ಮಸೂದೆಗಳ ಅಂಗೀಕಾರ ವಿಳಂಬ: ಕೇರಳ ರಾಜ್ಯಪಾಲರಿಗೆ ಸುಪ್ರೀಂ ನೋಟಿಸ್

Date:

ವಿಧಾನಸಭೆ ಅಂಗೀಕರಿಸಿದ ಮಸೂದೆಗಳ ಪರಿಗಣನೆಗೆ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ  ಸರ್ಕಾರ ಸಲ್ಲಿಸಿದ ಮನವಿಯ ಮೇಲೆ ಸುಪ್ರೀಂ ಕೋರ್ಟ್ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರಿಗೆ ಸೋಮವಾರ ನೋಟಿಸ್ ಜಾರಿ ಮಾಡಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿ ಜೆ ಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠವು ನ್ಯಾಯಾಲಯವು ರಾಜ್ಯಪಾಲರ ಮುಖ್ಯ ಕಾರ್ಯದರ್ಶಿ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು.

ಕೇಂದ್ರ ಹಾಗೂ ರಾಜ್ಯಪಾಲರ ಕಚೇರಿಯ ಜತೆಗೆ, ವಿಚಾರಣೆ ಸಂಬಂಧ ನೀವು ಅಥವಾ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸಹಾಯ ಮಾಡಬೇಕು ಎಂದು ಅಟಾರ್ನಿ ಜನರಲ್ ವಿ. ವೆಂಕಟರಮಣಿ ಅವರಿಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿತು. ವಿಚಾರಣೆಯನ್ನು ನ.24ಕ್ಕೆ ಮುಂದೂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇರಳ ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿ, ಹಿರಿಯ ವಕೀಲ ಕೆ ಕೆ ವೇಣುಗೋಪಾಲ್ ಅವರು ಸುಪ್ರೀಂ ಕೋರ್ಟ್‌ಗೆ ಮೂರು ಸಲ್ಲಿಕೆಗಳನ್ನು ಸಲ್ಲಿಸಿದ್ದರು.

ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರು ರಾಜ್ಯ ವಿಧಾನಸಭೆ ಅಂಗೀಕರಿಸಿದ ಮಸೂದೆಗಳನ್ನು ಪರಿಗಣಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಕೇರಳ ಸರ್ಕಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ಕಾರದ ಆರು ತಿಂಗಳ ‘ಅನನ್ಯ ಸಾಧನೆ’ ಮತ್ತು ವಿರೋಧ ಪಕ್ಷಗಳ ‘ಜವಾಬ್ದಾರಿ’

ರಾಜ್ಯಪಾಲರು ಬಾಕಿ ಇರುವ  8 ಮಸೂದೆಗಳನ್ನು ಅಂಗೀಕರಿಸಲು ವಿನಾಕಾರಣ ವಿಳಂಬ ಮಾಡುವ ಮೂಲಕ ತಮ್ಮ ಸಾಂವಿಧಾನಿಕ ಕರ್ತವ್ಯಗಳಲ್ಲಿ ವಿಫಲರಾಗಿದ್ದಾರೆ ಎಂದು ರಾಜ್ಯ ಸರ್ಕಾರ ವಾದಿಸಿತ್ತು.

ತಮಿಳುನಾಡು ರಾಜ್ಯಪಾಲ ಆರ್‌ ಎನ್ ರವಿ ಅವರು ಮಸೂದೆಗಳನ್ನು ಅಂಗೀಕರಿಸದೆ ಅಥವಾ ಹಿಂದಿರುಗಿಸದೆ ನಾಗರಿಕರ ಕಲ್ಯಾಣದ ಆದೇಶದೊಂದಿಗೆ ಆಟವಾಡುತ್ತಿದ್ದಾರೆ ಎಂದು ತಮಿಳುನಾಡನ್ನು ಪ್ರತಿನಿಧಿಸಿದ್ದ ವಕೀಲರು ಆರೋಪಿಸಿದರು.

ರಾಜ್ಯಪಾಲರು ತನ್ನನ್ನು ತಾನು “ರಾಜಕೀಯ ಪ್ರತಿಸ್ಪರ್ಧಿ” ಎಂದು ಬಿಂಬಿಸಿಕೊಂಡಿದ್ದಾರೆ ಎಂದು ತಮಿಳುನಾಡು ಸರ್ಕಾರ ಆರೋಪಿಸಿದೆ.

ಪಂಜಾಬ್ ರಾಜ್ಯಪಾಲರು ಏಳು ಮಸೂದೆಗಳನ್ನು ಜೂನ್‌ನಿಂದ ಅಂಗೀಕರಿಸದೆ ತನ್ನ ಬಳಿಯೇ ಇಟ್ಟುಕೊಂಡಿದ್ದಾರೆ.

ತೆಲಂಗಾಣ ರಾಜ್ಯಪಾಲರು ಸೆಪ್ಟೆಂಬರ್ 2022 ರಿಂದ ಬಾಕಿ ಉಳಿಸಿಕೊಂಡಿದ್ದ ಮಸೂದೆಗಳನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟ್ ಏಪ್ರಿಲ್‌ನಲ್ಲಿ ಮಧ್ಯ ಪ್ರವೇಶಿಸಬೇಕಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...