ಅತ್ಯಾಚಾರ ಅಪರಾಧದ ವ್ಯಾಪ್ತಿಗೆ ‘ಶವ ಸಂಭೋಗ’: ಕರ್ನಾಟಕದ ಮನವಿ ತಿರಸ್ಕರಿಸಿದ ಸುಪ್ರೀಂ

Date:

ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ ಶವ ಸಂಭೋಗ ಎಂಬುದು ಅತ್ಯಾಚಾರದ ಅಪರಾಧವಾಗದು ಎಂದು ಕರ್ನಾಟಕ ಹೈಕೋರ್ಟ್
2023ರಲ್ಲಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ನ್ಯಾಯಮೂರ್ತಿ ಸುಧಾಂಶು ಧುಲಿಯಾ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ಪೀಠವು, ಸಂಸತ್ತು ಈ ವಿಚಾರವಾಗಿ ಪರಿಶೀಲನೆ ನಡೆಸಬೇಕು. ಅಗತ್ಯವಿದ್ದರೆ ಕಾಯ್ದೆಯಲ್ಲಿ ಬದಲಾವಣೆ ಮಾಡಬಹುದು. ಈ ಸಂಬಂಧ ಸರ್ಕಾರ ಸಂಸತ್ತಿಗೆ ಪತ್ರ ಬರೆಯಬಹುದು ಎಂದು ತಿಳಿಸಿದೆ.

ಪ್ರಕರಣದ ಆರೋಪಿ 21 ವರ್ಷದ ಮಹಿಳೆಯನ್ನು ಕೊಲೆ ಮಾಡಿ ನಂತರ ಮೃತದೇಹದೊಂದಿಗೆ ಸಂಭೋಗ ನಡೆಸಿದ್ದ. ವಿಚಾರಣಾ ನ್ಯಾಯಾಲಯ ಐಪಿಸಿ ಸೆಕ್ಷನ್ 302ರ ಅಡಿಯಲ್ಲಿ ಕೊಲೆ ಮತ್ತು ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ ಅತ್ಯಾಚಾರ ಹಾಗೂ ಕೊಲೆ ಎರಡೂ ಕೃತ್ಯಗಳಿಗೆ ಶಿಕ್ಷೆ ವಿಧಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2023ರ ಮೇ ತಿಂಗಳಲ್ಲಿ ತೀರ್ಪು ನೀಡಿದ ಹೈಕೋರ್ಟ್ ಶವ ಸಂಭೋಗ ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ ಅತ್ಯಾಚಾರ ಎನಿಸಿಕೊಳ್ಳುವುದಿಲ್ಲ. ಅಲ್ಲದೆ ಅದು ಐಪಿಸಿ ಸೆಕ್ಷನ್ 377ರ ಅಡಿಯಲ್ಲಿ ಅಸ್ವಾಭಾವಿಕ ಲೈಂಗಿಕ ಕೃತ್ಯದ ವ್ಯಾಪ್ತಿಗೂ ಬರುವುದಿಲ್ಲ ಎಂದಿತ್ತು. ಐಪಿಸಿ ಸೆಕ್ಷನ್ 375 ಮತ್ತು 377ನ್ನು ಎಚ್ಚರಿಕೆಯಿಂದ ಓದಿದಾಗ, ಮೃತದೇಹವನ್ನು ಮನುಷ್ಯ ಅಥವಾ ವ್ಯಕ್ತಿ ಎಂದು ಕರೆಯಲು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗುತ್ತದೆ. ಆದ್ದರಿಂದ, 375 ಅಥವಾ 377ನೇ ಸೆಕ್ಷನ್‌ಗಳು ಅನ್ವಯಿಸಲಾಗುವುದಿಲ್ಲ ಎಂದು ಹೈಕೋರ್ಟ್ ವಿವರಿಸಿತ್ತು.

ಆದರೆ ಶವ ಸಂಭೋಗವನ್ನು ಅಪರಾಧ ಎಂದು ಪರಿಗಣಿಸುವುದಕ್ಕಾಗಿ ಐಪಿಸಿಯಲ್ಲಿ ಬದಲಾವಣೆಗಳನ್ನು ಮಾಡಲು ಕೇಂದ್ರ ಸರ್ಕಾರಕ್ಕೆ ಇದು ಸಕಾಲ. ಇಂತಹ ಕೃತ್ಯವನ್ನು ಅಪರಾಧೀಕರಿಸಲು ಐಪಿಸಿಯ ಸೆಕ್ಷನ್ 377 ಅನ್ನು ತಿದ್ದುಪಡಿ ಮಾಡಬೇಕು ಅಥವಾ ಪ್ರತ್ಯೇಕ ಸೆಕ್ಷನ್ ಜಾರಿಗೆ ತರಬೇಕು ಎಂತಲೂ ನ್ಯಾಯಾಲಯ ಹೇಳಿತ್ತು.

