ಸೂರತ್ | ಕುಡಿಯುವ ನೀರಿಗೆ ವಿಷ; 118 ಕಾರ್ಮಿಕರ ಹತ್ಯೆಗೆ ಯತ್ನ ಆರೋಪ

Date:

ಕಾರ್ಖಾನೆಯೊಂದರಲ್ಲಿ ನೀರು ಕುಡಿದು 118 ಕಾರ್ಮಿಕರು ಅಸ್ವಸ್ಥರಾಗಿರುವ ಘಟನೆ ಗುಜರಾತ್‌ನ ಸೂರತ್‌ನಲ್ಲಿ ನಡೆದಿದೆ. ಕುಡಿಯುವ ನೀರಿಗೆ ವಿಷ ಹಾಕಿ ಅವರನ್ನು ಸಾಮೂಹಿಕವಾಗಿ ಹತ್ಯೆಗೈಯಲು ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ. ಕೊಲೆ ಯತ್ನದ ಆರೋಪದ ಮೇಲೆ ಪ್ರಕರಣ ಕೂಡ ದಾಖಲಾಗಿದೆ.

ಸೂರತ್‌ನಲ್ಲಿರುವ ವಜ್ರ ಪಾಲಿಶ್‌ ಮಾಡುವ ‘ಅನ್ಭಾ ಡೈಮಂಡ್‌’ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಆರಂಭದಲ್ಲಿ ಕಾರ್ಮಿಕರು ಕಲುಷಿತ ನೀರು ಕುಡಿದು ಅಸ್ವಸ್ಥರಾಗಿದ್ದಾರೆ ಎಂದು ಭಾವಿಸಲಾಗಿತ್ತು. ಆದರೆ, ಇದೀಗ ಪ್ರಕರಣವು ತಿರುವು ಪಡೆದಿದ್ದು, ಕುಡಿಯುವ ನೀರಿಗೆ ವಿಷಕಾರಿ 10 ವಿಷಕಾರಿ (ಸೆಲ್ಫೋಸ್) ಮಾತ್ರೆಗಳನ್ನು ಹಾಕಿ ಹತ್ಯೆಗೆ ಯತ್ನಿಸಲಾಗಿದೆ ಎಂದು ಕಾರ್ಖಾನೆಯ ವ್ಯವಸ್ಥಾಪಕ ಸಂಜಯ್ ರಾಮೋಲಿಯಾ ಆರೋಪಿಸಿದ್ದಾರೆ. ಅಪರಿಚಿತರ ವಿರುದ್ಧ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕುಡಿಯುವ ನೀರಿಗೆ ವಿಷಕಾರಿ ರಾಸಾಯನಿಕ ಬೆರೆಸಿದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಕಾರ್ಖಾನೆಯಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಆರೋಪಕ್ಕೆ ಪೂರಕವಾದ ದೃಶ್ಯಗಳು ಕಂಡುಬಂದಿವೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವರದಿ ಓದಿದ್ದೀರಾ?: ಟ್ಯಾರಿಫ್ ವಾರ್: ಅಮೆರಿಕಾದ ಕುತ್ತಿಗೆಗೇ ಕೈ ಹಾಕಿರುವ ಚೀನಾ, ಮುಂದೇನಾಗಲಿದೆ?

ಅನ್ಭಾ ಡೈಮಂಡ್ ಕಾರ್ಖಾನೆಯಲ್ಲಿ ಸುಮಾರು 120ಕ್ಕೂ ಹೆಚ್ಚು ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅವರೆಲ್ಲಿ 118 ಮಂದಿ ಏಪ್ರಿಲ್​ 9ರಂದು ಕೆಲಸ ಮಾಡುವ ಸಮಯಲ್ಲಿಯೇ ಅಸ್ವಸ್ಥರಾಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕುಡಿಯುವ ನೀರಿನಲ್ಲಿ ಕೆಟ್ಟ ವಾಸನೆ ಬರುತ್ತಿದ್ದರಿಂದ, ನೀರನ್ನು ಪರಿಶೀಲಿಸಲಾಗಿದ್ದು, ಅದರಲ್ಲಿ ವಿಷಕಾರಿ ರಸಾಯನಿಕ ಬೆರೆಸಿರುವುದು ಕಂಡುಬಂದಿದೆ.

ಪ್ರಸ್ತುತ, 111 ಮಂದಿ ಚೇತರಿಸಿಕೊಂಡಿದ್ದಾರೆ. ಅವರೆಲ್ಲರಿಗೂ ವಿಶ್ರಾಂತಿ ಪಡೆಯಲು ಸೂಚಿಸಲಾಗಿದ್ದು, ಎಲ್ಲರಿಗೂ ರಜೆ ನೀಡಲಾಗಿದೆ. ಉಳಿದ 7 ಮಂದಿಯ ಪರಿಸ್ಥಿತಿ ಗಂಭೀರವಾಗಿದೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ವಿಷಕಾರಿ ಮಾತ್ರೆಯನ್ನು ನೀರಿಗೆ ಹಾಕಿರುವುದರ ಹಿಂದಿನ ಉದ್ದೇಶ ಅಪಾಯಕಾರಿಯಾಗಿದೆ. ಸಾಮೂಹಿಕ ಹತ್ಯೆಗೆ ಯತ್ನ ನಡೆದಿದೆ ಎಂಬ ಅನುಮಾನಗಳಿವೆ. ಆರೋಪಿಗಳ ಪತ್ತೆಗೆ ನಾಲ್ಕು ತಂಡಗಳನ್ನು ರಚಿಸಲಾಗಿದೆ” ಎಂದು ಡಿಸಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...