ಸೂರತ್ ಕಟ್ಟಡ ಕುಸಿತ; ಸಾವಿನ ಸಂಖ್ಯೆ ಏಳಕ್ಕೆ ಏರಿಕೆ

Date:

ಗುಜರಾತಿನ ಸೂರತ್‌ನಲ್ಲಿ ಶನಿವಾರ ಸಂಜೆ ಆರು ಅಂತಸ್ತಿನ ಕಟ್ಟಡ ಕುಸಿದಿದ್ದು, ಈವರೆಗೆ ಏಳು ಮೃತದೇಹಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೂರತ್‌ನ ಪಾಲ್ ಪ್ರದೇಶದಲ್ಲಿರುವ ವಸತಿ ಕಟ್ಟಡ ಕುಸಿದಿದೆ. ಕಟ್ಟಡ ಕುಸಿದು ಬಿದ್ದ ಕೂಡಲೇ ಓರ್ವ ಮಹಿಳೆಯನ್ನು ರಕ್ಷಿಸಲಾಗಿದ್ದು, ಓರ್ವ ಪುರುಷನ ದೇಹವನ್ನು ಹೊರತೆಗೆಯಲಾಗಿತ್ತು. ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಇತರ ಆರು ಮಂದಿಯ ಮೃತದೇಹಗಳನ್ನು ಹೊರತೆಗೆದಿದ್ದಾರೆ ಎಂದು ವರದಿಯಾಗಿದೆ.

ಸೂರತ್ ಡಿಸಿಪಿ ರಾಜೇಶ್ ಪರ್ಮಾರ್, “ಕಳೆದ 12 ಗಂಟೆಗಳಿಂದ ಎನ್‌ಡಿಆರ್‌ಎಫ್ ಮತ್ತು ಅಗ್ನಿಶಾಮಕ ದಳದ ತಂಡಗಳು ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಒಬ್ಬ ಮಹಿಳೆಯನ್ನು ರಕ್ಷಿಸಲಾಗಿದೆ. ಏಳು ಮೃತ ದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅವಶೇಷಗಳನ್ನು ತೆಗೆಯುವ ಕಾರ್ಯಾಚರಣೆ ಮುಂದುವರಿದಿದೆ. ಆದರೆ, ಇನ್ನೂ ಕೆಲವು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗುವುದಿಲ್ಲ ಎಂದು ಸಚಿನ್ ಜಿಐಡಿಸಿ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಜಿಗ್ನೇಶ್ ಚೌಧರಿ ಹೇಳಿದ್ದಾರೆ.

ಈ ಕಟ್ಟಡವನ್ನು 2016-17ರಲ್ಲಿ ನಿರ್ಮಿಸಲಾಗಿದೆ ಎಂದು ಸೂರತ್ ಪೊಲೀಸ್ ಆಯುಕ್ತ ಅನುಪಮ್ ಸಿಂಗ್ ಗೆಹ್ಲೋಟ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...