ಈ ಸುದ್ದಿ ಓದಿದ್ದೀರಾ? ಹಿಂಸಾಚಾರಕ್ಕೆ ಮಣಿಪುರ ಮುಖ್ಯಮಂತ್ರಿ ಕುಮ್ಮಕ್ಕು ಆರೋಪ: ಸರಕಾರಿ ಪ್ರಯೋಗಾಲಯದ ವರದಿ ಕೇಳಿದ ಸುಪ್ರೀಂ

ಕೊಲೆ ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಗೆ ಶಿಕ್ಷೆ ವಿಧಿಸಿತ್ತಾದರೂ ಮಹಿಳೆಯ ಮೃತದೇಹದ ಮೇಲೆ ಅತ್ಯಾಚಾರ ನಡೆದಿದ್ದ ಕಾರಣಕ್ಕೆ ಐಪಿಸಿ ಸೆಕ್ಷನ್ 375ರ ಅಡಿಯಲ್ಲಿ ಆರೋಪಿಯನ್ನು ಖುಲಾಸೆಗೊಳಿಸಲಾಗಿತ್ತು. ತೀರ್ಪು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.

ಸರ್ಕಾರದ ಪರವಾಗಿ ಹಾಜರಾದ ವಕೀಲ ಅಮನ್ ಪನ್ವರ್, ಮೃತ ವ್ಯಕ್ತಿ ಲೈಂಗಿಕ ಕ್ರಿಯೆಗಳಿಗೆ ಒಪ್ಪಿಗೆ ನೀಡುವುದು ಸಾಧ್ಯವಿಲ್ಲದ ಕಾರಣ, ಮೃತದೇಹದ ಮೇಲಿನ ಅತ್ಯಾಚಾರವನ್ನು ಸೆಕ್ಷನ್ ವ್ಯಾಪ್ತಿಗೆ ಒಳಪಡುವಂತೆ ಅದನ್ನು ವ್ಯಾಖ್ಯಾನಿಸಬೇಕು ಎಂದು ವಾದಿಸಿದರು.

ಸೆಕ್ಷನ್ 375(ಸಿ)ನಲ್ಲಿ ಬಳಸಲಾದ ದೇಹ ಎಂಬ ಪದವನ್ನು ‘ಮೃತದೇಹ’ ಎಂತಲೂ ಪರಿಗಣಿಸಬೇಕು. ಸೆಕ್ಷನ್ 375ರ ಏಳನೇ ವಿವರಣೆಯು ಮಹಿಳೆಯು ಒಪ್ಪಿಗೆಯನ್ನು ತಿಳಿಸಲು ಸಾಧ್ಯವಾಗದಿದ್ದಾಗಲೂ ಅದನ್ನು ಅತ್ಯಾಚಾರವೆಂದು ಪರಿಗಣಿಸಬೇಕು ಎನ್ನುತ್ತದೆ.

ಈ ವಿವರಣೆಯನ್ನು ಆಧರಿಸಿಯಾದರೂ ಮೃತದೇಹದ ಮೇಲಿನ ಅತ್ಯಾಚಾರವನ್ನು ಅಪರಾಧದ ವ್ಯಾಪ್ತಿಗೆ ತರಬೇಕು. ನ್ಯಾಯಾಲಯ ಸೆಕ್ಷನ್ 375ನ್ನು ಹೆಚ್ಚು ಆಳವಾಗಿ ಪರಿಗಣಿಸದೆ ಮೃತ ದೇಹದ ಮೇಲಿನ ಅತ್ಯಾಚಾರವನ್ನೂ ಒಳಗೊಳ್ಳುವಂತೆ ಉದಾರವಾಗಿ ಅರ್ಥೈಸಬೇಕು ಎಂದು ಪನ್ವರ್ ಹೇಳಿದರು. ಮೃತದೇಹಗಳಿಗೂ ಘನತೆ ಮತ್ತು ನ್ಯಾಯಪರತೆ ಅನ್ವಯಿಸಬೇಕು ಎಂದು ಪಂಡಿತ್ ಪರಮಾನಂದ ಕಟಾರ ಮತ್ತು ಭಾರತ ಒಕ್ಕೂಟ ನಡುವಿನ ಪ್ರಕರಣಕ್ಕೆ ಸಂಬಂಧಿಸಿದಂತೆ 1995ರಲ್ಲಿ ನೀಡಿದ್ದ ತೀರ್ಪನ್ನು ಉಲ್ಲೇಖಿಸಿ ಅವರು ವಾದ ಮಂಡಿಸಿದರು.

ಶವ ಸಂಭೋಗವನ್ನು ಅತ್ಯಾಚಾರದ ವ್ಯಾಪ್ತಿಗೆ ತರುವುದಕ್ಕಾಗಿ ಪ್ರಭುತ್ವ ಮತ್ತು ಬ್ರೋಬೆಕ್ ನಡುವಣ ಪ್ರಕರಣದಲ್ಲಿ ಅಮೆರಿಕದ ಟೆನ್ನೆಸ್ಸೀ ಪ್ರಾಂತದ ಸುಪ್ರೀಂ ಕೋರ್ಟ್ ಸೇರಿದಂತೆ ಅಂತಾರಾಷ್ಟ್ರೀಯ ನ್ಯಾಯಾಲಯಗಳು ದಂಡ ಸಂಹಿತೆಯ ಸೆಕ್ಷನ್‌ಗಳನ್ನು ವಿಸ್ತರಿಸಿವೆ ಎಂದು ಅವರು ಪ್ರಸ್ತಾಪಿಸಿದರು. ಆದರೂ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...