ಜಾತಿ ತಾರತಮ್ಯ ತಡೆಗಾಗಿ ರೂಪಿಸಲಾದ ಯುಜಿಸಿ ನಿಯಮಕ್ಕೆ ಸುಪ್ರೀಂ ತಡೆ

Date:

ವಿಶ್ವದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಯಲು ‘ವಿಶ್ವವಿದ್ಯಾಲಯ ಅನುದಾನ ಆಯೋಗ’ (ಯುಜಿಸಿ) ರೂಪಿಸಿರುವ ‘ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಅಧಿಸೂಚಿತ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ ನಿಯಮಗಳು-2026’ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಯುಜಿಸಿ ರೂಪಿಸಿರುವ ನಿಯಮಗಳು ಅಸ್ಪಷ್ಟವಾಗಿವೆ ಮತ್ತು ದುರುಪಯೋಗಕ್ಕೆ ಅವಕಾಶ ಕಲ್ಪಿಸುವ ರೀತಿಯಲ್ಲಿವೆ ಎಂದು ಕೋರ್ಟ್‌ ಹೇಳಿದೆ.

ಯುಜಿಸಿ ಸಿದ್ದಪಡಿಸಿರುವ ಹೊಸ ನಿಯಮಗಳು ‘ಸಾಮಾನ್ಯ ವರ್ಗ’ಗಳ ವಿರುದ್ಧ ತಾರತಮ್ಯಕ್ಕೆ ಆಸ್ಪದ ನೀಡುತ್ತವೆ ಎಂದು ಆಕ್ಷೇಪಿಸಿ ಹಲವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರಿದ್ದ ಪೀಠ ವಿಚಾರಣೆ ನಡೆಸಿದೆ. ಯುಜಿಸಿ ನಿಯಮಗಳಿಗೆ ತಡೆಯೊಡ್ಡಿದೆ.

“ಹೊಸ ನಿಮಯಗಳನ್ನು ಪ್ರಖ್ಯಾತ ನ್ಯಾಯಶಾಸ್ತ್ರಜ್ಞರು ಇರುವ ಸಮಿತಿಯ ಮೂಲಕ ಮರುಪರಿಶೀಲಿಸಬೇಕು” ಎಂದು ನಿರ್ದೇಶನ ನೀಡಿದೆ. ಕೇಂದ್ರ ಸರ್ಕಾರ ಮತ್ತು ಯುಜಿಸಿಗೆ ನೋಟಿಸ್ ಜಾರಿ ಮಾಡಿರುವ ಕೋರ್ಟ್‌, ಮಾರ್ಚ್ 19ರೊಳಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ತಾರತಮ್ಯ, ದೌರ್ಜನ್ಯಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿವೆ. ವಿಶ್ವವಿದ್ಯಾಲಯಗಳಲ್ಲಿನ ಜಾತಿ ತಾರತಮ್ಯಕ್ಕೆ ರೋಹಿತ್ ವೇಮುಲಾ ಸೇರಿದಂತೆ ಹಲವರು ಬಲಿಯಾಗಿದ್ದಾರೆ ಎಂದು ಈ ಹಿಂದೆ ಸುಪ್ರೀಂ ಕೋರ್ಟ್‌ ಕಳವಳ ವ್ಯಕ್ತಪಡಿಸಿತ್ತು. ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್‌ನಲ್ಲಿ ಜಾತಿ ತಾರತಮ್ಯಗಳನ್ನು ತಡೆಯಲು ನಿಯಮಗಳನ್ನು ರೂಪಿಸುವಂತೆ ಯುಜಿಸಿಗೆ ತಾಕೀತು ಮಾಡಿತ್ತು. ಅದರಂತೆ, ಯುಜಿಸಿ ನಿಯಮಗಳನ್ನು ರೂಪಿಸಿತ್ತು. ಇದೀಗ, ಆ ನಿಮಯಗಳ ಸುತ್ತ ಕೆಲವು ಸಮುದಾಯಗಳು ವಿವಾದ ಸೃಷ್ಟಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...