ಬಿಹಾರ ಮತಪಟ್ಟಿಯಲ್ಲಿ ಕೈಬಿಟ್ಟ 65 ಲಕ್ಷ ಮತದಾರರ ಹೆಸರು – ಕಾರಣ ಬಹಿರಂಗಪಡಿಸಿ: ಚು.ಆಯೋಗಕ್ಕೆ ಸುಪ್ರೀಂ ನಿರ್ದೇಶನ

Date:

ಭಾರತದಲ್ಲಿ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಪ್ರಜೆಗೂ ಮತದಾನದ ಶಾಸನಬದ್ಧ ಹಕ್ಕನ್ನು ಸಂವಿಧಾನ ನೀಡಿದೆ. ಆದರೆ, ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ನಡೆಸಿರುವ ಚುನಾವಣಾ ಆಯೋಗವು ಬರೋಬ್ಬರಿ 65 ಲಕ್ಷ ಮತದಾರರನ್ನು ಮತಪಟ್ಟಿಯಿಂದ ಕೈಬಿಟ್ಟಿದೆ. ಆದರೆ, ಕಾರಣಗಳನ್ನು ನೀಡಿಲ್ಲ. ಮಾತ್ರವಲ್ಲದೆ, ಕೈಬಿಡಲಾದ ಮತದಾರರ ಹೆಸರುಗಳನ್ನು ಬಹಿರಂಗಗೊಳಿಸಿಲ್ಲ. ಪಟ್ಟಿಯಿಂದ ಹೊರಹಾಕಲಾದವರ ಹೆಸರನ್ನು ರಹಸ್ಯವಾಗಿ ಇಟ್ಟಿರುವ ಚುನಾವಣಾ ಆಯೋಗವನ್ನು ಸುಪ್ರೀಂ ಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಪಟ್ಟಿಯಿಂದ ತೆಗೆದು ಹಾಕಲಾದ 65 ಲಕ್ಷ ಮತದಾರರ ಹೆಸರು ಮತ್ತು ಕಾರಣಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಸಾರ್ವಜನಿಕವಾಗಿ ಅಪ್‌ಲೋಡ್ ಮಾಡುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ.

ವಿಚಾರಣೆ ವೇಳೆ ವಾದ ಮಂಡಿಸಿದ ಆಯೋಗವು, ಮತದಾರರ ಪಟ್ಟಿಯಿಂದ ಕಿತ್ತುಹಾಕಲಾದ ಮತದಾರರ ವಿವರಗಳನ್ನು ಬಹಿರಂಗಪಡಿಸಬೇಕು ಎಂಬ ಯಾವುದೇ ಕಾನೂನು ನಿಯಮವಿಲ್ಲ ವಾದಿಸಿದೆ. ಈ ವಾದವನ್ನು ತಳ್ಳಿಹಾಕಿದ ಸುಪ್ರೀಂ ಕೋರ್ಟ್‌, “ಮತದಾರರ ಪಟ್ಟಿ ಪರಿಷ್ಕರಣೆಗೆ ಬಗ್ಗೆ ಕೇಳಿ ಬರುತ್ತಿರುವ ವ್ಯಾಪಕ ಆರೋಪಗಳ ಹಿನ್ನಲೆಯಲ್ಲಿ ಪಾರದರ್ಶಕತೆಯ ಅವಶ್ಯಕತೆಯಿದೆ. ಆದ್ದರಿಂದ ಚುನಾವಣಾ ಆಯೋಗ ತನ್ನ ನಿಲುವನ್ನು ಬದಲಾಯಿಸಿಕೊಳ್ಳಬೇಕು” ಎಂದು ನ್ಯಾಯಮೂರ್ತಿ ಸೂರ್ಯಕಾಂತ್‌ ಮತ್ತು ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠವು ಸೂಚಿಸಿದೆ.

ಮತಪಟ್ಟಿಯಲ್ಲಿ ಕಿತ್ತುಹಾಕಲಾದ 65 ಲಕ್ಷ ಹೆಸರುಗಳಲ್ಲಿ 22 ಲಕ್ಷ ಜನರು ಮೃತಪಟ್ಟಿದ್ದಾರೆ ಎಂಬ ಚುನಾವಣಾ ಆಯೋಗದ ಹೇಳಿಕೆಯನ್ನು ಗಮನಸಿದ ಪೀಠವು, “ಈವರೆಗೆ ಈ ಮಾಹಿತಿಯನ್ನು ಬೂತ್‌ಮಟ್ಟದಲ್ಲಿ ಏಕೆ ಇವುಗಳನ್ನು ಬಹಿರಂಗಪಡಿಸಿಲ್ಲ” ಎಂದು ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಕ್ಯೂಬಾ ಕ್ರಾಂತಿಯ ಕಿಡಿ, ಬಂಡವಾಳಿಗರ ದುಸ್ವಪ್ನ ಫಿಡೆಲ್ ಕ್ಯಾಸ್ಟ್ರೋ

“ಚುನಾವಣಾ ಆಯೋಗ ಹೊಂದಿರುವ ಅಧಿಕಾರದಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ. ಬದಲಾಗಿ ಮತಪಟ್ಟಿ ಪರಿಷ್ಕರಣೆಯು ಸಂಪೂರ್ಣವಾಗಿ ಪಾರದರ್ಶಕತೆಯಿಂದ ನಡೆಯಬೇಕು ಎಂಬುವುದು ನಮ್ಮ ಉದ್ದೇಶ. ಮತಪಟ್ಟಿಯಿಂದ ತೆಗೆದುಹಾಕಲಾದ ಮತದಾರರ ಗುರುತು ಮತ್ತು ಸಕಾರಣಗಳನ್ನು ನೀಡಿದರೆ, ಆ ವ್ಯಕ್ತಿಗೆ ಪರಿಹಾರಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲು ನ್ಯಾಯಯುತ ಅವಕಾಶ ಕಲ್ಪಿಸಿದಂತಾಗುತ್ತದೆ. ಚುನಾವಣಾ ಆಯೋಗವು ತನ್ನ ಮೇಲಿರುವ ಆರೋಪಗಳಿಗೆ ಉತ್ತರ ನೀಡಿದಂತಾಗುತ್ತದೆ” ಎಂದು ನ್ಯಾಯಾಲಯವು ತಿಳಿಸಿದೆ.

“2025ರ ಪರಿಷ್ಕೃತ ಪಟ್ಟಿಯಲ್ಲಿ ಹೆಸರಿದ್ದು ಕರಡು ಪಟ್ಟಿಯಲ್ಲಿ ಸೇರಿಸದ 65 ಲಕ್ಷ ಮತದಾರರ ಹೆಸರುಗಳು ಮತ್ತು ಕಾರಣಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ಪತ್ರಿಕೆ, ದೂರದರ್ಶನ ಹಾಗೂ ಚುನಾವಣಾ ಅಧಿಕಾರಿ ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ ಹೊಂದಿದ್ದರೆ ಅವುಗಳಲ್ಲಿ ಈ ಬಗ್ಗೆ ಪ್ರಚಾರ ನೀಡಬೇಕು. ಎಲ್ಲ ಪಂಚಾಯತ್ ಭವನ‌, ಬ್ಲಾಕ್‌ ಅಭಿವೃದ್ದಿ ಹಾಗೂ ಪಂಚಾಯತ್‌ ಕಚೇರಿಗಳ ಸೂಚನಾ ಫಲಕಗಳಲ್ಲಿ ಪ್ರಕಟಿಸಬೇಕು” ಎಂದು ಆಯೋಗಕ್ಕೆ ಕೋರ್ಟ್‌ ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...