ಮತದಾರರಿಗೆ ಗುರುತಿನ ಚೀಟಿ: ಸುಪ್ರೀಂ ಪ್ರಶ್ನೆಗೆ ಅಪಾಯದ ಕೆಲಸ ಎಂದ ಚುನಾವಣಾ ಆಯೋಗ

Date:

ಮುಕ್ತ ಹಾಗೂ ನ್ಯಾಯ ಸಮ್ಮತ ಮತದಾನ ನಡೆಸಲು ಚುನಾವಣೆ ಪ್ರಕ್ರಿಯೆಯಲ್ಲಿ ಪಾವಿತ್ರತೆ ಹೊಂದಿರಬೇಕು ಎಂದು ಚುನಾವಣಾ ಆಯೋಗ ಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

“ಇದೊಂದು ಚುನಾವಣಾ ಪ್ರಕ್ರಿಯೆ. ಇಲ್ಲಿ ಪಾವಿತ್ರ್ಯತೆ ಇರಬೇಕು. ಇಲ್ಲಿ ಏನೋ ನಡೆಯುತ್ತಿದೆ ಎಂಬ ಆತಂಕ ಯಾರೊಬ್ಬರಿಗೂ ಅನಿಸಬಾರದು” ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್‌ ದತ್ತಾ ನೇತೃತ್ವದ ಪೀಠ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿತು.

ಇವಿಎಂಗಳಲ್ಲಿ ಮತದಾನ ಮಾಡುವ ಸಂದರ್ಭದಲ್ಲಿ ವಿವಿಪ್ಯಾಟ್ ಮೂಲಕ ಗುರುತಿನ ಚೀಟಿ ನೀಡುವ ಅರ್ಜಿಗಳ ವಿಚಾರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಚುನಾವಣಾ ಆಯೋಗದ ಹಿರಿಯ ನ್ಯಾಯವಾದಿ ಮಣೀಂದರ್ ಸಿಂಗ್ ಹಾಗೂ ಚುನಾವಣಾ ಅಧಿಕಾರಿಗಳು ನ್ಯಾಯಾಲಯ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಅಹಮಿಕೆಯೇ ಬಿಜೆಪಿ ಪ್ರಣಾಳಿಕೆ- ಬಡಜನತೆಯ ಕಷ್ಟ ಕಣ್ಣೀರು ಲೆಕ್ಕಕ್ಕಿಲ್ಲ

ಮತದಾರರು ತಮ್ಮ ಮತದಾನದ ನಂತರ ಗುರುತಿನ ಚೀಟಿ ಪಡೆಯುವ ಸಾಧ್ಯತೆ ಇದೆಯೆ ಎಂದು ನ್ಯಾಯಾಲಯವು ಚುನಾವಣಾ ಆಯೋಗವನ್ನು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ಆಯೋಗದ ಪರ ವಕೀಲರು ಮತದಾನದ ನಂತರ ಗುರುತಿನ ಚೀಟಿ ನೀಡಿದರೆ ಮತದ ಗೌಪ್ಯತೆಗೆ ಧಕ್ಕೆ ತರುತ್ತದೆಯಲ್ಲದೆ ಮತಗಟ್ಟೆಯ ಹೊರಗೆ ಇದು ದುರ್ಬಳಕೆಯಾಗುವ ಸಾಧ್ಯತೆಯಿದೆ. ಅಲ್ಲದೆ ಗುರುತಿನ ಚೀಟಿಯನ್ನು ಇತರರು ಹೇಗೆ ಬಳಸುತ್ತಾರೆ ಎಂಬುದನ್ನು ನಾವು ಹೇಳಲು ಸಾಧ್ಯವಿಲ್ಲ. ಎಣಿಕೆ ಪ್ರಕ್ರಿಯೆಯಲ್ಲೂ ಹಲವು ಸಮಸ್ಯೆಗಳಾಗುತ್ತವೆ ಎಂದು ಉತ್ತರ ನೀಡಿದರು.

ಮತದಾನದ ಪ್ರಕ್ರಿಯೆಯಲ್ಲಿ ಇವಿಎಂನಲ್ಲಿ ಮತದಾರರು ಮತ ಚಲಾಯಿಸಿದ ನಂತರ ವಿವಿಪ್ಯಾಟ್‌ನಲ್ಲಿ ಮತಚೀಟಿಯ ಚಿಹ್ನೆ ಕಾಣಿಸಿಕೊಳ್ಳುತ್ತದೆ. ಈ ಯಂತ್ರಗಳನ್ನು ಇಂಜಿನಿಯರ್‌ಗಳ ಉಪಸ್ಥಿತಿಯಲ್ಲಿ ಮತದಾನಕ್ಕೂ ಮುನ್ನ ಪರಿಶೀಲಿಸಲಾಗುತ್ತದೆ ಎಂದು ಆಯೋಗದ ವಕೀಲರು ಸುಪ್ರೀಂ ಕೋರ್ಟ್‌ ಕೇಳಿದ ಪ್ರಶ್ನೆಗೆ ಉತ್ತರಿಸಿದರು.

ಅರ್ಜಿದಾರರು ಹೇಳಿದಂತೆ ನಾವು ಯಾವುದನ್ನು ಮುಚ್ಚಿಡುತ್ತಿಲ್ಲ ಎಂದು ಆಯೋಗದ ಪರ ವಕೀಲರು ಕೋರ್ಟ್‌ಗೆ ಮನವರಿಕೆ ಮಾಡಿದರು.

ಮತದಾರರ ನಂಬಿಕೆಯಂತೆ ನಿರ್ವಹಿಸಬೇಕು ಹಾಗೂ ಸುರಕ್ಷಿತಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶಿಸಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...