ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಪ್ರಶ್ನಿಸಿ ಅರ್ಜಿ: ಚುನಾವಣಾ ಆಯೋಗದ ಪ್ರತಿಕ್ರಿಯೆ ಕೋರಿದ ಸುಪ್ರೀಂ

Date:

ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ನಡೆಸುವುದನ್ನು ಪ್ರಶ್ನಿಸಿ ಡಿಎಂಕೆ, ಸಿಪಿಐ(ಎಂ), ಕಾಂಗ್ರೆಸ್‌ ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಮಂಗಳವಾರ ನಡೆಸಿದ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗದ ಪ್ರತಿಕ್ರಿಯೆ ಕೋರಿದೆ.

ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಹೊಸ ಅರ್ಜಿಗಳಿಗೆ ಎರಡು ವಾರಗಳಲ್ಲಿ ಪ್ರತಿಕ್ರಿಯಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಹಾಗೆಯೇ ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಮದ್ರಾಸ್ ಮತ್ತು ಕೋಲ್ಕತ್ತಾ ಹೈಕೋರ್ಟ್‌ಗೆ ತಿಳಿಸಿದೆ. ಹಾಗೆಯೇ ತಮಿಳುನಾಡಿನಲ್ಲಿ ಎಸ್‌ಐಆರ್‌ ಬೆಂಬಲಿಸಿ ಎಐಎಡಿಎಂಕೆ ಸಲ್ಲಿಸಿರುವ ಅರ್ಜಿಯ ವಿಚಾರಣೆಗೂ ಅವಕಾಶ ನೀಡಿದೆ.

ಇದನ್ನು ಓದಿದ್ದೀರಾ? ಬಿಹಾರ, ತಮಿಳುನಾಡು, ಪಶ್ಚಿಮ ಬಂಗಾಳಕ್ಕೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನವೆಂಬರ್‌ನಿಂದ ಮತ್ತು ಮುಂದಿನ ವರ್ಷದ ಫೆಬ್ರವರಿ ನಡುವೆ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್‌ಐಆರ್‌ನ ಎರಡನೇ ಹಂತವನ್ನು ನಡೆಸಲಾಗುವುದು ಎಂದು ಅಕ್ಟೋಬರ್ 27ರಂದು ಚುನಾವಣಾ ಆಯೋಗ ಘೋಷಿಸಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಲಕ್ಷದ್ವೀಪ, ಛತ್ತೀಸ್‌ಗಢ, ಗೋವಾ, ಗುಜರಾತ್, ಕೇರಳ, ಮಧ್ಯಪ್ರದೇಶ, ಪುದುಚೇರಿ, ರಾಜಸ್ಥಾನ, ತಮಿಳುನಾಡು, ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ನಡೆಸಲು ಇಸಿ ಸಜ್ಜಾಗಿದೆ.

ಈ ಪೈಕಿ ತಮಿಳುನಾಡು, ಪುದುಚೇರಿ, ಕೇರಳ ಮತ್ತು ಪಶ್ಚಿಮ ಬಂಗಾಳದಲ್ಲಿ 2026ರಲ್ಲಿ ಚುನಾವಣೆ ನಡೆಯಲಿದೆ. ಹಾಗೆಯೇ 2026ರಲ್ಲಿ ಚುನಾವಣೆ ನಡೆಯಲಿರುವ ಅಸ್ಸಾಂಗೆ ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಪ್ರತ್ಯೇಕವಾಗಿ ಘೋಷಿಸಲಾಗುವುದು ಎಂದೂ ಚುನಾವಣಾ ಆಯೋಗ ಹೇಳಿದೆ. ಎರಡನೇ ಹಂತದ ಎಸ್‌ಐಆರ್ ಪ್ರಕ್ರಿಯೆ ನವೆಂಬರ್ 4ರಂದು ಪ್ರಾರಂಭವಾಗಿದ್ದು ಡಿಸೆಂಬರ್ 4ರವರೆಗೆ ಮುಂದುವರಿಯಲಿದೆ. ಡಿಸೆಂಬರ್ 9ರಂದು ಕರಡು ಮತದಾರರ ಪಟ್ಟಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಲಿದ್ದು, ಫೆಬ್ರವರಿ 7ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಈಗಾಗಲೇ ಬಿಹಾರದಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ನಡೆಸಲಾಗಿದ್ದು, ಚುನಾವಣೆಗೂ ಮುನ್ನ ತರಾತುರಿಯಲ್ಲಿ ನಡೆಸಲಾದ ಈ ಪ್ರಕ್ರಿಯೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸರಿಯಾದ ದಾಖಲೆಗಳನ್ನು ನೀಡಲಾಗದೆ ಅದೆಷ್ಟೋ ಬಡ ಜನರು ತಮ್ಮ ಮತದಾನದ ಹಕ್ಕನ್ನೇ ಕಳೆದುಕೊಂಡಿರುವುದರ ವಿರುದ್ಧ ವಿಪಕ್ಷಗಳು ಧ್ವನಿ ಎತ್ತಿದೆ. ಚುನಾವಣೆಗೂ ಮುನ್ನ ವಿರುದ್ಧದ ಮತದಾರರ ಹಕ್ಕನ್ನು ಕಸಿಯಲೆಂದೇ ಈ ಪ್ರಕ್ರಿಯೆಗಳನ್ನು ನಡೆಸಲಾಗಿದೆ ಎಂದು ವಿಪಕ್ಷಗಳು ದೂರಿದೆ. ಇದು ಮತಗಳ್ಳತನದ ಒಂದು ಭಾಗ ಎಂಬ ಆರೋಪವನ್ನೂ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...