ಆರ್‌ಎಸ್‌ಎಸ್‌ ಮೆರವಣಿಗೆ | ಅವಕಾಶ ಪ್ರಶ್ನಿಸಿದ್ದ ತಮಿಳುನಾಡು ಅರ್ಜಿ ವಜಾಗೊಳಿಸಿದ ಸುಪ್ರೀಂ

Date:

  • ಆರ್‌ಎಸ್‌ಎಸ್‌ನ ಮೆರವಣಿಗೆ ಪ್ರಶ್ನಿಸಿ ಮಾರ್ಚ್ 3ರಂದು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದ ತಮಿಳುನಾಡು
  • ರಾಜ್ಯದಲ್ಲಿ ಮೆರವಣಿಗೆ ನಡೆಸಲು ಆರ್‌ಎಸ್‌ಎಸ್‌ಗೆ ಈ ಹಿಂದೆ ಅನುಮತಿ ನೀಡಿದ್ದ ಮದ್ರಾಸ್‌ ಹೈಕೋರ್ಟ್

ತಮಿಳುನಾಡು ರಾಜ್ಯದಲ್ಲಿ ಆರ್‌ಎಸ್‌ಎಸ್‌ ಮೆರವಣಿಗೆ ಸಂಬಂಧ ಅವಕಾಶ ನೀಡಿದ್ದ ಮದ್ರಾಸ್ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ (ಏಪ್ರಿಲ್ 11) ವಜಾಗೊಳಿಸಿದೆ.

ಈ ಹಿಂದೆ ತಮಿಳುನಾಡಿನಲ್ಲಿ ಮೆರವಣಿಗೆ ನಡೆಸಲು ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ (ಆರ್‌ಎಸ್‌ಎಸ್‌) ಅನುಮತಿ ನೀಡಿ ಮದ್ರಾಸ್ ಹೈಕೋರ್ಟ್ ಆದೇಶಿಸಿತ್ತು. ಇದನ್ನು ತಮಿಳುನಾಡು ಸರ್ಕಾರ ಪ್ರಶ್ನಿಸಿತ್ತು.

ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿ. ರಾಮಸುಬ್ರಮಣಿಯನ್ ಮತ್ತು ಪಂಕಜ್ ಮಿತ್ತಲ್ ಅವರಿದ್ದ ನ್ಯಾಯಪೀಠ ವಿಚಾರಣೆ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಮತ್ತು ‘ಗಾಂಧಿ ಜಯಂತಿ’ ಅಂಗವಾಗಿ ರಾಜ್ಯದಲ್ಲಿ ಮೆರವಣಿಗೆ ನಡೆಸಲು ತಮಿಳುನಾಡು ಸರ್ಕಾರ ಅನುಮತಿ ನೀಡಬೇಕು ಎಂದು ಆರ್‌ಎಸ್‌ಎಸ್ ಕಳೆದ ಅಕ್ಟೋಬರ್‌ನಲ್ಲಿ ಕೋರಿತ್ತು.

ಆದರೆ ರಾಜ್ಯ ಸರ್ಕಾರ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿತ್ತು. ಇದನ್ನು ಪ್ರಶ್ನಿಸಿ ಆರ್‌ಎಸ್‌ಎಸ್‌ ಮದ್ರಾಸ್ ಹೈಕೋರ್ಟ್ ಮೊರೆ ಹೋಯಿತು.

ಆರ್‌ಎಸ್‌ಎಸ್‌ ಪ್ರಾತಿನಿಧ್ಯವನ್ನು ಪರಿಗಣಿಸಿ, ಕಾರ್ಯಕ್ರಮಗಳನ್ನು ಆಯೋಜಿಸಲು ಯಾವುದೇ ಷರತ್ತುಗಳಿಲ್ಲದೆ ಅವಕಾಶ ಕಲ್ಪಿಸುವಂತೆ 2022ರ ಸೆಪ್ಟೆಂಬರ್ 22ರಂದು ಮದ್ರಾಸ್ ಹೈಕೋರ್ಟ್ ಪೊಲೀಸರಿಗೆ ನಿರ್ದೇಶಿಸಿತ್ತು.

ಈ ಸುದ್ದಿ ಓದಿದ್ದೀರಾ? ಒಟಿಟಿಗೆ ಬರಲು ಸಜ್ಜಾದ ʼದಸರಾʼ

ಆದರೆ, ಕಳೆದ ನವೆಂಬರ್‌ನಲ್ಲಿ ಕೆಲವು ನಿರ್ಬಂಧಗಳನ್ನು ವಿಧಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆರ್‌ಎಸ್‌ಎಸ್‌ಗೆ ಪಥಸಂಚಲನ ನಡೆಸಲು ಅನುಮತಿಸಿತ್ತು. ಆದರೆ ಫೆಬ್ರವರಿ 10ರಂದು ಯಾವುದೇ ಷರತ್ತಿಲ್ಲದೆ ಅವಕಾಶ ನೀಡಿದ್ದ ಆದೇಶವನ್ನು ವಿಭಾಗೀಯ ಪೀಠ ಪುನರುಚ್ಛರಿಸಿತ್ತು.

ಇದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮಾರ್ಚ್ 3ರಂದು ಅರ್ಜಿ ಸಲ್ಲಿಸಿದ್ದ ತಮಿಳುನಾಡು, ಆರ್‌ಎಸ್‌ಎಸ್‌ ಮೆರವಣಿಗೆ ಮತ್ತು ಸಾರ್ವಜನಿಕ ಸಭೆಗಳನ್ನು ಸಂಪೂರ್ಣವಾಗಿ ವಿರೋಧಿಸುವುದಿಲ್ಲ. ಆದರೆ, ಗುಪ್ತಚರ ಮಾಹಿತಿ ಪ್ರಕಾರ ಎಲ್ಲ ಬೀದಿಗಳಲ್ಲಿಯೂ ಮೆರವಣಿಗೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿತ್ತು.

ರಾಜ್ಯದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನ ನಡೆಸುವುದರಿಂದ ಇಲ್ಲಿನ ಹಿಂದಿ ಬಾಷೆಯ ಜನರ ಮೇಲೆ ಪರಿಣಾಮ ಬೀರುತ್ತದೆ ಎಂದು ಎಂದು ತಮಿಳುನಾಡು ಸಲ್ಲಿಸಿದ ಅರ್ಜಿಯಲ್ಲಿ ಹೇಳಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...