ಕುಂಭಮೇಳದಲ್ಲಿ ಕಾಲ್ತುಳಿತ: ದುರದೃಷ್ಟಕರ ಎಂದ ಸುಪ್ರೀಂ ಕೋರ್ಟ್

Date:

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಜನವರಿ 29 ರಂದು 30 ಜನರ ಸಾವಿಗೆ ಕಾರಣವಾದ ಕಾಲ್ತುಳಿತ ಘಟನೆಯನ್ನು ಸೋಮವಾರ ದುರದೃಷ್ಟಕರ ಎಂದು ಕರೆದ ಸುಪ್ರೀಂ ಕೋರ್ಟ್, ಉತ್ತರ ಪ್ರದೇಶದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ತಿರಸ್ಕರಿಸಿದೆ.

ಅರ್ಜಿದಾರ ವಕೀಲ ವಿಶಾಲ್ ತಿವಾರಿ ಅವರಿಗೆ ಅಲಹಾಬಾದ್ ಹೈಕೋರ್ಟ್‌ಗೆ ಹೋಗುವಂತೆ ನ್ಯಾಯಾಲಯವು ತಿಳಿಸಿದೆ.

“ಇದೊಂದು ದುರದೃಷ್ಟಕರ ಘಟನೆ. ಈಗಾಗಲೇ ನ್ಯಾಯಾಂಗ ಆಯೋಗವನ್ನು ರಚಿಸಲಾಗಿದೆ. ಈ ಕುರಿತು ಹೈಕೋರ್ಟ್ ಸಂಪರ್ಕಿಸಿ,” ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಕಾಲ್ತುಳಿತ ಘಟನೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ವಿಶಾಲ್ ತಿವಾರಿ ಅವರಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ವಿಜಯನಗರ | ಮಹಿಳಾ ಸಂಘಟನೆಗಳಿಂದ ಮೌನ ಜಾಗೃತಿ ಅಭಿಯಾನ

ರಾಜ್ಯವನ್ನು ಪ್ರತಿನಿಧಿಸಿದ ಹಿರಿಯ ನ್ಯಾಯವಾದಿ ಮುಕುಲ್ ರೋಹ್ಟಗಿ, ಕಾಲ್ತುಳಿತ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಯುತ್ತಿದೆ ಎಂದು ಪೀಠಕ್ಕೆ ತಿಳಿಸಿದರು. ಹೈಕೋರ್ಟ್‌ನಲ್ಲಿ ಸಲ್ಲಿಸಲಾದ ಇದೇ ರೀತಿಯ ಅರ್ಜಿಯನ್ನೂ ಅವರು ಉಲ್ಲೇಖಿಸಿದರು.

ವಕೀಲ ವಿಶಾಲ್ ತಿವಾರಿ ಸಲ್ಲಿಸಿದ ಅರ್ಜಿಯಲ್ಲಿ, ಆದಿತ್ಯನಾಥ್ ಸರ್ಕಾರವು ಮಹಾ ಕುಂಭಮೇಳದಲ್ಲಿ, ವಿಶೇಷವಾಗಿ ಮೌನಿ ಅಮವಾಸ್ಯೆಯಂದು ಕಾಲ್ತುಳಿತವನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ವಾದಿಸಿದರು. ಆಡಳಿತದಲ್ಲಿ ಲೋಪಗಳಾಗಿವೆ, ಕುಂಭಮೇಳದಲ್ಲಿ ಭಕ್ತರಿಗಾಗಿ ಮೀಸಲಾದ ಸಹಾಯ ಕೇಂದ್ರವನ್ನು ಸ್ಥಾಪಿಸಬೇಕೆಂದು ಅವರು ಒತ್ತಾಯಿಸಿದರು.

ಅರ್ಜಿದಾರರು ಎಲ್ಲ ರಾಜ್ಯಗಳು ಜನಸಂದಣಿ ನಿರ್ವಹಣಾ ನೀತಿಗಳನ್ನು ಸುಧಾರಿಸಲು ನಿರ್ದೇಶಿಸುವಂತೆ ನ್ಯಾಯಾಲಯವನ್ನು ಕೋರಿದರು. ಉತ್ತರ ಪ್ರದೇಶ ಸರ್ಕಾರದ ಸಮನ್ವಯದೊಂದಿಗೆ ವಿವಿಧ ರಾಜ್ಯಗಳ ವೈದ್ಯಕೀಯ ತಂಡಗಳನ್ನು ನಿಯೋಜಿಸುವಂತೆ ಆದೇಶಿಸುವಂತೆ ನ್ಯಾಯಾಲಯವನ್ನು ಕೋರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...