ತಲೆಗೆ ಗನ್ ಇಟ್ಟು ಬೆದರಿಸಿ, ಮಹಿಳಾ ಹೆಡ್ ಕಾನ್ಸ್‌ಟೇಬಲ್‌ ಮೇಲೆ ಎಸ್ಐ ಅತ್ಯಾಚಾರ

Date:

ಸಬ್‌ ಇನ್‌ಸ್ಪೆಕ್ಟರ್‌ ಒಬ್ಬ ಮಹಿಳಾ ಹೆಡ್‌ ಕಾನ್ಸ್‌ಟೇಬಲ್‌ ತಲೆಗೆ ಗನ್ ಇಟ್ಟು ಬೆದರಿಸಿ, ಅತ್ಯಾಚಾರವೆಸಗಿದ ಘಟನೆ ತೆಲಂಗಾಣದ ಭೂಪಲ್‌ಪಲ್ಲಿ ಜಿಲ್ಲೆಯಲ್ಲಿ ನಡೆದಿದೆ. ಆರೋಪಿ ಎಸ್‌ಐನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಎಸ್‌ಐ ಕಲೇಶ್ವರಂ ಪೊಲೀಸ್‌ ಠಾಣೆಯಲ್ಲಿ ಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿದ್ದು, ಹೆಡ್‌ ಕಾನ್ಸ್‌ಟೇಬಲ್‌ ಕೂಡ ಅದೇ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದರು. ಜೂನ್‌ 15ರಂದು ಯಾವುದೋ ಯೋಜನೆ ಸಲುವಾಗಿ ಚರ್ಚಿಸುವುದಾಗಿ ಹೇಳಿ ಅತಿಥಿ ಗೃಹದಲ್ಲಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯ ದೂರಿನ ಪ್ರಕಾರ, ಎಸ್‌ಐ ರಿವಾಲ್ವಾರ್‌ ಮೂಲಕ ಬೆದರಿಸಿ ಅತ್ಯಾಚಾರವೆಸಗಿದ್ದಾನೆ. ಈ ವಿಷಯದ ಬಗ್ಗೆ ಯಾರಿಗಾದರೂ ತಿಳಿಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೂಡ ಹೆದರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಂದೆಡೆ ವಂದೇ ಭಾರತ್- ಬುಲೆಟ್ ಟ್ರೇನ್ ವಿಲಾಸ; ಮತ್ತೊಂದೆಡೆ ಬಡವರ ಜೀವಗಳ ಅಪಹಾಸ

ಮಹಿಳೆಯ ತಲೆಗೆ ಗನ್‌ ಇಟ್ಟು ಬೆದರಿಸುವ ಮೂಲಕ ಎಸ್‌ಐ ಅತ್ಯಾಚಾರವೆಸಗಿರುವ ಬಗ್ಗೆ ದೂರು ದಾಖಲಾಗಿದೆ. ನಾವು ಪ್ರಕರಣಗಳ ಬಗ್ಗೆ ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮಹಿಳೆಯ ದೂರಿನ ಪ್ರಕಾರ ಎಸ್‌ಐ ಹಲವು ಬಾರಿ ಆಕೆಯನ್ನು ಹಿಂಬಾಲಿಸಿದ್ದಾನೆ. ದೂರಿನ ಆಧಾರದ ಮೇಲೆ ವಿವಿಧ ಐಪಿಸಿ ಸೆಕ್ಷನ್‌ಗಳ ಮೂಲಕ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...