ಆದ್ಯತೆಯ ಆಧಾರದ ಮೇಲೆ ಪೋಕ್ಸೋ ನ್ಯಾಯಾಲಯಗಳನ್ನು ಸ್ಥಾಪಿಸಿ: ಕೇಂದ್ರಕ್ಕೆ ಸುಪ್ರೀಂ ಆದೇಶ

Date:

ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ಪ್ರಕರಣಗಳನ್ನು ಪ್ರತ್ಯೇಕವಾಗಿ ನಿರ್ವಹಿಸಲು ಅತ್ಯಂತ ಆದ್ಯತೆಯ ಆಧಾರದ ಮೇಲೆ ಪೋಕ್ಸೋ ನ್ಯಾಯಾಲಯಗಳನ್ನು ಸ್ಥಾಪಿಸಲು ಸುಪ್ರೀಂ ಕೋರ್ಟ್ ಗುರುವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯ ಅಡಿಯ ಪ್ರಕರಣಗಳಿಗಾಗಿ ವಿಶೇಷ ನ್ಯಾಯಾಲಯಗಳ ಸಂಖ್ಯೆಯ ಕೊರತೆಯಿಂದಾಗಿ, ಕಾನೂನಿನಡಿಯಲ್ಲಿ ಕಡ್ಡಾಯವಾಗಿ ನಿಗದಿಪಡಿಸಿರುವ ಸಮಯದ ಒಳಗೆ ಪ್ರಕರಣಗಳ ವಿಚಾರಣೆಯನ್ನು ಪೂರ್ಣಗೊಳಿಸಲು ಸಾಧ್ಯವಾಗಿಲ್ಲ ಎಂದು ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಪಿ.ಬಿ. ವರಾಳೆ ಅವರ ಪೀಠ ಹೇಳಿದೆ.

‘ಆದ್ದರಿಂದ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೊಕ್ಸೊ ಪ್ರಕರಣಗಳ ತನಿಖೆಗೆ ಸಂಬಂಧಿಸಿದ ಅಧಿಕಾರಿಗಳನ್ನು ಸಂವೇದನಾಶೀಲರನ್ನಾಗಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಪೋಕ್ಸೋ ಪ್ರಕರಣಗಳ ವಿಚಾರಣೆ ನಡೆಸಲು ಆದ್ಯತೆಯ ಆಧಾರದ ಮೇಲೆ ನ್ಯಾಯಾಲಯಗಳನ್ನು ಸ್ಥಾಪಿಸಬೇಕು ಎಂದು ನಿರೀಕ್ಷಿಸಲಾಗಿದೆ’ ಎಂದು ಪೀಠ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಗದಿತ ಸಮಯದೊಳಗೆ ವಿಚಾರಣೆಗಳನ್ನು ಪೂರ್ಣಗೊಳಿಸುವುದರ ಜೊತೆಗೆ ಕಾನೂನಿನಲ್ಲಿ ನಿಗದಿಪಡಿಸಿದ ಕಡ್ಡಾಯ ಅವಧಿಯೊಳಗೆ ಆರೋಪಪಟ್ಟಿಗಳನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ತಿರಂಗಾ ಯಾತ್ರೆ, ಸೈನಿಕರ ನಿಂದನೆ ಮತ್ತು ದೇಶಭಕ್ತಿ

ಕೇಂದ್ರದ ನಿಧಿಯಿಂದ ಪೋಕ್ಸೋ ಪ್ರಕರಣಗಳಿಗೆ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುವ ನಿರ್ದೇಶನಗಳನ್ನು ಬಹುತೇಕ ರಾಜ್ಯಗಳು ಪಾಲಿಸಿವೆ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ. ತಮಿಳುನಾಡು, ಬಿಹಾರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಒಡಿಶಾ, ಮಹಾರಾಷ್ಟ್ರ ಮತ್ತು ಇತರ ಕೆಲವು ರಾಜ್ಯಗಳಲ್ಲಿ ಇಂತಹ ಪ್ರಕರಣಗಳು ಬಾಕಿ ಇರುವುದರಿಂದ ಹೆಚ್ಚಿನ ಪೋಕ್ಸೋ ನಾಯಾಲಯಗಳು ಅಗತ್ಯವಿದೆ ಎಂದಿದೆ.

ಪೋಕ್ಸೋ ನ್ಯಾಯಾಲಯಗಳ ಸ್ಥಿತಿಗತಿಯ ಕುರಿತು ರಾಜ್ಯವಾರು ವಿವರಗಳನ್ನು ಸಲ್ಲಿಸುವಂತೆ ಹಿರಿಯ ವಕೀಲ ಮತ್ತು ಅಮಿಕಸ್‌ ಕ್ಯೂರಿ ವಿ ಗಿರಿ ಹಾಗೂ ಹಿರಿಯ ವಕೀಲೆ ಉತ್ತರಾ ಬಬ್ಬರ್ ಅವರಿಗೆ ಸುಪ್ರೀಂ ಕೋರ್ಟ್ ಈ ಹಿಂದೆ ಸೂಚಿಸಿದೆ

ಮಕ್ಕಳ ಅತ್ಯಾಚಾರ ಪ್ರಕರಣಗಳ ಸಂಖ್ಯೆಯಲ್ಲಿ ಆತಂಕಕಾರಿ ಏರಿಕೆ ಕುರಿತ ವರದಿಗಳ ಬಗ್ಗೆ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿತು.

ಪೋಕ್ಸೋ ಕಾಯ್ದೆಯಡಿಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು 300ಕ್ಕಿಂತ ಹೆಚ್ಚು ಬಾಕಿ ಇರುವ ಜಿಲ್ಲೆಗಳಲ್ಲಿ ಎರಡು ನಿಯೋಜಿತ ನ್ಯಾಯಾಲಯಗಳನ್ನು ಸ್ಥಾಪಿಸಲು ಸುಪ್ರೀಂ ಕೋರ್ಟ್ ರಾಜ್ಯಗಳಿಗೆ ಸೂಚಿಸಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...