತಾಯಿಸಿದೆ.

ಗಾಯಗೊಂಡ ಫಾರೂಕ್ ಅವರನ್ನು ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿದೆ.

ಜೆಎನ್‌ಯು ಕ್ಯಾಂಪಸ್ ಈಗ ಶಿಕ್ಷಣಕ್ಕಿಂತ ಗಲಭೆಗಳಿಗೆ ಹೆಚ್ಚು ಪ್ರಸಿದ್ಧಿಯಾಗಿದೆ. ಜೆಎನ್‌ಯು ಆಡಳಿತಯು ಬಿಜೆಪಿಯ ರಾಜಕೀಯ ಶಕ್ತಿಯಿಂದ ರಕ್ಷಿಸಲ್ಪಟ್ಟಿದ್ದು, ಅಧೀನ ಸಂಸ್ಥೆ ಎಬಿವಿಪಿ ವಿದ್ಯಾರ್ಥಿಗಳು ಗಲಭೆಯ ಕಾರಣಕರ್ತರಾಗಿದ್ದಾರೆ.

ಜೆಎನ್‌ಯುನಿಂದ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ಗಾಯಾಳು ವಿದ್ಯಾರ್ಥಿ ಫಾರೂಕ್ ಇನ್ನೆರಡು ತಿಂಗಳಲ್ಲಿ ಪಿಎಚ್‌ಡಿ ಮುಗಿಸಲಿದ್ದಾರೆ. ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೇರಿ ಹಾಸ್ಟೆಲ್‌ನಲ್ಲಿರುವ ಫಾರೂಕ್ ಅವರ ಕೊಠಡಿಯನ್ನು ಖಾಲಿ ಮಾಡಲು ಜೆಎನ್‌ಯು ಆಡಳಿತವು ಮಧ್ಯಾಹ್ನ ಬಂದಾಗ ಈ ಘಟನೆ ಸಂಭವಿಸಿದೆ.

ಈ ಸುದ್ದಿ ಓದಿದ್ದೀರಾ? ಅಂಗಿ ಕಳಚಿ ಎಂದರು, ನಾನು ದೇಗುಲದ ಒಳಗೆ ಕಾಲಿಡಲಿಲ್ಲ: ಕೇರಳ ಘಟನೆ ಮೆಲುಕು ಹಾಕಿದ ಸಿದ್ದರಾಮಯ್ಯ

ಫಾರೂಕ್ ಅವರ ಜೊತೆಗಿದ್ದ ಕೆಲವು ಎಬಿವಿಪಿ ವಿದ್ಯಾರ್ಥಿಗಳು ಅವರ ಜೊತೆ ಜಗಳವಾಡಿದ್ದಲ್ಲದೆ ಥಳಿಸಿದ್ದಾರೆ. ಪ್ರಜ್ಞೆ ತಪ್ಪಿ ಬಿದ್ದ ಅವರನ್ನು ನಂತರ ಆಂಬ್ಯುಲೆನ್ಸ್ ಮೂಲಕ ಏಮ್ಸ್‌ಗೆ ಕರೆದೊಯ್ಯಲಾಯಿತು.

ಜೆಎನ್‌ಯು ಕ್ಯಾಂಪಸ್‌ನ ಎಸ್‌ಎಫ್‌ಐ ಸಂಘಟನೆ ಕೂಡ ಇಡೀ ಘಟನೆಯನ್ನು ವಿರೋಧಿಸಿದೆ. ಎಲ್ಲ ವಿದ್ಯಾರ್ಥಿಗಳು ಒಗ್ಗೂಡಿ ಎಬಿವಿಪಿ ವಿರುದ್ಧ ಪ್ರತಿಭಟಿಸುವಂತೆ ಕರೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...