‘ಇದು ನ್ಯಾಯದ ಅಣಕ’; ಭ್ರಷ್ಟಾಚಾರದ FIR ರದ್ದುಗೊಳಿಸಿದ್ದ ಆಂಧ್ರ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕಿಡಿ

Date:

ಪೊಲೀಸ್ ಠಾಣೆಗಳ ಅಧಿಕಾರ ವ್ಯಾಪ್ತಿ ಕೊರತೆ ಆಧಾರದಲ್ಲಿ ಭ್ರಷ್ಟಾಚಾರ ಪ್ರಕರಣಗಳಲ್ಲಿ ಹಲವು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ್ದ ಆಂಧ್ರಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಹೈಕೋರ್ಟ್‌ ಆದೇಶವು ‘ನ್ಯಾಯದ ಅಣಕವಲ್ಲದೆ ಬೇರೇನೂ ಅಲ್ಲ’ ಎಂದು ಸುಪ್ರೀಂ ಬಣ್ಣಿಸಿದೆ.

ಆಂಧ್ರ ಎಸಿಬಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಎಂ.ಎಂ ಸುಂದ್ರೇಶ್ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಪೀಠವು, ‘ಭ್ರಷ್ಟಾಚಾರ ತಡೆ ಕಾಯ್ದೆ-1988’ರ ಅಡಿಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗಳನ್ನು ಹೈಪರ್-ಟೆಕ್ನಿಕಲ್ ವಿಧಾನದ ಮೂಲಕ ಹೈಕೋರ್ಟ್ ರದ್ದುಗೊಳಿಸಿದೆ. ಹೈಕೋರ್ಟ್‌ನ ಈ ಆದೇಶವು ಕೆಲವು ಪ್ರಕರಣಗಳಲ್ಲಿ ತನಿಖೆಗಳು ಆರಂಭವಾಗುವಾಗಲೇ ತನಿಖೆಯನ್ನು ಸ್ಥಗಿತಗೊಳಿಸಿತ್ತು. ಆದರೆ, ಇತರ ಪ್ರಕರಣಗಳಲ್ಲಿ ಕ್ರಿಮಿನಲ್ ವಿಚಾರಣೆಗಳು ಕೊನೆಗೊಂಡಿವೆ ಎಂಬುದನ್ನು ಗಮನಿಸಿದೆ.

“ಎಫ್‌ಐಆರ್‌ಗಳನ್ನು ರದ್ದುಗೊಳಿಸಲು ಆಂಧ್ರಪ್ರದೇಶ ಹೈಕೋರ್ಟ್ ಅನಗತ್ಯ ಪ್ರಯತ್ನಗಳನ್ನು ಮತ್ತು ಕ್ರಮಗಳನ್ನು ತೆಗೆದುಕೊಂಡಿದೆ. ಇನ್ನು ಮುಂದೆ, ಹೈಕೋರ್ಟ್‌ ಎಫ್‌ಐಆರ್‌ಗಳಿಗೆ ಸಂಬಂಧಿಸಿದಂತೆ ಯಾವುದೇ ಸವಾಲನ್ನು ಸ್ವೀಕರಿಸುವುದಿಲ್ಲ ಎಂಬುದನ್ನು ನಾವು ಸ್ಪಷ್ಟಪಡಿಸುತ್ತೇವೆ” ಎಂದು ನ್ಯಾಯಪೀಠವು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ದೇವರಾಜ ಅರಸು-ಸಿದ್ದರಾಮಯ್ಯ | ಸಾಮಾಜಿಕ ನ್ಯಾಯದ ನಿಜ ಹರಿಕಾರ ಯಾರು?

“ಎಸಿಬಿಯ ಕೇಂದ್ರ ತನಿಖಾ ಘಟಕವನ್ನು ಹೈದರಾಬಾದ್‌ನಿಂದ ವಿಜಯವಾಡಕ್ಕೆ ಸ್ಥಳಾಂತರಿಸುವುದರಿಂದ ಅದರ ಅಧಿಕಾರ ವ್ಯಾಪ್ತಿಯಿಂದ ಕಡಿತಗೊಳ್ಳುವುದಿಲ್ಲ. ಒಂದು ವೇಳೆ, ಹೈಪರ್-ಟೆಕ್ನಿಕಲ್ ಆಧಾರದ ಮೇಲೆ, ಎಫ್‌ಐಆರ್‌ಗಳನ್ನು ರದ್ದುಗೊಳಿಸಿದರೆ, ಅಸ್ತಿತ್ವದಲ್ಲಿರುವ ನ್ಯಾಯವ್ಯಾಪ್ತಿಗೆ ಸಂಬಂಧಿಸಿದಂತೆ ಕಾನೂನನ್ನು ರೂಪಿಸಲು ಹೈಕೋರ್ಟ್ ಬದ್ಧವಾಗಿರುತ್ತದೆ” ಎಂದು ಪೀಠ ಹೇಳಿದೆ.

2016 ಮತ್ತು 2020ರ ನಡುವೆ ದಾಖಲಾದ ಎಫ್‌ಐಆರ್‌ಗಳನ್ನು ಪೀಠವು ಮರುಸ್ಥಾಪಿಸಿದೆ. ಎಸಿಬಿ ತನಿಖೆಯನ್ನು ಮುಂದುವರಿಸಲು ಅನುಮತಿ ನೀಡಿದೆ. ತನಿಖೆ ಬಾಕಿ ಇರುವಾಗ ಆರೋಪಿಗಳ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದು ಎಂದೂ ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...