ಪಿ ಬಿ ವರಾಳೆ ಪ್ರಮಾಣ ವಚನ: ‘ಸುಪ್ರೀಂ’ನಲ್ಲಿ ಮೊದಲ ಬಾರಿಗೆ ಮೂವರು ದಲಿತ ಸಮುದಾಯದ ನ್ಯಾಯಮೂರ್ತಿಗಳು

Date:

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿದ್ದ ಪ್ರಸನ್ನ ಬಿ ವರಾಳೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.

ವರಾಳೆ ಅವರ ಪ್ರಮಾಣ ವಚನ ಸ್ವೀಕಾರದೊಂದಿಗೆ ಸರ್ವೋಚ್ಚ ನ್ಯಾಯಾಲಯದಲ್ಲಿ ನ್ಯಾಯಮೂರ್ತಿಗಳ ಸಂಖ್ಯೆ 34ಕ್ಕೆ ಏರಿದೆ.

ಇದಲ್ಲದೆ ದಲಿತ ಸಮುದಾಯದ ಪ್ರಸನ್ನ ಬಿ ವರಾಳೆ ಸೇರ್ಪಡೆಯೊಂದಿಗೆ ಸುಪ್ರೀಂ ಕೋರ್ಟ್ ನಲ್ಲಿ ದಲಿತ ಸಮುದಾಯದ ನ್ಯಾಯಾಧೀಶರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಸರ್ವೋಚ್ಚ ನ್ಯಾಯಾಲಯದಲ್ಲಿ ಮೂವರು ದಲಿತ ಸಮುದಾಯದವರು ನ್ಯಾಯಾಧೀಶರಾಗಿರುವುದು ಇದೇ ಮೊದಲು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸ್ತುತ ಸುಪ್ರೀಂನಲ್ಲಿ ನ್ಯಾಯಮೂರ್ತಿಗಳಾಗಿರುವ ಬಿ ಆರ್ ಗವಾಯಿ ಹಾಗೂ ಸಿ ಟಿ ರವಿಕುಮಾರ್ ದಲಿತ ಸಮುದಾಯದವರು. ಇದು ಸರ್ವೋಚ್ಚ ನ್ಯಾಯಾಲಯದಲ್ಲಿ ಪರಿಶಿಷ್ಟ ಜಾತಿ ಸಮುದಾಯದ ಅತಿ ಹೆಚ್ಚು ಪ್ರಾತಿನಿಧ್ಯವಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇವೇಗೌಡರ ದೈವಭಕ್ತಿ ಮತ್ತು ಕುಟುಂಬ ಕಲ್ಯಾಣ

ವರಾಳೆ ಅವರಿಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಪ್ರಮಾಣ ವಚನ ಬೋಧಿಸಿದರು. ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗುವ ಮೊದಲು ವರಾಳೆ ಬಾಂಬೆ ಹೈಕೊರ್ಟಿನ ನ್ಯಾಯಾಧೀಶರಾಗಿದ್ದರು.

ಸುಪ್ರೀಂ ಕೋರ್ಟ್ ಕೊಲಿಜಿಯಂ ವರಾಳೆ ಅವರನ್ನು ಶಿಫಾರಸ್ಸು ಮಾಡಿದ 7 ದಿನಗಳಲ್ಲಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವರಾಳೆ ಅವರನ್ನು ಜನವರಿ 19ರಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯನ್ನಾಗಿ ನೇಮಿಸಲು ಸಿಜೆಐ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ, ಬಿ ಆರ್ ಗವಾಯಿ, ಸೂರ್ಯಕಾಂತ್ ಹಾಗೂ ಅನಿರುದ್ಧ ಬೋಸ್ ಅವರಿದ್ದ ಕೊಲಿಜಿಯಂ ಶಿಫಾರಸ್ಸು ಮಾಡಿತ್ತು.

ಕಳೆದ ವರ್ಷ ಡಿಸೆಂಬರ್ 25ರಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ನಿವೃತ್ತರಾದ ಕಾರಣ ಒಂದು ಹುದ್ದೆ ಖಾಲಿಯಾಗಿತ್ತು.

1962ರ ಜೂನ್ 23ರಂದು ಬೆಳಗಾವಿಯ ನಿಪ್ಪಾಣಿಯಲ್ಲಿ ಜನಿಸಿದ್ದ ವರಾಳೆ ಔರಂಗಾಬಾದ್‌ನ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮರಾಠಾವಾಡ ವಿವಿಯಲ್ಲಿ ಕಾನೂನು ಪದವಿ ಪಡೆದಿದ್ದರು. ಆಗಸ್ಟ್ 12 1985ರಲ್ಲಿ ವಕೀಲರಾಗಿ ನೋಂದಾಯಿಸಿಕೊಂಡು ಹಲವು ವರ್ಷಗಳ ಕಾಲ ವಕೀಲರಾಗಿ ಕಾರ್ಯನಿರ್ವಹಿಸುತ್ತಿದ್ದರು. 2008 ರ ಜುಲೈ 18ರಂದು ಬಾಂಬೆ ಹೈಕೋರ್ಟ್ ನ್ಯಾಯಾಧೀಶರಾಗಿ ನೇಮಿಸಲಾಯಿತು.

“ಇವರು ದೋಷಾರೂಪಣೆ ಮಾಡಲಾಗದ ಸಮರ್ಥ ನ್ಯಾಯಮೂರ್ತಿ. ಇವರು ವೃತ್ತಿಪರ ನೈತಿಕತೆಯು ಉತ್ತಮ ಗುಣಮಟ್ಟದಿಂದ ಕೂಡಿದೆ” ಎಂದು ಡಿ ವೈ ಚಂದ್ರಚೂಡ್ ನೇತೃತ್ವದ ಐವರ ಕೊಲಿಜಿಯಂ ಸಮಿತಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...