ದೆಹಲಿ | ಕೋಚಿಂಗ್ ಸೆಂಟರ್‌ನಲ್ಲಿ ಬೆಂಕಿ ಅವಘಡ; ಹಗ್ಗದ ಸಹಾಯದಿಂದ ಕೆಳಕ್ಕೆ ಜಿಗಿದ ವಿದ್ಯಾರ್ಥಿಗಳು

Date:

ರಾಷ್ಟ್ರ ರಾಜಧಾನಿ ದೆಹಲಿಯ ಮುಖರ್ಜಿ ನಗರ ಪ್ರದೇಶದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಬಾತ್ರಾ ಚಿತ್ರಮಂದಿರದ ಬಳಿಯ ಜ್ಞಾನ ಕಟ್ಟಡದ ಮೂರನೇ ಅಂತಸ್ತಿನಲ್ಲಿ ಕಾರ್ಯಾಚರಿಸುತ್ತಿದ್ದ ಸಂಸ್ಕೃತಿ ಕೋಚಿಂಗ್ ಸೆಂಟರ್‌ನಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡಿದೆ.  

ಕೋಚಿಂಗ್ ಸೆಂಟರ್‌ನಲ್ಲಿ ಪಾಠ ನಡೆಯುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಪರಿಣಾಮ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದರು. ಪ್ರಾಣ ಉಳಿಸಿಕೊಳ್ಳಲು ಕೆಲ ವಿದ್ಯಾರ್ಥಿಗಳು ಕಟ್ಟಡದ ಹೊರಗೆ ನೇತಾಡುತ್ತಿದ್ದ ಹಗ್ಗವನ್ನು ಬಳಸಿ ಕೆಳಗಿಳಿದಿದ್ದಾರೆ. ಈ ವೇಳೆ 4 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.

ʻಬೆಂಕಿ ನಂದಿಸುವ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಎಲ್ಲರನ್ನೂ ಸುರಕ್ಷಿತವಾಗಿ ಕಟ್ಟಡದಿಂದ ಹೊರತರಲಾಗಿದೆʼ ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ಹೇಳಿದ್ಧಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದುರದೃಷ್ಟಕರ: ದೆಹಲಿ ಸಿಎಂ

ಮುಖರ್ಜಿ ನಗರದಲ್ಲಿ ಸಂಭವಿಸಿದ ಬೆಂಕಿ ಅವಘಡ ಅತ್ಯಂತ ದುರದೃಷ್ಟಕರ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.  ʻಕಟ್ಟಡದಿಂದ ತಪ್ಪಿಸಿಕೊಳ್ಳುವ ವೇಳೆ ಕೆಲ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರೂ ಸುರಕ್ಷಿತವಾಗಿದ್ದಾರೆ, ಭಯಪಡುವ ಅಗತ್ಯವಿಲ್ಲ, ಅಗ್ನಿಶಾಮಕ ಇಲಾಖೆ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ಹತೋಟಿಗೆ ತರಲಾಗಿದೆʼ ಎಂದು ಕೇಜ್ರಿವಾಲ್ ಹೇಳಿದ್ದಾರೆ. 

ಮುಖರ್ಜಿ ನಗರವು ದೆಹಲಿ ವಿಶ್ವವಿದ್ಯಾನಿಲಯದ ಸಮೀಪದಲ್ಲಿದ್ದು, ಯುಪಿಎಸ್‌ಸಿ ಆಕಾಂಕ್ಷಿಗಳ ಪ್ರಮುಖ ಕೇಂದ್ರವಾಗಿದೆ. ನೂರಾರು ಶಿಕ್ಷಣ ಸಂಸ್ಥೆಗಳು ಮತ್ತು ಕೋಚಿಂಗ್ ಸೆಂಟರ್‌ಗಳು ಈ ಪ್ರದೇಶದಲ್ಲಿದ್ದು, ಉತ್ತರ ಪ್ರದೇಶ, ಬಿಹಾರ ಸೇರಿದಂತೆ ನೆರೆ ರಾಜ್ಯಗಳ ಸಾವಿರಾರು ವಿದ್ಯಾರ್ಥಿಗಳ ಪ್ರಮುಖ ತಾಣವಾಗಿದೆ. 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...