ತುಳುವಿಗೆ ಅಧಿಕೃತ ಭಾಷಾ ಸ್ಥಾನಮಾನ: ಆಂಧ್ರ ಪ್ರದೇಶಕ್ಕೆ ಭೇಟಿ ನೀಡಿದ ಅಧ್ಯಯನ ತಂಡ

Date:

ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ರೂಪಿಸಬೇಕಾದ ಕಾನೂನು ಪ್ರಕ್ರಿಯೆಗಳ ಬಗ್ಗೆ ಹಾಗೂ ಅನುಷ್ಠಾನದ ವಿಧಿವಿಧಾನಗಳ ಬಗ್ಗೆ ಅಧ್ಯಯನ ಮಾಡಲು ರಾಜ್ಯ ಸರ್ಕಾರವು ನೇಮಿಸಿದ್ದ ಅಧ್ಯಯನ ಸಮಿತಿಯು ಆಂಧ್ರ ಪ್ರದೇಶಕ್ಕೆ ತೆರಳಿ 2 ದಿನಗಳ ಕಾಲ ಆಂಧ್ರ ಪ್ರದೇಶ ಸರ್ಕಾರದ ವಿವಿಧ ಇಲಾಖೆಗಳ ಜೊತೆಗೆ ಮಾತುಕತೆ ನಡೆಸಿ ಮಾಹಿತಿ ಸಂಗ್ರಹಿಸಿದೆ.

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ರಾಜ್ಯ ನಿರ್ದೇಶಕರಾದ ಕೆ.ಎಮ್ ಗಾಯತ್ರಿ ಅವರ ಅಧ್ಯಕ್ಷತೆಯಲ್ಲಿ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಅವರ ಉಪಸ್ಥಿತಿಯಲ್ಲಿ 7 ಮಂದಿಯ ಅಧ್ಯಯನ ಸಮಿತಿಯು ಜನವರಿ 19 ಮತ್ತು 20ರಂದು ಆಂಧ್ರ ಪ್ರದೇಶದ ರಾಜಧಾನಿ ಅಮರಾವತಿ ಹಾಗೂ ಎನ್ .ಟಿ. ಆರ್ ಜಿಲ್ಲೆಯ ವಿವಿಧ ಕಛೇರಿಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದೆ.

ಇದನ್ನು ಓದಿದ್ದೀರಾ? ಮಂಗಳೂರು | ಸೆ.20ರಂದು ತುಳು ಭವನದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲ ದಿನ ಅಧ್ಯಯನ ತಂಡವು ಸಚಿವಾಲಯದಲ್ಲಿ ಆಂಧ್ರ ಪ್ರದೇಶ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಾನಂದ ಅವರನ್ನು ಭೇಟಿ ನೀಡಿ ಸಮಾಲೋಚನೆ ನಡೆಸಿತು. ಆಂಧ್ರ ಪ್ರದೇಶದಲ್ಲಿ ಉರ್ದು ಭಾಷೆಯನ್ನು ರಾಜ್ಯದ ಹೆಚ್ಚುವರಿ ಭಾಷೆಯಾಗಿ ಘೋಷಣೆ ಮಾಡಿರುವುದರಿಂದ ಉರ್ದು ಭಾಷಾ ಬೆಳವಣಿಗೆ ಸಹಕಾರಿಯಾಗಿದೆ. ಕರ್ನಾಟಕದಲ್ಲಿ ತುಳು ಭಾಷೆಯನ್ನು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಿಸಲು ಉದ್ದೇಶಿಸಿರುವ ಕರ್ನಾಟಕ ರಾಜ್ಯ ಸರ್ಕಾರದ ನಿಲುವು ಅತ್ಯಂತ ಶ್ಲಾಘನೀಯವಾದುದು ಎಂದು ವಿಜಯಾನಂದ ಅವರು ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು. ವಿಧಾನ ಮಂಡಲದ ಸ್ಪೀಕರ್ ಕಛೇರಿ ಸೇರಿದಂತೆ ವಿವಿಧ ಕಛೇರಿಗಳಿಗೂ ಅಧ್ಯಯನ ತಂಡ ಭೇಟಿ ನೀಡಿ ಮಾಹಿತಿ ಪಡೆದಿದೆ.

tulu1
ಆಂಧ್ರಪ್ರದೇಶದ ಎನ್.ಟಿ.ಆರ್. ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಜಿ ಲಕ್ಷ್ಮೀಶ ಅವರೊಂದಿಗೆ ಅಧ್ಯಯನ ತಂಡ

