ಅಬಕಾರಿ ನೀತಿ ಪ್ರಕರಣ | ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು

Date:

ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 10 ಲಕ್ಷ ರೂಪಾಯಿ ಮೊತ್ತದ ಬಾಂಡ್‌ ನೀಡಿ ಜಾಮೀನಿನ ಮೇಲೆ ಬಿಡುಗಡೆಯಾಗುವಂತೆ ಅರವಿಂದ್ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಆದರೆ ಬಂಧನ ಪ್ರಶ್ನಿಸಿ ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ತನಿಖೆಯ ಉದ್ದೇಶದಿಂದ ಬಂಧನ ಮಾಡುವುದಕ್ಕೆ ಯಾವುದೇ ಅಡ್ಡಿಯಿಲ್ಲ ಎಂದು ಕೋರ್ಟ್ ಹೇಳಿದೆ.

ಹಾಗೆಯೇ ಈ ಪ್ರಕರಣದ ಬಗ್ಗೆ ಯಾವುದೇ ಹೇಳಿಕೆಗಳನ್ನು ಸಾರ್ವಜನಿಕವಾಗಿ ನೀಡಬಾರದು ಮತ್ತು ವಿಚಾರಣಾ ನ್ಯಾಯಾಲಯದ ಮುಂದೆ ಎಲ್ಲಾ ವಿಚಾರಣೆಗಳಿಗೆ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಡಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ಲಭಿಸಿರುವಾಗ ಅವರನ್ನು ಜೈಲಿನಲ್ಲಿಡುವುದು ನ್ಯಾಯದ ಅಪಹಾಸ್ಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಿಸಿದೆ.

ಇದನ್ನು ಓದಿದ್ದೀರಾ? ಅಬಕಾರಿ ಪ್ರಕರಣ | ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ಹಾಗೆಯೇ ಇಡಿ ಪ್ರಕರಣದಲ್ಲಿ ನೀಡಲಾಗಿದ್ದ ಜಾಮೀನನ್ನು ವಿಫಲಗೊಳಿಸಲೆಂದೇ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧಿಸಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಬಂಧನ ಮಾಡಿರುವುದು ಉತ್ತರಕ್ಕಿಂತ ಹೆಚ್ಚಿನ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಮಾರ್ಚ್ 2023ರಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಿದರೂ ಅವರನ್ನು ಬಂಧಿಸುವ ಅಗತ್ಯವಿದೆ ಎಂದು ಸಿಬಿಐಗೆ ಅನಿಸಿಲ್ಲ. ಇಡಿ ಬಂಧನದಿಂದ ಜಾಮೀನು ದೊರೆತ ಬಳಿಕವೇ ಸಿಬಿಐ ಬಂಧನ ಮಾಡಿದೆ. ಈ ಬಂಧನದ ಸಮಯ ಗಂಭೀರ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ” ಎಂದು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಹೇಳಿದ್ದಾರೆ.

ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್‌ 21ರಂದು ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧನ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...