ಆಕೆ ಭಯೋತ್ಪಾದಕಿ ಅಥವಾ ಕೊಲೆಗಾರ್ತಿಯಲ್ಲ: ಪೂಜಾ ಖೇಡ್ಕರ್‌ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

Date:

ವಂಚನೆ ಮತ್ತು ನಾಗರಿಕ ಸೇವಾ ಪರೀಕ್ಷೆಯಲ್ಲಿ ಒಬಿಸಿ ಮತ್ತು ಅಂಗವೈಕಲ್ಯ ಕೋಟಾವನ್ನು ದುರುಪಯೋಗ ಮಾಡಿಕೊಂಡ ಆರೋಪವನ್ನು ಹೊತ್ತಿರುವ ಮಾಜಿ ತರಬೇತಿ ನಿರತ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್‌ಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ನ್ಯಾಯಮೂರ್ತಿಗಳಾದ ಬಿ ವಿ ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠವು ಖೇಡ್ಕರ್ ಅವರಿಗೆ ತನಿಖೆಯಲ್ಲಿ ಸಹಕರಿಸುವಂತೆ ಸೂಚಿಸಿದೆ.

ಇದನ್ನು ಓದಿದ್ದೀರಾ? ನಟ ದರ್ಶನ್‌ಗೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವರು (ಪೂಜಾ ಖೇಡ್ಕರ್‌) ಮಾಡಿದ ಗಂಭೀರ ಅಪರಾಧವೇನು? ಅವರು ಮಾದಕವಸ್ತು ಜಾಲದಲ್ಲಿರುವವರೂ ಅಲ್ಲ ಭಯೋತ್ಪಾದಕಿಯೂ ಅಲ್ಲ. ಅವರು ಕೊಲೆ ಮಾಡಿಲ್ಲ. ಅವರು ಎನ್‌ಡಿಪಿಎಸ್‌ ಅಪರಾಧಿ ಅಲ್ಲ. ನಿಮಗೆ ಒಂದು ವ್ಯವಸ್ಥೆ ಇರಬೇಕು. ನೀವು ತನಿಖೆಯನ್ನು ಪೂರ್ಣಗೊಳಿಸಿ. ಅವರೂ ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಎಲ್ಲಿಯೂ ಕೆಲಸ ಸಿಗಲ್ಲ” ಎಂದು ಪೀಠ ಮೌಖಿಕವಾಗಿ ಹೇಳಿದೆ.

“ಪ್ರಕರಣದ ಸಂದರ್ಭಗಳನ್ನು ಗಮನದಲ್ಲಿಟ್ಟುಕೊಂಡು ದೆಹಲಿ ಹೈಕೋರ್ಟ್ ಅರ್ಜಿದಾರರಿಗೆ ಜಾಮೀನು ನೀಡಬೇಕಾಗಿದ್ದ ಸೂಕ್ತವಾದ ಪ್ರಕರಣ ಇದು” ಎಂದು ಹೇಳಿದ ಸುಪ್ರೀಂ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.

ಖೇಡ್ಕರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡುವುದನ್ನು ದೆಹಲಿ ಪೊಲೀಸರ ಪರ ವಕೀಲರು ತೀವ್ರವಾಗಿ ವಿರೋಧಿಸಿದ್ದಾರೆ. ಖೇಡ್ಕರ್ ತನಿಖೆಯಲ್ಲಿ ಸಹಕರಿಸುತ್ತಿಲ್ಲ ಮತ್ತು ಅವರ ವಿರುದ್ಧ ಗಂಭೀರ ಆರೋಪಗಳಿವೆ ಎಂದು ಹೇಳಿದ್ದಾರೆ.

2022ರ ಕೇಂದ್ರ ನಾಗರಿಕ ಸೇವಾ ಪರೀಕ್ಷೆಗೆ ಹಾಜರಾಗಲು ತಮ್ಮ ಪ್ರಮಾಣ ಪತ್ರಗಳನ್ನು ತಿರುಚಿದ ಹಾಗೂ ತನ್ನ ಕುಟುಂಬದ ಆದಾಯ ಸ್ಥಿತಿ ಹಾಗೂ ಇನ್ನಿತರ ವಿವರಗಳನ್ನು ತಪ್ಪಾಗಿ ನಮೂದಿಸಿದ ಆರೋಪವನ್ನು ಪೂಜಾ ಖೇಡ್ಕರ್ ಹೊಂದಿದ್ದಾರೆ. ದೆಹಲಿ ಪೊಲೀಸರು ಖೇಡ್ಕರ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಈ ಎಲ್ಲಾ ಆರೋಪವನ್ನು ಖೇಡ್ಕರ್ ನಿರಾಕರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...