ಹೇಮಂತ್‌ ಸೊರೇನ್‌ಗೆ ಜಾಮೀನು ನೀಡಿಕೆ ಪ್ರಶ್ನಿಸಿದ್ದ ಇ.ಡಿ ಅರ್ಜಿ ಸುಪ್ರೀಂನಿಂದ ವಜಾ

Date:

ಜಾರ್ಖಂಡ್‌ ಸಿಎಂ ಹೇಮಂತ್‌ ಸೊರೇನ್‌ ಅವರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿದ್ದ ಜಾರಿ ನಿರ್ದೇಶನಾಲಯದ(ಇ.ಡಿ) ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಜಾರ್ಖಂಡ್‌ ಹೈಕೋರ್ಟ್ ಜೂನ್‌ 28ರಂದು ‘ಸಮರ್ಪಕವಾಗಿ ತರ್ಕಬದ್ಧ ಆದೇಶ’ ನೀಡಿದೆ ಎಂದು ಸುಪ್ರೀಂ ಕೋರ್ಟ್ ಉಲ್ಲೇಖಿಸಿದೆ. ಹೈಕೋರ್ಟ್ ಜಾಮೀನು ನೀಡಿರುವುದು ವಿಚಾರಣಾ ನ್ಯಾಯಾಲಯದ ನ್ಯಾಯಧೀಶರ ತೀರ್ಪು ಅಥವಾ ಇತರೆ ಯಾವುದೇ ವಿಚಾರಣೆಗಳಲ್ಲಿ ಪ್ರಭಾವ ಬೀರುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಹೇಮಂತ್‌ ಸೊರೇನ್‌ ಅವರನ್ನು ಜಾರಿ ನಿರ್ದೇಶನಾಲಯ ಜನವರಿ 31 ರಂದು ಬಂಧಿಸಿತ್ತು. ರಾಂಚಿಯಲ್ಲಿ 8.86 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಾಗ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಜಾರಿ ನಿರ್ದೇಶನಾಲಯವು ಕೋರ್ಟ್‌ಗೆ ತಿಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದೆಲ್ಲ ಸಿದ್ದರಾಮಯ್ಯರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸುವ ಷಡ್ಯಂತ್ರವೇ?

ಜನವರಿ 31 ರಂದು ಹೇಮಂತ್‌ ಸೊರೇನ್‌ ಅವರನ್ನು ಬಂಧಿಸುವ ಮುನ್ನ ಜಾರಿ ನಿರ್ದೇನಾಲಯ ಹಲವು ಬಾರಿ ಸಮನ್ಸ್ ಜಾರಿಗೊಳಿಸಿತ್ತು. ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದು ಅಕ್ರಮ ಹಣ ವರ್ಗಾವಣೆ ಕಾಯ್ದೆ ಅನ್ವಯ ಅಪರಾಧವಾಗುವುದಿಲ್ಲ ಎಂದು ಹೇಮಂತ್ ಸೊರೇನ್‌ ಪರ ವಕೀಲರಾದ ಕಪಿಲ್ ಸಿಬಲ್‌ ಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು.

ಭೂ ಹಗರಣವು ಸರ್ಕಾರಿ ಜಮೀನಿನ ಮಾಲೀಕತ್ವವನ್ನು ಬದಲಾಯಿಸುವ ಮತ್ತು ಅದನ್ನು ಬಿಲ್ಡರ್‌ಗಳಿಗೆ ಮಾರಾಟ ಮಾಡುವ “ದೊಡ್ಡ ದಂಧೆ” ಅನ್ನು ಒಳಗೊಂಡಿದೆ ಎಂದು ಸಂಸ್ಥೆ ಆರೋಪಿಸಿತ್ತು. ಈ ಪ್ರಕರಣದಲ್ಲಿ 2011ರ ಬ್ಯಾಚ್‌ನ ಐಎಎಸ್ ಅಧಿಕಾರಿ ಛಾವಿ ರಂಜನ್ ಅವರು ರಾಜ್ಯ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರು ಮತ್ತು ರಾಂಚಿಯ ಉಪ ಆಯುಕ್ತರಾಗಿ ಸೇವೆ ಸಲ್ಲಿಸಿದ 14 ಜನರನ್ನು ಇಲ್ಲಿಯವರೆಗೆ ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...