ಒಬ್ಬರೇ ಅಭ್ಯರ್ಥಿ ಕಣದಲ್ಲಿದ್ದರೂ ‘ನೋಟಾ’ ಚಲಾವಣೆಯ ಅವಕಾಶಕ್ಕಾಗಿ ಮತದಾನ; ಸುಪ್ರೀಂ ಕೋರ್ಟ್‌ ಪರಿಶೀಲನೆ

Date:

ಚುನಾವಣಾ ಸ್ಪರ್ಧೆಯಲ್ಲಿ ಒಬ್ಬರೇ ಅಭ್ಯರ್ಥಿ ಕಣದಲ್ಲಿದ್ದರೂ, ‘ನನ್ ಆಫ್‌ ದಿ ಅಬೌ’ (ನೋಟಾ)ಗೆ ಮತ ಚಲಾಯಿಸಲು ಇಚ್ಛಿಸುವ ಮತದಾರರ ಹಕ್ಕನ್ನು ಖಾತ್ರಿ ಪಡಿಸುವ ಪ್ರಸ್ತಾಪವನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್‌ ಒಪ್ಪಿಕೊಂಡಿದೆ. ಒಂದು ವೇಳೆ, ಪ್ರಸ್ತಾಪಕ್ಕೆ ಸುಪ್ರೀಂ ಕೋರ್ಟ್‌ ಸಮ್ಮತಿ ನೀಡಿದರೆ, ಏಕೈಕ ಅಭ್ಯರ್ಥಿ ಸ್ಪರ್ಧೆಯಲ್ಲಿದ್ದಾರೆ ಎಂಬ ಕಾರಣಕ್ಕಾಗಿ ಚುನಾವಣೆ ನಡೆಸದೆ ಅವಿರೋಧವಾಗಿ ಆಯ್ಕೆ ಮಾಡುವ ಪದ್ದತಿ ರದ್ದಾಗಲಿದೆ.

2013ರಲ್ಲಿ ಮತದಾನದಲ್ಲಿ ಮತದಾರರ ಪರಿಪೂರ್ಣ ಹಕ್ಕನ್ನು ಖಾತ್ರಿ ಪಡಿಸುವ ಉದ್ದೇಶದಿಂದ ಚುನಾವಣಾ ಪ್ರಕ್ರಿಯೆಯಲ್ಲಿ ಬ್ಯಾಲೆಟ್‌ ಪೇಪರ್ ಅಥವಾ ಇವಿಎಂಗಳಲ್ಲಿ ‘ನೋಟಾ’ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ಸುಪ್ರೀಂ ಕೋರ್ಟ್‌ ಆದೇಶಿಸಿತ್ತು. ಅಂದಿನಿಂದ ಎಲ್ಲ ಚುನಾವಣೆಗಳಲ್ಲಿಯೂ ಮತಪತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿಯ ಜೊತಗೆ ನೋಟಾವನ್ನು ಅಳವಡಿಸಲಾಗುತ್ತಿದೆ. ಆದಾಗ್ಯೂ, ನೋಟಾಗೆ ಮತದಾರರಿಂದ ಉತ್ತಮ ಸ್ಪಂದನೆ ಇಲ್ಲ. ನೋಟಾ ವ್ಯವಸ್ಥೆಯು ವಿಫಲ ಪರಿಕಲ್ಪನೆ ಎಂದು ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗ ವಾದಿಸುತ್ತಿವೆ.

