ಒಳಮೀಸಲಾತಿ ತೀರ್ಪಿನ ಮರುಪರಿಶೀಲನೆ ಕೋರಿದ್ದ ಅರ್ಜಿಗಳ ವಜಾ: ಸುಪ್ರೀಂ ಕೋರ್ಟ್‌

Date:

ಪರಿಶಿಷ್ಟ ಜಾತಿಗಳಲ್ಲಿ (ಎಸ್‌ಸಿ) ಹೆಚ್ಚು ಹಿಂದುಳಿದ ವರ್ಗಗಳಿಗೆ ಒಳಮೀಸಲಾತಿ ಒದಗಿಸಲು ರಾಜ್ಯಗಳಿಗೆ ಅಧಿಕಾರವಿದೆ. ಜೊತೆಗೆ, ಒಳಮೀಸಲಾತಿಯಲ್ಲಿ ‘ಕ್ರೀಮಿ ಲೇಯರ್’ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ಈ ತೀರ್ಪನ್ನು ಮರುಪರಿಶೀಲಿಸಲು ಕೋರಿ ಅಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಸಲ್ಲಿಸಲಾಗಿರುವ ಅರ್ಜಿಗಳು ಮೂಲ ಆದೇಶದಲ್ಲಿ ಲೋಪವಾಗಿದೆ ಎಂಬುದನ್ನು ತೋರಿಸುವಲ್ಲಿ ವಿಫಲವಾಗಿವೆ ಎಂದು ಹೇಳಿದೆ.

ಒಳಮೀಸಲಾತಿಗೆ ಸಂಬಂಧಿಸಿದಂತೆ ಆಗಸ್ಟ್‌ 1ರಂದು ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್‌ನ 7 ನ್ಯಾಯಾಧೀಶರ ಸಂವಿಧಾನ ಪೀಠವು, “ರಾಜ್ಯ ಸರ್ಕಾರಗಳು ಎಸ್‌ಸಿ ಸಮುದಾಯದಲ್ಲಿ ಹೆಚ್ಚು ಹಿಂದುಳಿದವರನ್ನು ಗುರುತಿಸಬಹುದು. ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿಯೊಳಗೆ ಪ್ರತ್ಯೇಕ ಕೋಟಾಗಳೊಂದಿಗೆ ಒಳಮೀಸಲಾತಿ ನೀಡಬಹುದು” ಎಂದು ಹೇಳಿತ್ತು. ಸುಪ್ರೀಂ ತೀರ್ಪು ಬಂದ ಬಳಿಕ, ಒಳಮೀಸಲಾತಿಯಲ್ಲಿ ಕ್ರೀಮಿಲೇಯರ್ ಅಳವಡಿಕೊಳ್ಳುವ ಬಗ್ಗೆ ಹೆಚ್ಚು ಹಿಂದುಳಿದ ದಲಿತ ಸಮುದಾಯಗಳೂ ಸೇರಿದಂತೆ ಸಾಮಾಜಿಕವಾಗಿ ಅಸಮಾಧಾನ ವ್ಯಕ್ತವಾಗಿತ್ತು. ಅಲ್ಲದೆ, ಒಳಮೀಸಲಾತಿಗೂ ಕೆಲವು ವರ್ಗಗಳು ವಿರೋಧ ವ್ಯಕ್ತಪಡಿಸಿದ್ದವು. ಒಳಮೀಸಲಾತಿಯ ಆದೇಶವನ್ನು ಮರುಪರಿಶೀಲಿಸುವಂತೆ ಕೆಲವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಅರ್ಜಿಗಳು ಮೂಲ ತೀರ್ಪಿನಲ್ಲಿನ ಲೋಪಗಳೇನು ಎಂಬುದರನ್ನು ಸಾಬೀತುಪಡಿಸುವಲ್ಲಿ ವಿಫಲವಾಗಿವೆ. ಅಲ್ಲದ, ಹಿಂದಿನ ತೀರ್ಪಿನಲ್ಲಿ ಯಾವುದೇ ದೋಷಗಳು ಕಂಡುಬಂದಿಲ್ಲ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮರುಪರಿಶೀಲನಾ ಅರ್ಜಿಗಳನ್ನು ಪರಿಶೀಲಿಸಲಾಗಿದೆ. ಆದರೆ, ಅರ್ಜಿಗಳಲ್ಲಿ ಹಿಂದಿನ ತೀರ್ಪಿನಲ್ಲಿನ ದೋಷಗಳಿವೆ ಎಂಬುದು ಕಂಡುಬಂದಿಲ್ಲ. ಸುಪ್ರೀಂ ಕೋರ್ಟ್ ನಿಯಮಗಳು-2013ರ ಆದೇಶ XLVII ನಿಯಮ 1ರ ಅಡಿಯಲ್ಲಿ ಪರಿಶೀಲನೆಗಾಗಿ ಯಾವುದೇ ಅರ್ಜಿಯನ್ನು ಅನುಮತಿಸಲಾಗಿಲ್ಲ. ಎಲ್ಲ ಮರುಪರಿಶೀಲನಾ ಅರ್ಜಿಗಳನ್ನು ವಜಾಗೊಳಿಸಲಾಗಿದೆ” ಎಂದು ಕೋರ್ಟ್‌ ಹೇಳಿದೆ.

ಮರುಪರಿಶೀಲನಾ ಅರ್ಜಿಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಬಿಆರ್ ಗವಾಯಿ, ವಿಕ್ರಮ್ ನಾಥ್, ಬೇಲಾ ಎಂ ತ್ರಿವೇದಿ, ಪಂಕಜ್ ಮಿಥಾಲ್, ಮನೋಜ್ ಮಿಶ್ರಾ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸಿದೆ. ಅರ್ಜಿಗಳನ್ನು ತಿರಸ್ಕರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...