ಸುಭಾಷ್ ಚಂದ್ರ ಬೋಸ್ ಸೋದರ ಶರತ್ ಚಂದ್ರ ಬೋಸ್ ಪುತ್ರಿ ರೋಮಾ ರೇ ನಿಧನ

Date:

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಸೋದರ ಶರತ್ ಚಂದ್ರ ಬೋಸ್ ಅವರ ಪುತ್ರಿ ರೋಮಾ ರೇ (95) ಅವರು ದಕ್ಷಿಣ ಕೋಲ್ಕತ್ತದಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ನಿಧನರಾಗಿದ್ದಾರೆ. ಅವರಿಗೆ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ.

ರೋಮಾ ಅವರು 1930ರಿಂದ ತಮ್ಮ ದೊಡ್ಡಪ್ಪ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಹೋರಾಟದ ಹಾದಿಯನ್ನು ನೋಡಿಕೊಂಡೇ ಬೆಳೆದವರು. 1938ರಲ್ಲಿ ನೇತಾಜಿ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಅಧ್ಯಕ್ಷರಾಗಿದ್ದ ಸಂದರ್ಭದಲ್ಲೂ ರೋಮಾ ಅವರೊಂದಿಗೆ ಇದ್ದರು.

ರೋಮಾ ಅವರು ವಿಯೆನ್ನಾದಲ್ಲಿ ನೆಲೆಸಿದ್ದರು. ಅದೇ ಸ್ಥಳದಲ್ಲಿ ನೇತಾಜಿ ಅವರ ಪತ್ನಿ ಎಮಿಲಿ ಶೆಂಕ್ಸ್ ಕೂಡಾ ಇದ್ದರು. ಇವರಿಬ್ಬರೂ ಅತ್ಯಂತ ಆಪ್ತರಾಗಿದ್ದರು. 1996ರಲ್ಲಿ ಶೆಂಕ್ಸ್ ಅವರ ನಿಧನರಾದಾಗ ಅವರ ಕುರಿತು ಮಾತನಾಡಲು ರೋಮಾ ಅವರನ್ನು ಜರ್ಮನಿಗೆ ಆಹ್ವಾನಿಸಲಾಗಿತ್ತು. ರೋಮಾ ಅವರು ಹೆಸರಾಂತ ವೈದ್ಯ ಡಾ. ಸಚಿಸ್ ರೇ ಅವರನ್ನು ವರಿಸಿದ್ದರು ಎಂದು ಅವರ ಪುತ್ರ ಆಶಿಶ್ ರೇ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...