ಸಿಎಎ ಜಾರಿ | ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ನೋಟಿಸ್

Date:

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ-2019 (ಸಿಎಎ) ವಿರುದ್ಧ ಸಲ್ಲಿಕೆಯಾಗಿರುವ ಸುಮಾರು 200ಕ್ಕೂ ಅಧಿಕ ಅರ್ಜಿಗಳ ವಿಚಾರಣೆಯನ್ನು ಇಂದು ಕೈಗೆತ್ತಿಕೊಂಡ ಸುಪ್ರೀ ಕೋರ್ಟ್, ಮಧ್ಯಂತರ ತಡೆ ನೀಡಲು ನಿರಾಕರಿಸಿದೆ. ಆದರೆ, ಸಿಎಎ ಕಾಯ್ದೆಯ ನಿಯಮಗಳಿಗೆ ಸಂಬಂಧಿಸಿ ಸಲ್ಲಿಸಲಾಗಿರುವ ಅರ್ಜಿಗೆ ಉತ್ತರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿದೆ.

ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಸೇರಿದಂತೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರನ್ನೊಳಗೊಂಡ ಪೀಠವು ಇಂದು ತಡೆಯಾಜ್ಞೆಯ ಮನವಿಯ ಕುರಿತು ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದ್ದು, ಏಪ್ರಿಲ್ 2ರೊಳಗೆ ಅದರ ಉತ್ತರವನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ನಿರ್ದೇಶನ ನೀಡಿದೆ.

“ತಡೆಯಾಜ್ಞೆ ಅರ್ಜಿಗಳ ಬಗ್ಗೆ ಏಪ್ರಿಲ್ 2ರೊಳಗೆ ಐದು ಪುಟಗಳಿಗೆ ಸೀಮಿತವಾದ ಉತ್ತರವನ್ನು ಕೇಂದ್ರ ಸರ್ಕಾರವು ಸಲ್ಲಿಕೆ ಮಾಡಬೇಕು. ಪ್ರತಿವಾದಿಗಳು ಏಪ್ರಿಲ್ 8ರೊಳಗೆ ಅರ್ಜಿಗೆ 5 ಪುಟಗಳ ಉತ್ತರವನ್ನು ನೀಡಲಿ. ನಂತರ ಏಪ್ರಿಲ್ 9ರಂದು ಮುಂದಿನ ವಿಚಾರಣೆ ನಾವು ನಡೆಸುತ್ತೇವೆ” ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ತಡೆ ಕೋರಿ ಸಲ್ಲಿಸಿರುವ ಮನವಿಗೆ ಕೇಂದ್ರ ಸರ್ಕಾರದ ಪ್ರತಿಕ್ರಿಯೆಯನ್ನು ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ಕೋರಿದರು. ಇದಕ್ಕೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್ ವಿರೋಧಿಸಿದರು.

ಇದನ್ನು ಓದಿದ್ದೀರಾ? ಬೆಂಗಳೂರು | ನಗರ್ತಪೇಟೆ ಘಟನೆಗೆ ಕೋಮು ಬಣ್ಣ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು 

ಕೊನೆಗೆ ಮೂವರು ನ್ಯಾಯಾಧೀಶರಿದ್ದ ನ್ಯಾಯ ಪೀಠವು, ಮೂರು ವಾರಗಳ ನಂತರ ಪ್ರಕ್ರಿಯೆಗಳನ್ನು ಪಟ್ಟಿ ಮಾಡುವಂತೆ ನಿರ್ದೇಶನ ನೀಡಿ, ಅರ್ಜಿಯನ್ನು ಏಪ್ರಿಲ್ 9ಕ್ಕೆ ಮತ್ತೆ ವಿಚಾರಣೆಗೆ ತೆಗೆದುಕೊಳ್ಳುವುದಾಗಿ ತಿಳಿಸಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...