ಚುನಾವಣಾ ಬಾಂಡ್ | ಯಾವುದನ್ನೂ ಮುಚ್ಚಿಡದೆ ಎಲ್ಲ ಮಾಹಿತಿ ಬಹಿರಂಗಗೊಳಿಸಿ: SBIಗೆ ಸುಪ್ರೀಂ ತಪರಾಕಿ

Date:

ಚುನಾವಣಾ ಬಾಂಡ್ ವಿಚಾರವಾಗಿ ಎಸ್‌ಬಿಐ ವಿರುದ್ಧ ಮತ್ತೆ ಗರಂ ಆಗಿರುವ ಸುಪ್ರೀಂ ಕೋರ್ಟ್‌, ಯಾವುದನ್ನೂ ಕೂಡ ಮುಚ್ಚಿಡದೆ ಎಲ್ಲ ಮಾಹಿತಿಯನ್ನು ಬಹಿರಂಗಗೊಳಿಸಿ ಎಂದು ಖಡಕ್ ಸೂಚನೆ ನೀಡಿದೆ.

ಚುನಾವಣಾ ಬಾಂಡ್ ಅರ್ಜಿಯ ಬಗ್ಗೆ ಇಂದು ಮತ್ತೆ ವಿಚಾರಣೆ ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್‌ ಸಾಂವಿಧಾನಿಕ ಪೀಠ, ಯಾವುದೇ ಮಾಹಿತಿಯನ್ನು ಹತ್ತಿಕ್ಕಲಾಗಿಲ್ಲ ಮತ್ತು ಮುಚ್ಚಿಟ್ಟಿಲ್ಲ ಎಂದು ಪ್ರಮಾಣೀಕರಿಸಿದ ಅಫಿಡವಿಟ್‌ ಅನ್ನು ಗುರುವಾರ ಸಂಜೆ 5 ಗಂಟೆಯೊಳಗೆ ಸಲ್ಲಿಸುವಂತೆಯೂ ಇದೇ ವೇಳೆ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಸ್ಪಷ್ಟ ಆದೇಶ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚುನಾವಣಾ ಆಯೋಗಕ್ಕೆ ಎಸ್‌ಬಿಐ ಸಲ್ಲಿಸಿರುವ ವಿಶಿಷ್ಟ ಸಂಖ್ಯೆಯ(Unique Alphanumeric Numbers) ಚುನಾವಣಾ ಬಾಂಡ್‌ಗಳ ಸಂಪೂರ್ಣ ವಿವರಗಳನ್ನು ಸಲ್ಲಿಸದಿರುವ ಬಗ್ಗೆ ಅರ್ಜಿ ಸಲ್ಲಿಸಲಾಗಿತ್ತು. ಇದರ ವಿಚಾರಣೆಯ ಸಂದರ್ಭದಲ್ಲಿ, ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸುವಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಪಕ್ಷಪಾತಿ ಆಗಬೇಡಿ(Selective) ಎಂದು ಕೂಡ ಇಂದಿನ ವಿಚಾರಣೆಯ ವೇಳೆ ಸ್ಪಷ್ಟ ಸೂಚನೆಯನ್ನು ಸುಪ್ರೀಂ ಕೋರ್ಟ್‌ ನೀಡಿದೆ.

ಬಾಂಡ್ ಸಂಖ್ಯೆಗಳು ಸೇರಿದಂತೆ ಎಲ್ಲ ವಿವರಗಳನ್ನು ಬಹಿರಂಗಪಡಿಸುವಂತೆ ನಾವು ಎಸ್‌ಬಿಐಗೆ ತಿಳಿಸಿದ್ದೇವೆ ಎಂದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್, ಯಾವುದೇ ಮಾಹಿತಿಯನ್ನು ಮರೆಮಾಚಿಲ್ಲ ಎಂದು ಅಫಿಡವಿಟ್ ಸಲ್ಲಿಸುವಂತೆಯೂ ಇದೇ ವೇಳೆ ಸೂಚಿಸಿದ್ದಾರೆ.

ಇದನ್ನು ಓದಿದ್ದೀರಾ? WPL 2024 | ಆರ್‌ಸಿಬಿ ಕಪ್ ಗೆಲ್ಲುತ್ತಿದ್ದಂತೆಯೇ ಪ್ರತ್ಯಕ್ಷವಾದ ವಿಜಯ್ ಮಲ್ಯ

“ಏನನ್ನು ಬಹಿರಂಗಪಡಿಸಬೇಕೆಂದು ಹೇಳಿ ನಾವು ಒದಗಿಸುತ್ತೇವೆ ಎಂಬಂತಹ ಧೋರಣೆಯನ್ನು ಎಸ್‌ಬಿಐ ಹೊಂದಿರುವಂತಿದೆ. ಇದು ಸರಿಯಲ್ಲ, ನಾವು ಎಲ್ಲ ವಿವರಗಳನ್ನು ಕೊಡಿ ಎಂದು ಈಗಾಗಲೇ ಹೇಳಿದ್ದೇವೆ. ಸ್ಪಷ್ಟವಾಗಿ ತಿಳಿಸಿದ ನಂತರ ನಿಮ್ಮಲ್ಲಿರುವ ಪ್ರತಿಯೊಂದು ಮಾಹಿತಿಯನ್ನು ಬಹಿರಂಗಗೊಳಿಸಬೇಕು. ಯಾವುದನ್ನೂ ಕೂಡ ಅದುಮಿಡಬೇಡಿ” ಎಂದು ಸಿಜೆಐ ಡಿವೈ ಚಂದ್ರಚೂಡ್ ಎಸ್‌ಬಿಐಗೆ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...