ಅರಾವಳಿ ಪರ್ವತ ಶ್ರೇಣಿ ಕುರಿತ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Date:

ಅರಾವಳಿ ಪರ್ವತ ಶ್ರೇಣಿಗೆ ಇತ್ತೀಚೆಗೆ ನೀಡಲಾಗಿದ್ದ ವ್ಯಾಖ್ಯಾನಗಳ ಕುರಿತು ಇನ್ನಷ್ಟು ಸ್ಪಷ್ಟತೆ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದ್ದು, ಈ ಸಂಬಂಧ ಕಳೆದ ತಿಂಗಳು ನೀಡಿದ್ದ ಆದೇಶವನ್ನು ತಾತ್ಕಾಲಿಕವಾಗಿ ತಡೆಹಿಡಿದಿದೆ.

ಅರಾವಳಿ ಪರ್ವತ ಶ್ರೇಣಿಗೆ ಸಂಬಂಧಿಸಿದಂತೆ ಹಿಂದಿನ ಸಮಿತಿಯು ನೀಡಿದ್ದ ಶಿಫಾರಸುಗಳ ಪರಿಸರ ಪರಿಣಾಮಗಳನ್ನು ತಜ್ಞರ ಸಮಿತಿ ಪರಿಶೀಲಿಸಬೇಕೆಂದು ನ್ಯಾಯಾಲಯ ಸೂಚಿಸಿದೆ. ಹಿಂದಿನ ಸಮಿತಿಯಲ್ಲಿ ಹೆಚ್ಚಾಗಿ ಆಡಳಿತಾತ್ಮಕ ಅಧಿಕಾರಿಗಳೇ ಇದ್ದರು ಎಂಬುದನ್ನೂ ನ್ಯಾಯಪೀಠವು ಉಲ್ಲೇಖಿಸಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ, ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎ.ಜಿ. ಮಸಿಹ್ ಅವರನ್ನೊಳಗೊಂಡ ಪೀಠವು, ಗಣಿಗಾರಿಕೆ ಚಟುವಟಿಕೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಅರಾವಳಿ ಪರ್ವತ ಶ್ರೇಣಿಗೆ ವ್ಯಾಖ್ಯಾನ ನೀಡಲು ರಚಿಸಲಾದ ಸಮಿತಿಯ ಶಿಫಾರಸುಗಳ ಆಧಾರದಲ್ಲಿ ನೀಡಲಾಗಿದ್ದ ತೀರ್ಪನ್ನು ಸ್ಥಗಿತಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಮೈದಾನದಲ್ಲಿ ಮಿಂಚುವ ‘ಮಂಧಾನ-ಜೆಮಿಮಾ’ ಜೋಡಿ: ಭಾರತೀಯ ಮಹಿಳಾ ಕ್ರಿಕೆಟ್‌ನ ಭರವಸೆಯ ಬೆಳಕು

ಈ ವಿಚಾರಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ಹಾಗೂ ಅರಾವಳಿ ವ್ಯಾಪ್ತಿಯ ನಾಲ್ಕು ರಾಜ್ಯಗಳಾದ ರಾಜಸ್ಥಾನ, ಗುಜರಾತ್, ದಿಲ್ಲಿ ಮತ್ತು ಹರಿಯಾಣಕ್ಕೆ ನ್ಯಾಯಾಲಯವು ನೋಟಿಸ್ ಜಾರಿ ಮಾಡಿದ್ದು, ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಪ್ರಕರಣದ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿದೆ.

ಅರಾವಳಿ ಬೆಟ್ಟಗಳಿಗೆ ಏಕರೂಪ ಹಾಗೂ ವೈಜ್ಞಾನಿಕ ವ್ಯಾಖ್ಯಾನ ನೀಡುವ ವಿಚಾರವು ವ್ಯಾಪಕ ವಿವಾದ ಹಾಗೂ ಪ್ರತಿಭಟನೆಗಳಿಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಈ ಪ್ರಕರಣ ನ್ಯಾಯಾಲಯದ ಮುಂದೆ ಬಂದಿದೆ. ನ. 20ರಂದು ನ್ಯಾಯಾಲಯವು ಅರಾವಳಿ ಬೆಟ್ಟಗಳು ಮತ್ತು ಪರ್ವತ ಶ್ರೇಣಿಗೆ ಸಮಾನ ವ್ಯಾಖ್ಯಾನವನ್ನು ಅಂಗೀಕರಿಸಿ, ತಜ್ಞರ ವರದಿಗಳು ಅಂತಿಮಗೊಳ್ಳುವವರೆಗೆ ದಿಲ್ಲಿ, ಹರ್ಯಾಣ, ರಾಜಸ್ಥಾನ ಹಾಗೂ ಗುಜರಾತ್ ರಾಜ್ಯಗಳಲ್ಲಿ ಗಣಿಗಾರಿಕೆಗೆ ಹೊಸ ಗುತ್ತಿಗೆಗಳನ್ನು ನೀಡದಂತೆ ಆದೇಶಿಸಿತ್ತು.

ಈ ಪ್ರಕರಣದ ಮುಂದಿನ ವಿಚಾರಣೆ ಜನವರಿ 21, 2026ರಂದು ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...