ಮುಂಬೈ ಖಾಸಗಿ ಕಾಲೇಜಿನ ಹಿಜಾಬ್ ನಿಷೇಧ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

Date:

ಶಾಲೆಯ ಆವರಣದಲ್ಲಿ ವಿದ್ಯಾರ್ಥಿಗಳು ಹಿಜಾಬ್, ಬುರ್ಕಾ, ಕ್ಯಾಪ್ ಅಥವಾ ಬ್ಯಾಡ್ಜ್‌ಗಳನ್ನು ಧರಿಸುವುದನ್ನು ನಿಷೇಧಿಸಿ ಮುಂಬೈನ ಖಾಸಗಿ ಕಾಲೇಜು ನೀಡಿದ್ದ ಸೂಚನೆಗೆ ಸುಪ್ರೀಂ ಕೋರ್ಟ್ ಶುಕ್ರವಾರ (ಆಗಸ್ಟ್ 9) ತಡೆ ನೀಡಿದೆ.

ಮುಂಬೈನ ಎನ್‌ಜಿ ಆಚಾರ್ಯ ಮತ್ತು ಡಿಕೆ ಮರಾಠೆ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯ ಈ ಮಧ್ಯಂತರ ಆದೇಶ ನೀಡಿದೆ. ಕಾಲೇಜು ನೀಡಿದ ಸೂಚನೆಯನ್ನು ಬಾಂಬೆ ಹೈಕೋರ್ಟ್‌ ಎತ್ತಿ ಹಿಡಿದಿತ್ತು. ಬಾಂಬೆ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು.

ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಸಂಜಯ್ ಕುಮಾರ್ ಅವರ ಪೀಠವು ಕಾಲೇಜು ವಿಧಿಸಿರುವ ಈ ಷರತ್ತಿನ ಬಗ್ಗೆ ಆಶ್ಚರ್ಯ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾರೂ ಕೂಡಾ ಧರ್ಮ ತಿಳಿಯುವಂತೆ ಇರಬಾರದೆ? ಏನಿದು” ಎಂದು ಪೀಠವು ಪ್ರಶ್ನಿಸಿದ್ದು, ಕಾಲೇಜನ್ನು ಪ್ರತಿನಿಧಿಸಿದ ಹಿರಿಯ ವಕೀಲ ಮಾಧವಿ ದಿವಾನ್, “ಇದೊಂದು ಖಾಸಗಿ ಸಂಸ್ಥೆ” ಎಂದರು.

ಇದನ್ನು ಓದಿದ್ದೀರಾ? ಹಿಜಾಬ್ ಹೋರಾಟಗಾರ್ತಿ ಅಲಿಯಾ ಅಸ್ಸಾದಿಗೆ ಶುಭಕೋರಿದ ಕೆ ರಘುಪತಿ ಭಟ್

ಈ ವೇಳೆ “ಕಾಲೇಜು ಯಾವಾಗಿನಿಂದ ಕಾರ್ಯನಿರ್ವಹಿಸುತ್ತಿದೆ” ಎಂದು ಸಂಜಯ್ ಕುಮಾರ್ ಪ್ರಶ್ನಿಸಿದ್ದಾರೆ. 2008ರಿಂದ ಕಾಲೇಜು ಅಸ್ತಿತ್ವದಲ್ಲಿದೆ ಎಂದು ಕಾಲೇಜು ಪರ ವಕೀಲರು ಹೇಳುತ್ತಿದ್ದಂತೆ ನ್ಯಾಯಮೂರ್ತಿ ಕುಮಾರ್, “ಇಷ್ಟು ವರ್ಷಗಳಿಂದ ಸೂಚನೆ ನೀಡಿರಲಿಲ್ಲ. ಈಗ ಇದ್ದಕ್ಕಿದ್ದಂತೆ ನಿಮಗೆ ಧರ್ಮದ ಬಗ್ಗೆ ತಿಳಿಯಿತೆ? ಇಷ್ಟು ವರ್ಷಗಳ ನಂತರ ನೀವು ಅಂತಹ ಸೂಚನೆಗಳನ್ನು ನೀಡುತ್ತಿರುವುದು ದುರದೃಷ್ಟಕರ” ಎಂದು ಹೇಳಿದರು.

“ತಿಲಕವನ್ನು ಧರಿಸಿದವರನ್ನು ಅನುಮತಿಸಲಾಗುವುದಿಲ್ಲ ಎಂದು ನೀವು ಹೇಳುತ್ತೀರಾ” ಎಂದು ಇದೇ ವೇಳೆ ನ್ಯಾಯಮೂರ್ತಿ ಖನ್ನಾ ಪ್ರಶ್ನಿಸಿದರು.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...