ಇದೀಗ, ಏಕೈಕ ಅಭ್ಯರ್ಥಿ ಇದ್ದಾರೆ ಎಂಬ ಕಾರಣಕ್ಕೆ ಮತದಾನ ನಡೆಸದೇ ಇರುವುದು, ಆ ಸ್ಪರ್ಧಿಯ ವಿರುದ್ಧವಾಗಿ ಮತಚಲಾಯಿಸುವವರ ಮತ್ತು ನೋಟಾಗೆ ಮತಚಲಾಯಿಸಲು ಬಯಸುವವರ ಹಕ್ಕನ್ನು ಕಸಿದುಕೊಳ್ಳುತ್ತದೆ. ನೋಟಾವನ್ನು ಸ್ಪರ್ಧಿಯಾಗಿ ಪರಿಗಣಿಸುವ ಮತ್ತು ಮತದಾರರ ಹಕ್ಕನ್ನು ಖಾತ್ರಿಪಡಿಸುವ ಉದ್ದೇಶದಿಂದ ಏಕೈಕ ಅಭ್ಯರ್ಥಿ ಇದ್ದರೂ, ಮತದಾನ ನಡೆಸಬೇಕು ಎಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತಾಪದ ಅರ್ಜಿ ಸಲ್ಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಸೂರ್ಯಕಾಂತ, ಉಜ್ಜಲ್ ಭೂಯಾನ್ ಹಾಗೂ ಎನ್.ಕೆ ಸಿಂಗ್ ಅವರಿದ್ದ ಪೀಠವು ವಿಚಾರಣೆ ನಡೆಸಿದೆ. “ಇದೊಂದು ಆಸಕ್ತಿದಾಯಕ ಪ್ರಶ್ನೆಯಾಗಿದೆ. ಕಣದಲ್ಲಿರುವ ಏಕೈಕ ಅಭ್ಯರ್ಥಿಯನ್ನೂ ಮತದಾರ ಒಪ್ಪಿಕೊಳ್ಳುವುದಿಲ್ಲ ಎಂದಾದರೆ, ಲೋಕಸಭೆ ಮತ್ತು ವಿಧಾನಸಭೆಯಲ್ಲಿ ತಮ್ಮ ಪ್ರತಿನಿಧಿಯಾಗಿ ಯಾರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು” ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಲೇಖನ ಓದಿದ್ದೀರಾ?: ಬಿಹಾರದಲ್ಲಿ ಎದುರಾಳಿಗಳ ಕೈಕಾಲು ಕಟ್ಟಿ, ತಾನು ಗೆಲ್ಲುವುದು ಬಿಜೆಪಿ ಹುನ್ನಾರ

“ಸ್ಪರ್ಧೆಯಲ್ಲಿರುವ ಏಕೈಕ ಅಭ್ಯರ್ಥಿ ಕುರಿತು ಮತದಾರರಲ್ಲಿ ಅಸಮಾಧಾನ ಇದ್ದರೆ, ಮತದಾರರು ದೊಡ್ಡ ಸಂಖ್ಯೆಯಲ್ಲಿ ಬಂದು ನೋಟಾ ಆಯ್ಕೆ ಮಾಡಬಹುದು. ಅಭ್ಯರ್ಥಿಗಿಂತ ಹೆಚ್ಚು ಮತಗಳು ನೋಟಾಗೆ ಚಲಾವಣೆಯಾದರೆ, ಆ ಸಂದರ್ಭದಲ್ಲಿ ಏನು ಮಾಡಬೇಕು? ಇದರ ಬಗ್ಗೆ ಅಧ್ಯಯನ ನಡೆಸುವ ಅಗತ್ಯವಿದೆ” ಎಂದು ಅವರು ಹೇಳಿದ್ದಾರೆ.

ಅಭ್ಯರ್ಥಿಗಿಂತ ಹೆಚ್ಚು ಮತಗಳು ನೋಟಾಗೆ ಚಲಾವಣೆ ಆದ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಗಂಭೀರ ಅಧ್ಯಯನ ನಡೆದು, ನಿರ್ಧಾರಗಳು ಬಂದರೆ, ಬಹುಶಃ ಕಣದಲ್ಲಿದ್ದ ಏಕೈಕ ಅಭ್ಯರ್ಥಿಯ ಆಯ್ಕೆಯನ್ನೂ ರದ್ದಪಡಿಸುವ ವ್ಯವಸ್ಥೆ ಜಾರಿಗೆ ಬರುವ ಸಾಧ್ಯತೆಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...