ಪ್ರಾಥಮಿಕ ಶಾಲಾ ಶಿಕ್ಷಕರಾಗಲು ಬಿ.ಇಡಿ ಕಡ್ಡಾಯವಲ್ಲ: ಸರ್ಕಾರದ ಆದೇಶ ವಜಾಗೊಳಿಸಿದ ಸುಪ್ರೀಂ

Date:

ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅರ್ಹತೆ ಹೊಂದಿರಬೇಕು ಎಂದು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರವು ‘ಸ್ವೇಚ್ಛೆ’ಯಿಂದ ಕೂಡಿದೆ ಮತ್ತು ‘ಅತಾರ್ಕಿಕ’ವಾಗಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

ಮಕ್ಕಳಿಗೆ ಉಚಿತ, ಕಡ್ಡಾಯ ಮತ್ತು ಗುಣಮಟ್ಟದ ಶಿಕ್ಷಣ ನೀಡುವುದಕ್ಕಾಗಿ ರೂಪಿಸಲಾದ ಶಿಕ್ಷಣ ಹಕ್ಕು ಕಾಯ್ದೆಗೂ ಈ ನಿರ್ಧಾರಕ್ಕೂ ಸಂಬಂಧ ಇಲ್ಲ ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ.

ಪ್ರಾಥಮಿಕ ಶಾಲಾ ಶಿಕ್ಷಕರಾಗಲು ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿಮಾಡಬೇಕು ಎಂದು ಎನ್‌ಸಿಟಿಇ 2018ರ ಜೂನ್ 28ರಂದು ಹೊರಡಿಸಿದ್ದ ಅಧಿಸೂಚನೆಯನ್ನು ಕೋರ್ಟ್‌ ರದ್ದುಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾಥಮಿಕ ಹಂತದ ತರಗತಿಗಳಲ್ಲಿ ಕಲಿಸಲು ಬಿ.ಇಡಿ. ಅರ್ಹತೆಯ ಅಗತ್ಯ ಇಲ್ಲ. ಈ ತರಗತಿಗಳಲ್ಲಿ ಕಲಿಸಲು ಭಿನ್ನವಾದ ಅರ್ಹತೆ ಅಗತ್ಯವಿದೆ. ಪ್ರಾಥಮಿಕ ತರಗತಿಗಳಿಗೆ ಬೋಧಿಸಲು ಬಿ.ಇಡಿ. ವಿದ್ಯಾರ್ಹತೆ ಇರುವವರು ಆಯ್ಕೆಯಾಗಿದ್ದರೆ ನೇಮಕವಾಗಿ ಎರಡು ವರ್ಷಗಳೊಳಗೆ ಬೋಧನೆಗೆ ಸಂಬಂಧಿಸಿದ ಕೋರ್ಸ್‌ ಒಂದನ್ನು ಪೂರ್ಣಗೊಳಿಸಬೇಕು ಎಂದು ಬೋಧನಾ ಶಿಕ್ಷಣ ರಾಷ್ಟ್ರೀಯ ಪರಿಷತ್ (ಎನ್‌ಸಿಟಿಇ) ಹೇಳಿರುವುದು ಇದನ್ನು ಪುಷ್ಟೀಕರಿಸುತ್ತದೆ ಎಂದು ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠವು ಹೇಳಿದೆ.

ಈ ಸುದ್ದಿ ಓದಿದ್ದೀರಾ? ನೀವು ಬೆರಳು ತೋರಿಸಿದರೆ, ನಿಮ್ಮ ಕೈಗಳನ್ನು ಕತ್ತರಿಸುತ್ತೇವೆ; ಹರಿಯಾಣದಲ್ಲಿ ಮುಂದುವರೆದ ದ್ವೇಷ ಭಾಷಣ

ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡುವ ಮೂಲಕ ಸರ್ಕಾರವು ಸಂವಿಧಾನ ಮತ್ತು ಕಾನೂನುಗಳನ್ನು ಉಲ್ಲಂಘಿಸಿದೆ. ಶಿಕ್ಷಕರಿಗೆ ಸಂಬಂಧಿಸಿದಂತೆ ಬೋಧನಾ ಕೌಶಲವು ಅತ್ಯಂತ ಮಹತ್ವದ್ದಾಗಿದೆ ಎಂದು ಕೋರ್ಟ್ ಹೇಳಿದೆ.

ಬಿ.ಇಡಿ. ಅನ್ನು ಅರ್ಹತೆಯಾಗಿ ನಿಗದಿ ಮಾಡಲು ಸರ್ಕಾರ ನೀಡಿರುವ ಒಂದೇ ಒಂದು ಸಮರ್ಥನೆ ಏನೆಂದರೆ, ಇದು ‘ಉನ್ನತ ಅರ್ಹತೆ’ ಎಂಬುದಾಗಿದೆ. ನೀತಿಗೆ ಸಂಬಂಧಿಸಿದ ನಿರ್ಧಾರ ಎಂದು ಪರಿಗಣಿಸಿದರೂ ಇದು ಸರಿಯಾದ ಕ್ರಮ ಅಲ್ಲ ಎಂದು ಕೋರ್ಟ್‌ ಹೇಳಿದೆ.

ಪ್ರಾಥಮಿಕ ಶಾಲೆಯಲ್ಲಿ ಬೋಧಿಸಲು ಪ್ರಾಥಮಿಕ ಶಿಕ್ಷಣ ಡಿಪ್ಲೊಮಾವೇ(ಡಿ.ಎಡ್‌.) ಅರ್ಹತೆಯೇ ಹೊರತು ಬಿ.ಇಡಿ. ಅಲ್ಲ ಎಂದು ಸುಪ್ರೀಂ ಕೋರ್ಟ್ ಹಲವು ಬಾರಿ ಹೇಳಿದ್ದಾಗಿಯೂ ಪೀಠ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...