ಬಿಹಾರ ಸರ್ಕಾರದ ಶೇ.65 ಮೀಸಲಾತಿ ರದ್ದು: ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರಿಂ ನಕಾರ

Date:

ಬಿಹಾರ ಸರ್ಕಾರವು ಹಿಂದುಳಿದ ವರ್ಗ ಹಾಗೂ ಎಸ್ಸಿ, ಎಸ್ಟಿ ಸಮುದಾಯದವರಿಗೆ ನೀಡಿದ್ದ ಶೇ 65 ರಷ್ಟು ಮೀಸಲಾತಿಯ ಆದೇಶವನ್ನು ರದ್ದುಗೊಳಿಸಿದ್ದ ಪಾಟ್ನಾ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. 

ಬಿಹಾರ ಸರ್ಕಾರ ಶೇ.50 ರಷ್ಟಿದ್ದ ಮೀಸಲಾತಿ ಮಿತಿಯನ್ನು ಶೇ. 65ಕ್ಕೆ ಹೆಚ್ಚಿಸಿದ್ದ ಆದೇಶವನ್ನು ಪಾಟ್ನಾ ಹೈಕೋರ್ಟ್ ರದ್ದುಗೊಳಿಸಿತ್ತು. ಹೈಕೋರ್ಟ್ ನಿರ್ಧಾರವನ್ನು ಪ್ರಶ್ನಿಸಿ ಬಿಹಾರ ಸರ್ಕಾರ ಸುಪ್ರಿಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.

ಬಿಹಾರ ವಿಧಾನಸಭೆಯು 2023ರಲ್ಲಿ ಅಂಗೀಕರಿಸಿದ್ದ ಮಸೂದೆಯನ್ನು ಪಾಟ್ನಾ ಹೈಕೋರ್ಟ್‌ನ ವಿಭಾಗೀಯ ಪೀಠ ಜೂನ್ 20ರಂದು ರದ್ದುಗೊಳಿಸಿತ್ತು. ರಾಜ್ಯ ಸರ್ಕಾರದ ನಿರ್ಧಾರವು ಸಂವಿಧಾನದ ವಿಧಿ 14,15 ಹಾಗೂ 16 ಉಲ್ಲಂಘನೆಯಾಗಿದೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಹಾರ ಸರ್ಕಾರ ಮಂಡಿಸಿದ್ದ ಮಸೂದೆಯನ್ವಯ ಪರಿಶಿಷ್ಟ ಜಾತಿ ಸಮುದಾಯ ಶೇ.20, ಒಬಿಸಿ ಮತ್ತು ಅತೀ ಹಿಂದುಳಿದ ಸಮುದಾಯ ಶೇ.43 ಮೀಸಲಾತಿ, ಎಸ್ಟಿ ಸಮುದಾಯ ಶೇ.2 ಮೀಸಲಾತಿಗೆ ಅರ್ಹರಾಗಿದ್ದರು. ಈ ಹೆಚ್ಚಳದಿಂದ ಒಬಿಸಿ ಮತ್ತು ಅತೀ ಹಿಂದುಳಿದ ಅಭ್ಯರ್ಥಿಗಳು(ಇಬಿಸಿ) ಶೇ.30 ಮೀಸಲಾತಿ ಹೆಚ್ಚಿಗೆ ಪಡೆಯಲಿದ್ದಾರೆ ಎಂದು ತಿಳಿಸಲಾಗಿತ್ತು.

ಈ ಮೊದಲು ಇಬಿಸಿ ಶೇ.18, ಒಬಿಸಿ ಶೇ.12, ಎಸ್ಸಿ ಶೇ.16 ಹಾಗೂ ಎಸ್ಟಿ ಸಮುದಾಯ ಶೇ.1 ಮೀಸಲಾತಿ ಪಡೆಯುತ್ತಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದೆಲ್ಲ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರವೇ?

ರಾಜ್ಯದ ಮಸೂದೆಯಲ್ಲಿ ಈ ಹಿಂದೆ ಹಿಂದುಳಿದ ಮಹಿಳೆಯರಿಗೆ ಕಲ್ಪಿಸಲಾಗಿದ್ದ ಶೇ.3 ಮೀಸಲಾತಿಯನ್ನು ರದ್ದುಪಡಿಸಲಾಗಿತ್ತು. ಹಾಗೆಯೇ ಕೇಂದ್ರ ಸರ್ಕಾರ ಆರ್ಥಿಕ ದುರ್ಬಲ ವರ್ಗಗಳಿಗೆ ನೀಡಿದ್ದ ಶೇ.10 ಮೀಸಲಾತಿಯನ್ನು ಹೊರತುಪಡಿಸಲಾಗಿತ್ತು.

ಬಿಹಾರ ರಾಜ್ಯಾದ್ಯಂತ ನಡೆಸಿದ ಜಾತಿ ಸಮೀಕ್ಷೆಯ ಸಂಪೂರ್ಣ ವರದಿಯನ್ನು ಸರ್ಕಾರ ಮಂಡಿಸಿದ ಕೆಲವೇ ಗಂಟೆಗಳ ನಂತರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಸೂದೆಯನ್ನು ಪ್ರಸ್ತಾಪಿಸಿದ್ದರು. ಬಿಹಾರದ 13.1 ಕೋಟಿ ಜನರಲ್ಲಿ ಶೇ. 36 ಜನರು ಇಬಿಸಿ ಮತ್ತು ಶೇ. 27.1 ಮಂದಿ ಒಬಿಸಿ ಸಮುದಾಯಕ್ಕೆ ಸೇರಿದ್ದಾರೆ ಎಂದು ವರದಿ ಹೇಳಿತ್ತು.

ಉಳಿದವರಲ್ಲಿ ಶೇ.19.7ರಷ್ಟು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಜನಸಂಖ್ಯೆ ಶೇ.1.7 ರಷ್ಟಿದೆ. ಸಾಮಾನ್ಯ ವರ್ಗದ ಜನಸಂಖ್ಯೆ 15.5 ಪ್ರತಿಶತವನ್ನು ಹೊಂದಿದೆ ಎಂದು ವರದಿ ಹೇಳಿತ್ತು.

ಇದರರ್ಥ ಬಿಹಾರದ ಶೇಕಡ 60 ಕ್ಕಿಂತ ಹೆಚ್ಚು ಜನರು ಒಬಿಸಿ ಅಥವಾ ಇಬಿಸಿ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಸರ್ಕಾರದ ವರದಿಯಲ್ಲಿ ಶೇ.42 ಎಸ್ಸಿ ಮತ್ತು ಎಸ್ಟಿ ಸಮುದಾಯ ಬಡತನ ರೇಖೆಗಿಂತ ಕೆಳಗಿದ್ದಾರೆ. ಈ ಸಮುದಾಯದ ಶೇ. 34 ಮಂದಿಯ ಮಾಸಿಕ ಆದಾಯ 6 ಸಾವಿರ ರೂ.ಕ್ಕಿಂತ ಕಡಿಮೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...