ಸಂಜೀವ್ ಭಟ್ ಜೈಲು ಶಿಕ್ಷೆ ಅಮಾನತು ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್

Date:

1996ರ ಮಾದಕ ದ್ರವ್ಯ ವಶ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ 20 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ವಿಜಯ್ ಬಿಷ್ಣೋಯ್ ಅವರ ಪೀಠವು ಭಟ್ ಅವರ ಮೇಲ್ಮನವಿಯನ್ನು ಸ್ವೀಕರಿಸಲು ನಿರಾಕರಿಸಿತು.

ಸುಮಾರು ಮೂರು ದಶಕಗಳ ಹಿಂದೆ ರಾಜಸ್ಥಾನ ಮೂಲದ ವಕೀಲ ಸುಮೇರ್‌ಸಿಂಗ್ ರಾಜಪುರೋಹಿತ್ ಅವರನ್ನು ನಕಲಿ ಮಾದಕವಸ್ತು ಪ್ರಕರಣದಲ್ಲಿ ಸಿಲುಕಿಸುವಲ್ಲಿ ಭಟ್ ಅವರ ಪಾತ್ರ ಇತ್ತು ಎಂಬ ಆರೋಪದಲ್ಲಿ ಗುಜರಾತ್‌ನ ಪಾಲನ್‌ಪುರದ ಸೆಷನ್ಸ್ ನ್ಯಾಯಾಲಯವು ಭಟ್ ಅವರನ್ನು ದೋಷಿ ಎಂದು ಘೋಷಿಸಿತು. ಘಟನೆಯ ಸಮಯದಲ್ಲಿ, ಭಟ್ ಬನಸ್ಕಾಂತ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದರು. ಅವರ ತಂಡವು ಹೋಟೆಲ್ ಕೋಣೆಯಲ್ಲಿ ಮಾದಕ ದ್ರವ್ಯಗಳನ್ನು ಪತ್ತೆಹಚ್ಚಲಾಗಿದೆ ಎಂದು ಆರೋಪಿಸಿ ರಾಜ್‌ಪುರೋಹಿತ್ ಅವರನ್ನು ಬಂಧಿಸಿತು. ಆದರೆ, ರಾಜಸ್ಥಾನ ಪೊಲೀಸರು ನಡೆಸಿದ ತನಿಖೆಯಲ್ಲಿ ಇಡೀ ಘಟನೆಯು ಒಂದು ಪೂರ್ವಯೋಜಿತ ಎಂದು ಕಂಡುಬಂದಿತ್ತು. ಮಾಜಿ ಪೊಲೀಸ್ ಇನ್ಸ್‌ಪೆಕ್ಟರ್ ಐ.ಬಿ. ವ್ಯಾಸ್ 1999ರಲ್ಲಿ ಗುಜರಾತ್ ಹೈಕೋರ್ಟ್‌ಗೆ ಸಮಗ್ರ ತನಿಖೆಗೆ ಒತ್ತಾಯಿಸಿ ಅರ್ಜಿ ಸಲ್ಲಿಸಿದ ನಂತರ ಈ ಪ್ರಕರಣ ಮತ್ತೆ ಬೆಳಕಿಗೆ ಬಂದಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2015 ರಲ್ಲಿ ಪೊಲೀಸ್ ಸೇವೆಯಿಂದ ವಜಾಗೊಳಿಸಲ್ಪಟ್ಟ ಭಟ್ ಅವರನ್ನು ಸೆಪ್ಟೆಂಬರ್ 2018 ರಲ್ಲಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಯಿತು. ಅಂದಿನಿಂದ ಪಾಲನ್‌ಪುರ ಉಪ-ಜೈಲಿನಲ್ಲಿದ್ದಾರೆ. ಕಳೆದ ವರ್ಷ, ನ್ಯಾಯಾಧೀಶರ ಪಕ್ಷಪಾತದ ಆರೋಪದ ಮೇಲೆ ವಿಚಾರಣೆಯನ್ನು ವರ್ಗಾಯಿಸಲು ಕೋರಿದ್ದ ಅವರ ಮತ್ತೊಂದು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು ಮತ್ತು ಅವರಿಗೆ 3 ಲಕ್ಷ ರೂ. ದಂಡ ವಿಧಿಸಿತ್ತು.

2002 ಗುಜರಾತ್ ಗಲಭೆಯಲ್ಲಿ ಆಗಿನ ಗುಜರಾತ್‌ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಪಾತ್ರವಿದೆ ಎಂದು ಸಂಜೀವ್‌ ಭಟ್ ವರದಿ ನೀಡಿರುವುದು ಬಿಜೆಪಿಯ ಕೆಂಗಣ್ಣಿಗೆ ಕಾರಣವಾಗಿದೆ ಎಂಬ ಭಟ್‌ ಕುಟುಂಬ, ಸ್ನೇಹಿತರು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...