ಜ್ಞಾನವಾಪಿ ಮಸೀದಿ ಪ್ರಕರಣ; ಶಿವಲಿಂಗದ ವೈಜ್ಞಾನಿಕ ಸಮೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

Date:

ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಪತ್ತೆಯಾಗಿರುವ ಶಿವಲಿಂಗದ ರೀತಿಯಲ್ಲಿರುವ ಆಕೃತಿಯನ್ನು ಭಾರತೀಯ ಪುರಾತತ್ವ ಇಲಾಖೆಯ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಬನ್ ಡೇಟಿಂಗ್‌ ಸಹಿತ ವೈಜ್ಞಾನಿಕ ಸಮೀಕ್ಷೆ ನಡೆಸುವಂತೆ ನೀಡಿದ್ದ ಅಲಹಬಾದ್‌ ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಶುಕ್ರವಾರ ತಡೆ ನೀಡಿದೆ. ಜ್ಞಾನವಾಪಿ ಮಸೀದಿ ಆಡಳಿತ ಸಮಿತಿಯ ಮೇಲ್ಮನವಿಯ ಮೇರೆಗೆ ಈ ಆದೇಶ ನೀಡಲಾಗಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್‌ ನರಸಿಂಹ ಹಾಗೂ ಜೆ ಬಿ ಪರ್ದಿವಾಲಾ ಪೀಠದ ಮುಂದೆ ಜ್ಞಾನವಾಪಿ ಮಸೀದಿ ವ್ಯವಸ್ಥಾಪಕ ಸಮಿತಿ ಮೇಲ್ಮನವಿ ಅರ್ಜಿಯನ್ನು ಸಲ್ಲಿಕೆ ಮಾಡಿತ್ತು. ಭಾರತೀಯ ಪುರಾತತ್ವ ಸಮೀಕ್ಷೆ ಅಧಿಕಾರಿಗಳ ಮೂಲಕ ಅದು ಶಿವಲಿಂಗ ಹೌದೋ ಅಲ್ಲವೋ, ಹಾಗೇನಾದರೂ ಶಿವಲಿಂಗವೇ ಆಗಿದ್ದಲ್ಲಿ ಅದು ಎಷ್ಟು ವರ್ಷ ಹಳೆಯದು ಎನ್ನುವ ಮಾಹಿತಿಯನ್ನು ವೈಜ್ಞಾನಿಕ ತನಿಖೆ ಮಾಡಿ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್‌ ಆದೇಶ ನೀಡಿತ್ತು.

ಶಿವಲಿಂಗದ ವೈಜ್ಞಾನಿಕ ಸಮೀಕ್ಷೆಯನ್ನು ಅನುಮತಿಸಿದ ಅಲಹಾಬಾದ್ ಹೈಕೋರ್ಟ್ ಆದೇಶದ ಪರಿಣಾಮಗಳಿಂದಾಗಿ, ಆದೇಶದಲ್ಲಿ ಸಂಬಂಧಿಸಿದ ನಿರ್ದೇಶನಗಳ ಅನುಷ್ಠಾನವನ್ನು ಮುಂದಿನ ದಿನಾಂಕದವರೆಗೆ ಮುಂದೂಡಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅಲ್ಲದೆ ಈ ವಿಚಾರದಲ್ಲಿ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕಿದೆ ಎಂದು ಕೋರ್ಟ್ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕರ್ನಾಟಕದ ಚುನಾವಣಾ ಫಲಿತಾಂಶ : ‘ಬಿಜೆಪಿ ಮುಕ್ತ ದಕ್ಷಿಣ ಭಾರತ’ದ ಮುನ್ಸೂಚನೆಯೇ?

