‘ಸ್ವತಂತ್ರ ಭಾರತದ ಮೊದಲ ಪ್ರಧಾನಿ ಸುಭಾಶ್ಚಂದ್ರ ಬೋಸ್’ ಎಂದ ನಟಿ, ಬಿಜೆಪಿ ಅಭ್ಯರ್ಥಿ ಕಂಗನಾ: ವ್ಯಾಪಕ ಟ್ರೋಲ್

Date:

“1947ರಲ್ಲಿ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ. ಅದು ಭಿಕ್ಷೆ. ನಮಗೆ ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು 2014ರಲ್ಲಿ” ಎಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದ ಬಾಲಿವುಡ್‌ನ ನಟಿ, ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್‌, ಈಗ ಮತ್ತೊಮ್ಮೆ ವಿಚಿತ್ರ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ.

ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಾಲಿವುಡ್ ನಟಿ ಕಂಗನಾ ರಣಾವತ್ ಅವರನ್ನು ಬಿಜೆಪಿಯು ಇತ್ತೀಚೆಗೆ ಪಕ್ಷದ ಅಭ್ಯರ್ಥಿಯಾಗಿ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಕೆಲದಿನಗಳ ಹಿಂದೆ ‘ಟೈಮ್ಸ್ ನೌ’ ನ್ಯೂಸ್ ಚಾನೆಲ್ ಆಯೋಜಿಸಿದ್ದ ಸಮ್ಮಿಟ್‌ನಲ್ಲಿ ನಿರೂಪಕಿ ನವಿಕಾ ಕುಮಾ‌ರ್ ಅವರನ್ನು ಸಂದರ್ಶನ ನಡೆಸಿದ್ದರು.

ಈ ಸಂದರ್ಶನದಲ್ಲಿ ಕಂಗನಾ ರಣಾವತ್ ಅವರು, “ಸುಭಾಷ್ ಚಂದ್ರ ಬೋಸ್ ಅವರು ಸ್ವತಂತ್ರ ಭಾರತದ ಮೊದಲ ಪ್ರಧಾನಿ” ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯ ವಿಡಿಯೋ ಈಗ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ. ಅಲ್ಲದೇ, ವ್ಯಾಪಕ ಟ್ರೋಲ್‌ಗೂ ಕೂಡ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಂಗನಾ ತಪ್ಪಾಗಿ ಹೇಳಿದರೂ, ನಿರೂಪಕಿಯಾಗಿದ್ದ ನವಿಕಾ ಕುಮಾ‌ರ್ ಅವರಲ್ಲಿ, ಕಂಗನಾ ರಣಾವತ್ ಅವರನ್ನು ಸರಿಪಡಿಸಲು ಪ್ರಯತ್ನಿಸಲಿಲ್ಲ. ಆದರೆ, ಸುಭಾಷ್ ಚಂದ್ರ ಬೋಸ್ ಅವರು ಸ್ವತಂತ್ರ ಭಾರತದ ಮೊದಲ ಪ್ರಧಾನಿ ಅಲ್ಲ ಎಂದು ನವಿಕಾ ಹೇಳಿದಾಗ, ಕಂಗನಾ “ಹಾಗಾದರೆ ಅವರೇಕೆ ಪ್ರಧಾನಿಯಾಗಲಿಲ್ಲ?’ ಎಂದು ಮರು ಪ್ರಶ್ನಿಸಿದ್ದಾರೆ. ಕಂಗನಾರ ಈ ಸಂದರ್ಶನ ನಡೆದು ಒಂದು ವಾರದ ಬಳಿಕ ಈ ಹೇಳಿಕೆ ಸುದ್ದಿಯಾಗಿದೆ.

ಈ ವಿಡಿಯೋವನ್ನು ಕಾಂಗ್ರೆಸ್ ನಾಯಕ ಬಿ ವಿ ಶ್ರೀನಿವಾಸ್‌ ಅವರು, ‘ಹೇ ಪ್ರಭು’ ಎಂದು ಹೇಳಿ ಹಂಚಿಕೊಂಡಿದ್ದಾರೆ. ಅಲ್ಲದೇ ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್, ಬಹುಭಾಷಾ ನಟ ಪ್ರಕಾಶ್ ರಾಜ್  ಸೇರಿದಂತೆ ನೂರಾರು ಮಂದಿ ಇತರರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ನಟ ಪ್ರಕಾಶ್ ರಾಜ್ ಅವರು, “ಮಹಾಪ್ರಭುವಿನ ಆಸ್ಥಾನ ವಿದೂಷಕರು” ಎಂದು ಉಲ್ಲೇಖಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ಕಾಲೆಳೆದಿದ್ದಾರೆ.

ಅಲ್ಲದೇ, ಹಲವು ಮಂದಿ ನೆಟ್ಟಿಗರು ಈ ವಿಡಿಯೋವನ್ನು ಹಂಚಿಕೊಂಡು, ನಮ್ಮ ದೇಶಕ್ಕೆ ಒಬ್ಬ ಹೊಸ ಇತಿಹಾಸ ತಜ್ಞೆ ಸಿಕ್ಕಿದ್ದಾರೆ. ಇವರೇನಾದರೂ ಅಪ್ಪಿತಪ್ಪಿ ಗೆದ್ದು ಲೋಕಸಭೆಗೆ ಬಂದರೆ, ಇಂತಹ ಇನ್ನಷ್ಟು ಹೊಸ ಹೊಸ ಇತಿಹಾಸದ ಮಹತ್ವದ ಅಂಶಗಳು ತಿಳಿದು ಬರಲಿದೆ” ಎಂದು ಬರೆಯುವ ಮೂಲಕ ವ್ಯಾಪಕ ಟ್ರೋಲ್ ಮಾಡುತ್ತಿದ್ದಾರೆ.

ಹಿಮಾಚಲ ಪ್ರದೇಶದ ಮಂಡಿ ನಿವಾಸಿಯಾಗಿರುವ ನಟಿ ಕಂಗನಾಗೆ ಬಿಜೆಪಿ ಹೈಕಮಾಂಡ್ ಮಂಡಿ ಲೋಕಸಭಾ ಕ್ಷೇತ್ರದಿಂದಲೇ ಟಿಕೆಟ್ ನೀಡಿದೆ. ರಾಜಕೀಯದಲ್ಲಿ ಆಸಕ್ತಿ ಹೊಂದಿರುವುದಾಗಿ ತಿಳಿಸಿದ್ದ ಕಂಗನಾ, ಇಂತಹಾ ತಲೆಬುಡವಿಲ್ಲದ ಹೇಳಿಕೆಯಿಂದಲೇ ಸುದ್ದಿಯಾಗುತ್ತಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...