ಆಂಧ್ರ ಪ್ರದೇಶ ಅಲ್ಪಸಂಖ್ಯಾಂತ ಇಲಾಖೆಯ ಕಾರ್ಯದರ್ಶಿಯವರನ್ನು, ಆಂಧ್ರ ಪ್ರದೇಶ ಉರ್ದು ಅಕಾಡೆಮಿಯ ಅಧ್ಯಕ್ಷರನ್ನು, ಆಂಧ್ರ ಉರ್ದು ಭಾಷಾ ಅಭಿವೃದ್ಧಿ ಮಂಡಳಿಯ ನಿರ್ದೇಶಕರನ್ನು ಕೂಡ ಭೇಟಿ ಮಾಡಿ ಆಂಧ್ರ ಪ್ರದೇಶದಲ್ಲಿ ಉರ್ದು ಭಾಷೆಯನ್ನು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡಿದ ಬಳಿಕದ ಅನುಷ್ಠಾನ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ಪಡೆದಿದೆ. ಅಧ್ಯಯನ ಸಮಿತಿಯ 2ನೇ ದಿನದ ಭೇಟಿಯಲ್ಲಿ ಅಮರಾವತಿ ಮಹಾನಗರ ಪಾಲಿಕೆಯ ವಲಯ ಕಮೀಷನರ್ , ಸ್ಥಳೀಯ ಪೋಲಿಸ್ ಠಾಣೆ, ಸ್ಥಳೀಯ ಉರ್ದು ಮಾಧ್ಯಮ ಶಾಲೆ, ಸ್ಥಳೀಯ ಆಂಗ್ಲ ಮಾಧ್ಯಮ ಶಾಲೆ, ಆಂಧ್ರ ಪ್ರದೇಶ ತೆಲುಗು ಭಾಷಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಹಾಗೂ ಎನ್ .ಟಿ .ಆರ್ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಜಿ. ಲಕ್ಷ್ಮೀಶ ಅವರನ್ನು ಭೇಟಿ ಮಾಡಿ ಮಾಹಿತಿ ಸಂಗ್ರಹಸಿದೆ.

ಇದನ್ನು ಓದಿದ್ದೀರಾ? ನುಡಿಯಂಗಳ | ಮಾತೃಭಾಷೆ ಎನ್ನಬೇಡಿ, ಕನ್ನಡವೆನ್ನಿ

ಉರ್ದು ಭಾಷೆಯನ್ನು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡಿರುವುದರಿಂದ ತೆಲುಗು ಭಾಷಾ ಅಭಿವೃದ್ಧಿಗೆ ಯಾವುದೇ ತೊಡಕುಗಳು ಆಗಿರುವುದಿಲ್ಲ ಎಂಬುದನ್ನು ತೆಲುಗು ಭಾಷಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತ್ರಿವಿಕ್ರಮ್ ರಾವ್ ಅವರು ಈ ಸಂದರ್ಭದಲ್ಲಿ ಅಧ್ಯಯನ ತಂಡಕ್ಕೆ ತಿಳಿಸಿದರು. ವಿವಿಧ ಇಲಾಖೆಗಳಿಗೆ ಭೇಟಿಯ ಸಂದರ್ಭದಲ್ಲಿ ತುಳು ಭಾಷೆಯ ಚಾರಿತ್ರಿಕ ಹಿನ್ನೆಲೆ, ಸಾಹಿತ್ಯಿಕ ಹಿನ್ನೆಲೆ, ಪರಂಪರೆ ಬಗ್ಗೆ ತುಳು ಅಕಾಡೆಮಿ ಅಧ್ಯಕ್ಷರಾದ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಸಮಿತಿಯ ಅಧ್ಯಯನ ವರದಿಯನ್ನು ಸರ್ಕಾರಕ್ಕೆ ತಂಡವು ಕೆಲವೇ ದಿನಗಳಲ್ಲಿ ಸಲ್ಲಿಸಲಿದೆ. ಅಧ್ಯಯನ ಸಮಿತಿಯಲ್ಲಿ ಕಾನೂನು ಇಲಾಖೆಯ ಉಪಕಾರ್ಯದರ್ಶಿ ವನಿತ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉಪಕಾರ್ಯದರ್ಶಿ ಮೂರ್ತಿ ಕೆ.ಎನ್ , ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಉಪಕಾರ್ಯದರ್ಶಿ ಶುಭಶ್ರಿ ಕೆ.ಎಮ್ , ಕರ್ನಾಟಕ ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಕರಿಯಪ್ಪ .ಎನ್, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಸುಧಾಕರ ಶೆಟ್ಟಿ, ಉಸ್ಮಾನಿಯಾ ವಿಶ್ವವಿದ್ಯಾನಿಲಯದ ಕಲಾ ನಿಲಯದ ಡೀನ್ ಪ್ರೊ.ಲಿಂಗಪ್ಪ ಗೋನಾಳ್ ಭಾಗವಹಿಸಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...