ಬೀದಿ ನಾಯಿ ಪ್ರಕರಣ: ಕರ್ನಾಟಕ ಸೇರಿ ಹಲವು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಟ್ ಸಮನ್ಸ್

Date:

ದೇಶಾದ್ಯಂತ ಬೀದಿ ನಾಯಿಗಳನ್ನು ಹಿಡಿದು, ಸಂತಾನಹರಣ ಮಾಡಿ, ಲಸಿಕೆ ನೀಡಿ ಬಳಿಕ ಬಿಡುಗಡೆ ಮಾಡುವಂತೆ ಆಗಸ್ಟ್‌ನಲ್ಲಿ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಆದೇಶವನ್ನು ಪಾಲಿಸಲಾಗಿದೆ ಎಂದು ದೃಢೀಕರಿಸಲು ಅಫಿಡವಿಟ್‌ಗಳನ್ನು ಸಲ್ಲಿಸದ ರಾಜ್ಯ ಸರ್ಕಾರಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ತರಾಟೆಗೆ ತೆಗೆದುಕೊಂಡಿದೆ. ಹಾಗೆಯೇ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಟ್ ಸಮನ್ಸ್ ನೀಡಿದೆ.

ಇನ್ನು ಬೀದಿ ನಾಯಿಗಳಿಗೆ ಸಂಬಂಧಿಸಿದ ಈ ಆದೇಶದ ಬಳಿಕವೂ ಹಲವು ಬೀದಿ ನಾಯಿಗಳಿಂದ ದಾಳಿ ನಡೆದ ಪ್ರಕರಣಗಳು ವರದಿಯಾಗಿರುವುದನ್ನು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ತ್ರಿಸದಸ್ಯ ಪೀಠ ಉಲ್ಲೇಖಿಸಿದೆ.

ಇದನ್ನು ಓದಿದ್ದೀರಾ? ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ತಿಂಗಳು, ಮಹಾರಾಷ್ಟ್ರದ ಪುಣೆಯಲ್ಲಿ ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿದೆ. ಅದಕ್ಕೂ ಮುನ್ನ ಮತ್ತೊಂದು ಯುವತಿಯ ಮೇಲೆ ದಾಳಿ ನಡೆದಿದೆ. ಕಳೆದ ವಾರ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಬೀದಿ ನಾಯಿಗಳ ಬಗ್ಗೆ ಬೀದಿ ನಾಟಕ ಪ್ರದರ್ಶಿಸುತ್ತಿದ್ದ ವ್ಯಕ್ತಿಯ ಮೇಲೆಯೇ ಬೀದಿ ನಾಯಿ ದಾಳಿ ನಡೆಸಿದೆ. ಉತ್ತರ ಪ್ರದೇಶದ ಲಕ್ನೋ ಮತ್ತು ತೆಲಂಗಾಣದ ವಾರಂಗಲ್‌ನಲ್ಲೂ ಬೀದಿ ನಾಯಿ ದಾಳಿ ನಡೆದಿದೆ. ಈ ಘಟನೆಗಳು ಸುಪ್ರೀಂ ಕೋರ್ಟ್ ಉಲ್ಲೇಖಿಸಿದೆ.

“ಈ ಪ್ರಕರಣಗಳ ಬಗ್ಗೆ ಇನ್ನೂ ರಾಜ್ಯ ಸರ್ಕಾರಗಳಿಂದ ಯಾವುದೇ ಉತ್ತರ ಬಂದಿಲ್ಲ. ದೇಶವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೆಟ್ಟದಾಗಿ ಬಿಂಬಿಸಲಾಗುತ್ತಿದೆ. ಎರಡು ತಿಂಗಳುಗಳು ಕಳೆದಿವೆ. ಆದರೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಸರ್ಕಾರಗಳಿಂದ ಸ್ಪಷ್ಟನೆಯನ್ನು ಕೋರಿದೆ.

“ನೀವು ಪತ್ರಿಕೆಗಳನ್ನು ಓದುವುದಿಲ್ಲವೇ? ಆಗಸ್ಟ್ 22ರಂದು ಹೊರಡಿಸಲಾದ ಆದೇಶವು ವ್ಯಾಪಕವಾಗಿ ವರದಿಯಾಗಿದೆ. ಎಲ್ಲಾ ರಾಜ್ಯಗಳ ಎಲ್ಲಾ ಮುಖ್ಯ ಕಾರ್ಯದರ್ಶಿಗಳು ನ್ಯಾಯಾಲಯದಲ್ಲಿ ವೈಯಕ್ತಿಕವಾಗಿ ಹಾಜರಿರಬೇಕು. ಯಾಕೆ ವಿಳಂಬವಾಗಿದೆ ಎಂದು ವಿವರಿಸಬೇಕು” ಎಂದು ಸೂಚಿಸಿದೆ.

ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಮಾತ್ರ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿವೆ. ಆದರೆ ದೆಹಲಿ ಸರ್ಕಾರ ಅಫಿಡವಿಟ್ ಸಲ್ಲಿಸಿಲ್ಲ. “ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಪ್ರತಿಕ್ರಿಯೆ ಸಲ್ಲಿಸಿದೆ. ಆದರೆ ದೆಹಲಿ ಸರ್ಕಾರವೇಕೆ ಉತ್ತರಿಸಿಲ್ಲ” ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

ಇದನ್ನು ಓದಿದ್ದೀರಾ? ಗದಗ | ಬೀದಿನಾಯಿ, ಹಂದಿ ಹಾವಳಿ; ನಿಯಂತ್ರಣಕ್ಕೆ ಕರವೇ ಸ್ವಾಭಿಮಾನಿ ಸೇನೆ ಒತ್ತಾಯ

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ ಕೋರ್ಟ್‌, ರೇಬೀಸ್ ಸೋಂಕಿತ ನಾಯಿಗಳನ್ನು ಹೊರತುಪಡಿಸಿ ಇನ್ನುಳಿದ ಬೀದಿ ನಾಯಿಗಳನ್ನು ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು ಎಂದು ಆಗಸ್ಟ್ 22ರಂದು ಆದೇಶಿಸಿದೆ.

ದೆಹಲಿಯ ಎಲ್ಲಾ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಮುಕ್ತಗೊಳಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಆದರೆ ಈ ಆದೇಶಕ್ಕೆ ಪ್ರಾಣಿ ಪ್ರಿಯರು, ಸಂಘಟನೆಗಳ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ ಕೋರ್ಟ್‌ ಜಂತುಹುಳು ನಿವಾರಣೆ ಮತ್ತು ಲಸಿಕೆ ಹಾಕಿದ ನಂತರ ನಾಯಿ ಆಶ್ರಯ ತಾಣಗಳಿಂದ ನಾಯಿಗಳನ್ನು ಬಿಡುಗಡೆ ಮಾಡಬೇಕು ಎಂದು ಹೇಳಿದೆ. ಆದರೆ ರೇಬೀಸ್ ಸೋಂಕಿತ, ಆಕ್ರಮಣಕಾರಿ ನಾಯಿಗಳನ್ನು ಆಶ್ರಯ ತಾಣಗಳಿಂದ ಸಾರ್ವಜನಿಕ ಸ್ಥಳಗಳಿಗೆ ಬಿಡುವಂತಿಲ್ಲ ಎಂದು ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...