ಆನ್‌ಲೈನ್ ಜೂಜಾಟ ನಿಷೇಧ ಕೋರಿ ಅರ್ಜಿ: ಕೇಂದ್ರದ ಸಹಾಯ ಕೋರಿದ ಸುಪ್ರೀಂ ಕೋರ್ಟ್

Date:

ಸಾಮಾಜಿಕ ಮತ್ತು ಇ-ಸ್ಪೋರ್ಟ್ಸ್ ಆಟಗಳ ಸೋಗಿನಲ್ಲಿ ಕಾರ್ಯನಿರ್ವಹಿಸುವ ಆನ್‌ಲೈನ್ ಜೂಜಾಟ ಮತ್ತು ಬೆಟ್ಟಿಂಗ್ ವೇದಿಕೆಗಳನ್ನು ನಿಷೇಧಿಸಲು ನಿರ್ದೇಶನ ಕೋರಿ ಸಲ್ಲಿಸಲಾದ ಅರ್ಜಿಯಲ್ಲಿ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರದ ಸಹಾಯವನ್ನು ಕೋರಿದೆ.

ನ್ಯಾಯಾಧೀಶರಾದ ಜೆ.ಬಿ. ಪಾರ್ದಿವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರ ದ್ವಿಸದಸ್ಯ ಪೀಠವು, ಕೇಂದ್ರ ಸರ್ಕಾರದ ವಕೀಲರಿಗೆ ಪಿಐಎಲ್‌ನ ಪ್ರತಿಯನ್ನು ನೀಡುವಂತೆ ಅರ್ಜಿದಾರರ ಪರವಾಗಿ ಹಾಜರಾದ ವಕೀಲರಿಗೆ ಸೂಚಿಸಿದೆ.

ಇದನ್ನು ಓದಿದ್ದೀರಾ? ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಸಿ ಭಾರತಿ ಅವರು ಅರ್ಜಿಯನ್ನು ಪರಿಶೀಲಿಸಲು ಮತ್ತು ಮುಂದಿನ ವಿಚಾರಣೆಯ ದಿನಾಂಕದಂದು ನಮಗೆ ಸಹಾಯ ಮಾಡಲು ನಾವು ವಿನಂತಿಸುತ್ತೇವೆ. ಎರಡು ವಾರಗಳ ನಂತರ ವಿಚಾರಣೆ ನಡೆಸಲಾಗುವುದು” ಎಂದು ಪೀಠವು ಆದೇಶದಲ್ಲಿ ತಿಳಿಸಿದೆ.

ಸಾಮಾಜಿಕ ಮತ್ತು ಇ-ಸ್ಪೋರ್ಟ್ಸ್ ಆಟಗಳ ಸೋಗಿನಲ್ಲಿ ಕಾರ್ಯನಿರ್ವಹಿಸುವ ಆನ್‌ಲೈನ್ ಜೂಜಾಟ ಮತ್ತು ಬೆಟ್ಟಿಂಗ್ ವೇದಿಕೆಗಳನ್ನು ನಿಷೇಧಿಸಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಥಿಂಕ್ ಟ್ಯಾಂಕ್ ಸೆಂಟರ್ ಫಾರ್ ಅಕೌಂಟೆಬಿಲಿಟಿ ಅಂಡ್ ಸಿಸ್ಟಮ್ಯಾಟಿಕ್ ಚೇಂಜ್ (ಸಿಎಎಸ್‌ಸಿ) ಅರ್ಜಿ ಸಲ್ಲಿಸಿದೆ.

ನೋಂದಾಯಿತವಲ್ಲದ ಗೇಮಿಂಗ್ ಅಪ್ಲಿಕೇಶನ್‌ಗಳನ್ನು ಒಳಗೊಂಡ ಯಾವುದೇ ಹಣಕಾಸಿನ ವಹಿವಾಟುಗಳನ್ನು ಅನುಮತಿಸದಂತೆ ಆರ್‌ಬಿಐ, ಎನ್‌ಪಿಸಿಐ ಮತ್ತು ಯುಪಿಐ ಪ್ಲಾಟ್‌ಫಾರ್ಮ್‌ಗಳಿಗೆ ನಿರ್ದೇಶನ ನೀಡುವಂತೆಯೂ ಅರ್ಜಿಯಲ್ಲಿ ಕೋರಲಾಗಿದೆ. 2 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಪಾವತಿಸದ ತೆರಿಗೆ ಬಾಕಿ ಇರುವ ಗೇಮಿಂಗ್ ಕಂಪನಿಗಳ ವಿರುದ್ಧ ಇಂಟರ್‌ಪೋಲ್, ಸಿಬಿಐ ಮತ್ತು ಇಡಿ ಮೂಲಕ ತನಿಖೆ ನಡೆಸಬೇಕು, ತೆರಿಗೆ ವಸೂಲಿ ನಡೆಸಬೇಕು ಎಂದೂ ಕೋರಲಾಗಿದೆ.

“ಭಾರತದ ಬಹುತೇಕ ರಾಜ್ಯಗಳಲ್ಲಿ ಬೆಟ್ಟಿಂಗ್ ಮತ್ತು ಜೂಜಾಟವನ್ನು ಕಾನೂನುಬಾಹಿರ ಚಟುವಟಿಕೆಗಳೆಂದು ಪರಿಗಣಿಸಲಾಗುತ್ತದೆ. ಆದರೆ ಸರ್ಕಾರ ಮತ್ತು ಗೇಮಿಂಗ್ ಪ್ಲಾಟ್‌ಫಾರ್ಮ್‌ಗಳು ಹಲವು ಅರ್ಜಿಗಳನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಿವೆ. ಸರ್ಕಾರ ಮತ್ತು ಗೇಮಿಂಗ್ ಪ್ಲಾಟ್‌ಫಾರ್ಮ್‌ಗಳು ಅಫಿಡವಿಟ್‌ಗಳನ್ನು ಸಲ್ಲಿಸಿವೆ. ಇದನ್ನು ವಿಶ್ಲೇಷಿಸಿದಾಗ 65 ಕೋಟಿಗೂ ಹೆಚ್ಚು ಜನರು ಇಂತಹ ಆಟಗಳನ್ನು ಆಡುತ್ತಿದ್ದಾರೆ ಎಂದು ತಿಳಿದುಬಂದಿದೆ” ಎಂದು ವರದಿಯಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...