ರಾಹುಲ್ ದ್ರಾವಿಡ್‌ಗೆ ‘ಭಾರತ ರತ್ನ’ ನೀಡುವಂತೆ ಸರ್ಕಾರಕ್ಕೆ ಒತ್ತಾಯ

Date:

ಭಾರತೀಯ ಕ್ರಿಕೆಟ್‌ ತಂಡದ ಅತ್ಯುತ್ತಮ ಆಟಗಾರ ರಾಹುಲ್ ದ್ರಾವಿಡ್ ಅವರಿಗೆ ಭಾರತದ ಅತ್ಯುನ್ನತ ಪ್ರಶಸ್ತಿ ‘ಭಾರತ ರತ್ನ’ ನೀಡಬೇಕೆಂದು ಟೀಮ್ ಇಂಡಿಯಾದ ಲೆಜೆಂಡರಿ ಬ್ಯಾಟರ್ ಸುನಿಲ್ ಗವಾಸ್ಕರ್ ಒತ್ತಾಯಿಸಿದ್ದಾರೆ.

ವೆಸ್ಟ್‌ ಇಂಡೀಸ್‌ನಲ್ಲಿ ನೆಡದ 2024ರ ಟಿ-20 ವಿಶ್ವಕಪ್‌ನಲ್ಲಿ ಭಾರತೀಯ ಕ್ರಿಕೆಟ್‌ ತಂಡವು ಜಯ ಗಳಿಸಿದೆ. ಇದೇ ವೇಳೆ, ತಂಡ ಮುಖ್ಯ ಕೋಚ್‌ ಆಗಿ ದ್ರಾವಿಡ್ ಅವರ ಅಧಿಕಾರವಾಧಿ ಕೊನೆಗೊಂಡಿದೆ. ಈ ಬೆನ್ನಲ್ಲೇ ಮಾತನಾಡಿರುವ ಸುನಿಲ್ ಗವಾಸ್ಕರ್, ‘ಭಾರತ ರತ್ನಕ್ಕೆ ದ್ರಾವಿಡ್ ಅರ್ಹರಾಗಿದ್ದಾರೆ’ ಎಂದು ಹೇಳಿದ್ದಾರೆ.

ದ್ರಾವಿಡ್ ಅವರ ಕೋಚಿಂಗ್ ಅವಧಿಯಲ್ಲಿ, ಭಾರತವು 2023ರ ಪುರುಷರ ಒನ್‌ಡೇ ವಿಶ್ವಕಪ್ ಮತ್ತು 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ – ಎರಡಲ್ಲೂ ರನ್ನರ್-ಅಪ್ ಆಗಿ ಸ್ಥಾನ ಪಡೆದಿದ್ದು, ಸೇರಿದಂತೆ ಗಮನಾರ್ಹ ಮೈಲಿಗಲ್ಲು ಸಾಧಿಸಿದೆ. ಅಲ್ಲದೆ, 2023ರ ಏಷ್ಯಾ ಕಪ್‌ಅನ್ನು ತಂಡವು ಗೆದ್ದುಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದ್ರಾವಿಡ್‌ ಅವರು ಭಾರತೀಯ ಕ್ರಿಕೆಟ್‌ಗೆ ಆಟಗಾರನಾಗಿ ತಮ್ಮ ವೃತ್ತಿಜೀವನದ ಅವಧಿಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 24,177 ರನ್‌ಗಳಷ್ಟು ಭರ್ಜರಿ ಮೊತ್ತವನ್ನು ಕಲೆಹಾಕಿದ್ದರು. ಅಲ್ಲದೆ, ಮುಖ್ಯ ತರಬೇತುದಾರನಾಗಿ ಗಣನೀಯ ಕೊಡುಗೆಗಳನ್ನು ನೀಡಿದ್ದಾರೆ. ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (NCA) ಕ್ರಿಕೆಟ್‌ನ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದಾರೆ. 2018ರ U19 ವಿಶ್ವಕಪ್‌ನಲ್ಲಿ ಅವರ ಮುಖ್ಯ ತರಬೇತುದಾರರಾಗಿ ಭಾರತೀಯ U19 ತಂಡ ವಿಜಯ ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ವರದಿ ಓದಿದ್ದೀರಾ?: ಒಂದು ಅವಲೋಕನ | ದಕ್ಷಿಣ ಆಫ್ರಿಕಾ ಕ್ರಿಕೆಟ್ ನೆಪದಲ್ಲಿ ಕರಾಳ ಇತಿಹಾಸ ಮತ್ತು ಮಂಡೇಲಾ ಉದಾತ್ತತೆ

“ಭಾರತ ಸರ್ಕಾರವು ಅವರಿಗೆ ‘ಭಾರತ ರತ್ನ’ ನೀಡಿ ಗೌರವಿಸುವುದು ಸೂಕ್ತ. ಆ ಗೌರವಕ್ಕೆ ಅವರು ನಿಜಕ್ಕೂ ಅರ್ಹರಾಗಿದ್ದಾರೆ. ಇಂಗ್ಲೆಂಡ್‌ನಲ್ಲಿ ಟೆಸ್ಟ್ ಪಂದ್ಯಗಳ ಸರಣಿಯನ್ನು ಗೆದ್ದ ಮೂವರು ಭಾರತೀಯ ನಾಯಕರಲ್ಲಿ ದ್ರಾವಡ್‌ ಕೂಡ ಒಬ್ಬರಾಗಿದ್ದಾರೆ. ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷರಾಗಿ ಮತ್ತು ನಂತರ ಭಾರತೀಯ ತಂಡದ ತರಬೇತುದಾರರಾಗಿ ಅದ್ಭುತ ಪಾತ್ರ ನಿರ್ವಹಿಸಿದ್ದಾರೆ” ಎಂದು ಗವಾಸ್ಕರ್ ಹೇಳಿದ್ದಾರೆ.

“ದ್ರಾವಿಡ್ ಅವರ ಸಾಧನೆಗಳು ಎಲ್ಲ ಪಕ್ಷಗಳು, ಜಾತಿ, ಮತ, ಸಮುದಾಯಗಳನ್ನು ಮೀರಿ ಸಂತೋಷವನ್ನು ನೀಡಿವೆ. ಅವರ ಸಾಧನೆಗಳು ಅತ್ಯುನ್ನತ ಪುರಸ್ಕಾರಕ್ಕೆ ಅರ್ಹವಾಗಿದೆ. ಎಲ್ಲರೂ ನನ್ನೊಂದಿಗೆ ಕೈಜೋಡಿಸಿ, ದ್ರಾವಿಡ್‌ಗೆ ಭಾರತದ ಶ್ರೇಷ್ಠ ಪ್ರಶಸ್ತಿ ನೀಡುವಂತೆ ಒತ್ತಾಯಿಸಲು ಜೊತೆಗೂಡಿ” ಎಂದು ಗವಾಸ್ಕರ್ ಕರೆಕೊಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...