ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪ ವರ್ಗೀಕರಣಕ್ಕೆ ಸುಪ್ರೀಂ ಕೋರ್ಟ್‌ನ ಏಳು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠವು 6:1 ಬಹುಮತದೊಂದಿಗೆ ಅನುಮತಿ ನೀಡಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಮೂರು ದಿನಗಳ ವಿಚಾರಣೆಯ ನಂತರ ಈ ವರ್ಷ ಫೆಬ್ರವರಿ 8ರಂದು ತೀರ್ಪನ್ನು ಕಾಯ್ದಿರಿಸಿತ್ತು.
ಎಸ್‌ಸಿ-ಎಸ್‌ಟಿ ವರ್ಗಗಳಲ್ಲಿ ಹೆಚ್ಚು ಹಿಂದುಳಿದವರಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಅನುಮತಿಯಿದೆ ಎಂದು ಪೀಠ ಹೇಳಿದೆ. ನ್ಯಾಯಮೂರ್ತಿ ಬೇಲಾ ತ್ರಿವೇದಿ ಅನುಮತಿಗೆ ಅಸಮ್ಮತಿ ವ್ಯಕ್ತಪಡಿಸಿದ್ದಾರೆ.
ಇದನ್ನು ಒದಿದ್ದೀರಾ? ಎಸ್‌ಸಿ/ಎಸ್‌ಟಿ ಉಪ-ವರ್ಗೀಕರಣ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ತೀರ್ಪು
ಪಂಜಾಬ್‌ನ ಪರಿಶಿಷ್ಟ ಜಾತಿಗಳು ಮತ್ತು ಹಿಂದುಳಿದ ವರ್ಗಗಳ (ಸೇವೆಗಳಲ್ಲಿ ಮೀಸಲಾತಿ) ಕಾಯಿದೆ-2006 ರ ಸೆಕ್ಷನ್ 4 (5) ನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ರದ್ದುಗೊಳಿಸಿತ್ತು. ಹೈಕೋರ್ಟ್‌ನ ಈ 2010ರ ತೀರ್ಪನ್ನು ಪ್ರಶ್ನಿಸಿ ಪಂಜಾಬ್ ಸರ್ಕಾರ ಸಲ್ಲಿಸಿದ ಅರ್ಜಿ ಸೇರಿದಂತೆ ಒಟ್ಟು 23 ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ.
ಈ ಮೂಲಕ ಪಂಜಾಬ್‌ನ ಪರಿಶಿಷ್ಟ ಜಾತಿಗಳು ಮತ್ತು ಹಿಂದುಳಿದ ವರ್ಗಗಳಲ್ಲಿ ಉಪ ವರ್ಗೀಕರಣಕ್ಕೆ ರಾಜ್ಯಗಳ ಅಧಿಕಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ.
ಈ ಸೆಕ್ಷನ್ ವಾಲ್ಮೀಕಿಗಳು ಮತ್ತು ಮಝಬಿ ಸಿಖ್ ಜಾತಿಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಎಸ್‌ಸಿ ಕೋಟಾದಲ್ಲಿ ಶೇಕಡ 50ರಷ್ಟು ಮೀಸಲಾತಿಗೆ ಆದ್ಯತೆಯನ್ನು ನೀಡುತ್ತಿತ್ತು.
#BREAKING In a significant ruling, a 7-judge bench of the #SupremeCourt (by 6:1 majority) holds that sub-classification of Scheduled Castes/Scheduled Tribes is permissible to grant separate quotas for more backwards within the SC/ST categories.
— Live Law (@LiveLawIndia) August 1, 2024
Justice Bela Trivedi dissents.




