ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್‌ಗೆ ಸುಪ್ರೀಂನಿಂದ ನಿರೀಕ್ಷಣಾ ಜಾಮೀನು ಮಂಜೂರು

Date:

ಅಸ್ಸಾಂ ಕಾಂಗ್ರೆಸ್‌ ಯುವ ಘಟಕದ ಉಚ್ಚಾಟಿತ ನಾಯಕಿಯೊಬ್ಬರ ಗೌರವಕ್ಕೆ ಧಕ್ಕೆ ತಂದ ಆರೋಪದಲ್ಲಿ ಕರ್ನಾಟಕ ಮೂಲದ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ ವಿ ಶ್ರೀನಿವಾಸ್‌ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ.

ತನಗೆ ಮಾನಸಿಕ ಹಿಂಸೆ ನೀಡಿದ್ದಾರೆಂದು ಆರೋಪಿಸಿ ಅಸ್ಸಾಂ ಕಾಂಗ್ರೆಸ್‌ ಯುವ ಘಟಕದ ಉಚ್ಚಾಟಿತ ನಾಯಕಿ ಶ್ರೀನಿವಾಸ್ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು.

ಗೌಹಾಟಿ ಹೈಕೋರ್ಟ್ ತನ್ನ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನಂತರ ಶ್ರೀನಿವಾಸ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಅದಾನಿ ಸಮೂಹದ ತನಿಖೆಗೆ ಸೆಬಿಗೆ ಮೂರು ತಿಂಗಳು ಸಮಯ ನೀಡಿದ ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ ಹಾಗೂ ಸಂಜಯ್‌ ಕರೋಲ್ ಅವರ ಪೀಠವು ಜುಲೈ 10 ರೊಳಗೆ ತಮ್ಮ ಉತ್ತರವನ್ನು ಕೋರಿ ಅಸ್ಸಾಂ ಸರಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಶ್ರೀನಿವಾಸ್‌ ಅವರನ್ನು ₹50,000 ಬಾಂಡ್ ಮತ್ತು ಒಂದು ಅಥವಾ ಎರಡು ಶ್ಯೂರಿಟಿಗಳನ್ನು ಪಡೆದು ನಿರೀಕ್ಷಣಾ ಜಾಮೀನು ನೀಡುವಂತೆ ನ್ಯಾಯಾಲಯ ಆದೇಶಿಸಿತು. ತನಿಖೆಗೆ ಸಹಕರಿಸುವಂತೆ ಶ್ರೀನಿವಾಸ್‌ ಅವರಿಗೆ ನಿರ್ದೇಶನ ನೀಡಿದ ನ್ಯಾಯಾಲಯ ಈ ಸಂಬಂಧ ಅಸ್ಸಾಂ ಸರ್ಕಾರಕ್ಕೂ ನೋಟಿಸ್‌ ನೀಡಿತು.

“ಎಫ್ಐಆರ್ ದಾಖಲಿಸಲು ಒಂದು ತಿಂಗಳ ವಿಳಂಬವನ್ನು ಪರಿಗಣಿಸಿ, ಅರ್ಜಿದಾರರು ಮಧ್ಯಂತರ ರಕ್ಷಣೆಗೆ ಅರ್ಹರಾಗಿದ್ದಾರೆ” ಎಂದು ಸುಪ್ರೀಂ ಕೋರ್ಟ್ ಪೀಠ ಹೇಳಿದೆ.  

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...