ಪ್ರತಿಮೆಗಳ ನಿರ್ಮಾಣಕ್ಕೆ ಸಾರ್ವಜನಿಕ ಹಣ ಬಳಸಬೇಡಿ: ಸುಪ್ರೀಂ ಕೋರ್ಟ್ ಆದೇಶ

Date:

ತಮಿಳುನಾಡಿನ ತಿರುನೆಲ್ವೆಲಿ ಜಿಲ್ಲೆಯಲ್ಲಿ ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರ ಕಂಚಿನ ಪ್ರತಿಮೆಯನ್ನು ಸ್ಥಾಪಿಸಲು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ತಿರಸ್ಕರಿಸಿದೆ.

ಅದಕ್ಕೆ ಅನುಮತಿಯಿಲ್ಲ. ನಿಮ್ಮ ಹಿಂದಿನ ನಾಯಕರನ್ನು ವೈಭವೀಕರಿಸಲು ನೀವು ಸಾರ್ವಜನಿಕರ ಹಣವನ್ನು ಏಕೆ ಬಳಸುತ್ತೀರಿ ಎಂದು ನ್ಯಾಯಮೂರ್ತಿಗಳಾದ ವಿಕ್ರಮನಾಥ ಮತ್ತು ಪ್ರಶಾಂತಕುಮಾರ ಮಿಶ್ರಾ ಅವರ ಪೀಠವು ಸಂಕ್ಷಿಪ್ತ ವಿಚಾರಣೆ ವೇಳೆ ಪ್ರಶ್ನಿಸಿತು.

ರಾಜ್ಯ ಸರ್ಕಾರದ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಪಿ.ವಿಲ್ಸನ್ ಅವರು, ಕಮಾನು ನಿರ್ಮಾಣವನ್ನು ಪ್ರಶ್ನಿಸಲಾಗಿಲ್ಲ, ಹೀಗಾಗಿ ಅದಕ್ಕೆ ಅವಕಾಶ ನೀಡಬಹುದೇ ಎನ್ನುವುದನ್ನು ನ್ಯಾಯಾಲಯವು ಸ್ಪಷ್ಟಪಡಿಸಬೇಕು. ಈಗಾಗಲೇ ಅದಕ್ಕಾಗಿ 30 ಲಕ್ಷ.ರೂ.ಗಳನ್ನು ವ್ಯಯಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಈ ವಿಷಯದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ನ್ಯಾಯಾಲಯವು ಮದ್ರಾಸ್ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿದ್ದ ರಾಜ್ಯದ ಅರ್ಜಿಯನ್ನು ವಜಾಗೊಳಿಸಿತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದೇವರು-ಧರ್ಮದ ದುರುಪಯೋಗ ಸಮಾಜಕ್ಕೆ ಒಳಿತು ಮಾಡುವುದಿಲ್ಲ

ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಮೆಗಳ ಸ್ಥಾಪನೆಗೆ ಅನುಮತಿಯನ್ನು ನೀಡುವ ಆದೇಶವನ್ನು ಸರಕಾರವು ಹೊರಡಿಸಲು ಸಾಧ್ಯವಿಲ್ಲ ಎಂದು ಹೇಳಿದ್ದ ಮದ್ರಾಸ್ ಹೈಕೋರ್ಟ್‌, ‘ಲೀಡರ್ಸ್ ಪಾರ್ಕ್’ ರಚನೆಯು ಈ ದೇಶದ ಯುವಜನರಿಗೆ ಹೆಚ್ಚು ಉಪಯುಕ್ತವಾಗುತ್ತದೆ. ಏಕೆಂದರೆ ಅವರು ನಾಯಕರ ಆಲೋಚನೆಗಳು ಮತ್ತು ಸಿದ್ಧಾಂತಗಳನ್ನು ತಿಳಿದುಕೊಳ್ಳಬಹುದು ಎಂದು ತನ್ನ ಆದೇಶದಲ್ಲಿ ತಿಳಿಸಿತ್ತು.

‘ಲೀಡರ್ಸ್ ಪಾರ್ಕ್’ರಚನೆಗೆ ದೃಢವಾದ ಪ್ರಯತ್ನಗಳನ್ನು ಮಾಡುವ ಬದಲು ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಮೆಗಳ ಸ್ಥಾಪನೆಗೆ ಅನುಮತಿ ನೀಡುವ ಆದೇಶಗಳನ್ನು ಸರ್ಕಾರವು ಹೊರಡಿಸುವಂತಿಲ್ಲ. ಇಂತಹ ಅನುಮತಿಗಳನ್ನು ನೀಡಿದರೆ ಭಾರೀ ಸಂಚಾರ ದಟ್ಟಣೆ ಮತ್ತು ಇತರ ಕಿರಿಕಿರಿಗಳಿಂದಾಗಿ ಸಾರ್ವಜನಿಕರು ತೊಂದರೆಯನ್ನು ಅನುಭವಿಸುವಂತಾಗುತ್ತದೆ ಎಂದು ಅದು ಹೇಳಿತ್ತು.

ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಮೆಗಳನ್ನು ಸ್ಥಾಪಿಸಲು ಯಾವುದೇ ಅನುಮತಿ ನೀಡಬಾರದು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿರುವಾಗ ರಾಜ್ಯ ಸರ್ಕಾರವು ಅಂತಹ ಅನುಮತಿಯನ್ನು ನೀಡುವ ಯಾವುದೇ ಆದೇಶಗಳನ್ನು ಹೊರಡಿಸುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...