ಮೂಢನಂಬಿಕೆ | ತನ್ನ ಒಂದೂವರೆ ವರ್ಷದ ಮಗುವನ್ನು ಬಲಿ ಕೊಟ್ಟು, ಲಿವರ್‌ ತಿಂದ ತಾಯಿ

Date:

ಮೂಢನಂಬಿಕೆ ವಿರುದ್ಧ ಜಾಗೃತಿ ಕಾರ್ಯಕ್ರಮ, ಅಭಿಯಾನಗಳು ನಡೆಯುತ್ತಲೇ ಇವೆ. ಆದರೂ, ಮೌಢ್ಯಕ್ಕೆ ಕಡಿವಾಣ ಬಿದ್ದಿಲ್ಲ. ಮಾಟಮಂತ್ರಗಳಂತಹ ಅಪಾಯಕಾರಿ ಮೂಢನಂಬಿಕೆಗೆ ಜನರು ಬಲಿಯಾಗುತ್ತಲೇ ಇದ್ದಾರೆ. ಅಂತದ್ದೇ ಆಘಾತಕಾರಿ ಘಟನೆಯಲ್ಲಿ, ಮಹಿಳೆಯೊಬ್ಬರು ತನ್ನ ಒಂದೂವರೆ ವರ್ಷದ ಮಗಳನ್ನು ‘ಬಲಿ’ ಕೊಟ್ಟು, ಆಕೆಯ ದೇಹವನ್ನು ಕತ್ತರಿಸಿ, ಪ್ರಸಾದವೆಂದು ಮಗುವಿನ ಲಿವರ್ (ಯಕೃತ್ತು)ಅನ್ನು ತಿಂದಿರುವ ದುರ್ಘಟನೆ ಜಾರ್ಖಂಡ್‌ನ ಪಲಾಮುದಲ್ಲಿ ನಡೆದಿದೆ. ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಪಲಾಮು ಜಿಲ್ಲೆಯ ಖಾರದ್ ಗ್ರಾಮದ ನಿವಾಸಿ ಗೀತಾ ದೇವಿ ಎಂಬಾಕೆಯನ್ನು ‘ನರಬಲಿ’ಯ ಭಾಗವಾಗಿ ತನ್ನ ಸ್ವಂತ ಮಗಳನ್ನೇ ಕೊಂದಿದ್ದಾರೆ. ಆಕೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿ, ದೇವರ ಮುಂದಿಟ್ಟು, ಯಕೃತ್ತನ್ನು ತಿದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹುಸೇನಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಮಹಿಳೆಯು ತನ್ನ ಅಪರಾಧವನ್ನು ಒಪ್ಪಿಕೊಂಡಿದ್ದಾರೆ. “ಆರೋಪಿ ಮಹಳೆ ಹತ್ತಿರದ ಮಾರುಕಟ್ಟೆಗೆ ಹೋಗಿ ಬಳೆಗಳು, ಬಟ್ಟೆಗಳು ಮತ್ತು ಪೂಜೆಗೆ ಬೇಕಾದ ವಸ್ತುಗಳನ್ನು ಖರೀದಿಸಿದ್ದಾರೆ. ಸಂಜೆ ವೇಳೆಗೆ, ತನ್ನ ಒಂದೂವರೆ ವರ್ಷದ ಮಗಳನ್ನು ತನ್ನ ಮನೆಯಿಂದ 1-2 ಕಿ.ಮೀ ದೂರದಲ್ಲಿರುವ ಸಿಕ್ನಿ ಬರ್ವಧೋರಾ ಕಾಡಿಗೆ ಕರೆದೊಯ್ದಿದ್ದಾಳೆ. ಅಲ್ಲಿ, ತನ್ನ ಮತ್ತು ಮಗುವಿನ ಬಟ್ಟೆಗಳನ್ನು ತೆಗೆದು, ಪೂಜೆ ಮಾಡಿದ್ದಾರೆ. ಬಳಿಕ, ಚಾಕುವಿನಿಂದ ಮಗುವಿನ ಕತ್ತು ಸೀಳಿ ಕೊಂದಿದ್ದಾಳೆ. ಬಲಿಯ ಪ್ರಸಾದವಾಗಿ ಮಗುವಿನ ಯಕೃತ್ತನ್ನು ತಿಂದಿದ್ದಾಳೆ” ಎಂದು ತನಿಖೆ ನಡೆಸಿರುವ ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮನೆಗೆ ತೆರಳಿದ ಮಹಿಳೆಯನ್ನು ಅಕೆಯ ಅತ್ತೆ ಗಮನಿಸಿದ್ದು, ಮಗುವಿನ ಬಗ್ಗೆ ವಿಚಾರಿಸಿದ್ದಾರೆ. ಮಹಿಳೆಯು ಮಗುವನ್ನು ಕೊಂದಿರುವುದಾಗಿ ಕೇಳಿದ್ದಾಳೆ. ಆತಂಕಗೊಂಡ ಮಹಿಳೆಯ ಅತ್ತೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.

ವಿಚಾರಣೆ ವೇಳೆ ಮಹಳೆಯು ತಾನು ಮಾಟ-ಮಂತ್ರವನ್ನು ಕಲಿತಿರುವುದಾಗಿ ಹೇಳಿಕೊಂಡಿದ್ದಾಳೆ. ತನ್ನ ಮಗಳು ಅಥವಾ ಗಂಡನನ್ನು ಬಲಿ ಕೊಟ್ಟರೆ, ಪವಾಡದ ಮಂತ್ರ ಕಲಿಯುವಲ್ಲಿ ಯಶಸ್ಸಾಗಬಹುದು ಎಂದು ಆಕೆ ನಂಬಿದ್ದಳು. ಅದಕ್ಕಾಗಿ, ಮಗುವನ್ನು ಬಲಿಕೊಟ್ಟಿರುವುದಾಗಿ ಒಪ್ಪಿಕೊಂಡಿದ್ದಾಳೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...