ಜ್ಞಾನವಾಪಿ ಮಸೀದಿ ಆವರಣದಲ್ಲಿ ದೊರೆತಿರುವ ಶಿವಲಿಂಗದ ಕಾರ್ಬನ್‌ ಡೇಟಿಂಗ್‌ನೊಂದಿಗೆ ವೈಜ್ಞಾನಿಕ ಸರ್ವೆಯನ್ನು ಮಾಡಬೇಕು ಎಂದು ಅಲಹಾಬಾದ್‌ ಹೈಕೋರ್ಟ್‌ ಆದೇಶ ನೀಡಿತ್ತು. ಕಳೆದ ವರ್ಷ ಇಡೀ ಮಸೀದಿಯ ವಿಡಿಯೋಗ್ರಫಿ ಸರ್ವೇ ಮಾಡುವ ವೇಳೆ ಜ್ಞಾನವಾಪಿ ಸಮೀದಿಯ ಆವರಣದಲ್ಲಿ ಶಿವಲಿಂಗ ಪತ್ತೆಯಾಗಿತ್ತು. ಇದನ್ನು ಮುಸ್ಲಿಂ ಸಮುದಾಯ ವಜುಕಾನಾದ ರೀತಿಯಲ್ಲಿ ಬಳಸಿಕೊಳ್ಳುತ್ತಿದ್ದರು. ಸರ್ವೆಯ ವಿಡಿಯೋಗಳನ್ನು ನೋಡಿದ ಬಳಿಕ ಹಿಂದು ಸಮುದಾಯದವರು ಇದು ಶಿವಲಿಂಗ ಎಂದು ಹೇಳಿದ್ದರೆ, ಮುಸ್ಲಿಮರು ಇದನ್ನು ಕಾರಂಜಿ ಎಂದಿದ್ದರು.

ವಜುಕಾನಾ ಎನ್ನುವುದು ಮುಸ್ಲಿಮರು ಮಸೀದಿ ಪ್ರವೇಶಿಸುವ ಮುನ್ನ ಕೈಕಾಲುಗಳನ್ನ ಸ್ವಚ್ಛಗೊಳಿಸುವ ಸ್ಥಳವಾಗಿದೆ. ಕಾಶಿ ವಿಶ್ವನಾಥ ದೇವಸ್ಥಾನದ ಸಮೀಪದಲ್ಲಿಯೇ ಇರುವ ಮಸೀದಿಯ ಆವರಣದ ಸಂಪೂರ್ಣ ವಿಡಿಯೋಗ್ರಫಿ ಸರ್ವೇ ಮಾಡಬೇಕು ಎಂದು ಕೋರ್ಟ್‌ ಸೂಚನೆ ನೀಡಿದ ಬಳಿಕ, ಕಳೆದ ವರ್ಷದ ಮೇ 16 ರಂದು ಇಲ್ಲಿ ಶಿವಲಿಂಗ ಇರುವ ಬಗ್ಗೆ ಪತ್ತೆಯಾಗಿತ್ತು.

ಇದಕ್ಕೂ ಮುನ್ನ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ವಾರಾಣಸಿ ಜಿಲ್ಲಾ ಕೋರ್ಟ್‌, ಕಾರ್ಬನ್‌ ಡೇಟಿಂಗ್‌ ಸೇರಿದಂತೆ ಶಿವಲಿಂಗದ ವೈಜ್ಞಾನಿಕ ತನಿಖೆಯನ್ನು ಮಾಡುವ ಅರ್ಜಿಯನ್ನು ತಿರಸ್ಕರಿಸಿತ್ತು. ಆಗಸ್ಟ್ 2021 ರಲ್ಲಿ ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ, ವಾರಾಣಸಿ ನ್ಯಾಯಾಲಯವು ವಕೀಲ ಕಮಿಷನರ್ ಅನ್ನು ನೇಮಿಸಿತು ಮತ್ತು ಸಂಕೀರ್ಣದ ವಿಡಿಯೋಗ್ರಫಿ ಸಮೀಕ್ಷೆಗೆ ಸಹ ಆದೇಶಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...