ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ಕೇಂದ್ರ ಸಚಿವ ಸುರೇಶ್‌ ಕಲ್ಮಾಡಿ ನಿಧನ

Date:

ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ಕೇಂದ್ರ ಸಚಿವ ಹಾಗೂ ಭಾರತೀಯ ಒಲಿಂಪಿಕ್ ಸಂಸ್ಥೆಯ ಮಾಜಿ ಅಧ್ಯಕ್ಷ ಸುರೇಶ್‌ ಕಲ್ಮಾಡಿ (81) ಮಂಗಳವಾರ ಮುಂಜಾನೆ ನಿಧನರಾದರು.

​ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕಲ್ಮಾಡಿ ಅವರು ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗಿನ ಜಾವ 3:30ರ ಸುಮಾರಿಗೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸುರೇಶ್‌ ಕಲ್ಮಾಡಿ ಅವರು ​ಮೂಲತಃ ಮಂಗಳೂರು (ದಕ್ಷಿಣ ಕನ್ನಡ) ಮೂಲದವರು. ಅವರ ಪೋಷಕರು ಪುಣೆಯಲ್ಲಿ ನೆಲಸಿದ ಕಾರಣ ವೃತ್ತಿಜೀವನ ಮತ್ತು ರಾಜಕೀಯಕ್ಕಾಗಿ ಪುಣೆಯನ್ನೇ ತಮ್ಮ ಕಾರ್ಯಕ್ಷೇತ್ರವನ್ನಾಗಿ ಮಾಡಿಕೊಂಡಿದ್ದರು. ಸುರೇಶ್ ಕಲ್ಮಾಡಿ ಮೇ 1, 1944 ರಂದು ಜನಿಸಿದ್ದರು.ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಅವರು ಆರು ವರ್ಷಗಳಿಗೂ ಹೆಚ್ಚು ಕಾಲ ಭಾರತೀಯ ವಾಯುಪಡೆಯಲ್ಲಿ ಪೈಲಟ್ ಆಗಿ ಸೇವೆ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾಯುಪಡೆಯಿಂದ ನಿವೃತ್ತರಾದ ನಂತರ, ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದೊಂದಿಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಅವರು ಪುಣೆಯಿಂದ ದೀರ್ಘಕಾಲ ಸಂಸತ್ ಸದಸ್ಯರಾಗಿದ್ದರು ಮತ್ತು ಪಿ.ವಿ. ನರಸಿಂಹರಾವ್ ಸರ್ಕಾರದಲ್ಲಿ ರೈಲ್ವೆ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ರೈಲ್ವೆ ಬಜೆಟ್ ಮಂಡಿಸಿದ ಏಕೈಕ ರಾಜ್ಯ ಸಚಿವರಾಗಿದ್ದರು.

ಪುಣೆ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದ ಅವರು, ಕೇಂದ್ರದಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ, ಕ್ರೀಡಾ ಆಡಳಿತದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು ದೀರ್ಘಕಾಲದವರೆಗೆ ಭಾರತೀಯ ಒಲಿಂಪಿಕ್ ಸಂಸ್ಥೆಯ (ಐಒಎ) ಅಧ್ಯಕ್ಷರಾಗಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವೆನೆಜುವೆಲಾ ಮೇಲೆ ‘ಅಮೆರಿಕ’ ಹಿಡಿತ: ಮೂರನೇ ವಿಶ್ವಯುದ್ಧದ ಕಾರ್ಮೋಡ

​ಸುರೇಶ್‌ ಕಲ್ಮಾಡಿ ಅವರ ಪಾರ್ಥಿವ ಶರೀರವನ್ನು ಪುಣೆಯ ಎರಂಡವಾನೆಯಲ್ಲಿರುವ ಅವರ ನಿವಾಸ ‘ಕಲ್ಮಾಡಿ ಹೌಸ್’ನಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಇರಿಸಲಾಗುವುದು. ನಂತರ ಮಧ್ಯಾಹ್ನ 3:30ಕ್ಕೆ ನವಿ ಪೇಟ್‌ನ ವೈಕುಂಠ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಪ್ರಕಟಣೆ ತಿಳಿಸಿದೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

​ಸಿಡಬ್ಲ್ಯೂಜಿ ಪ್ರಕರಣದಿಂದ ಮುಕ್ತಿ ಸಿಕ್ಕಿತ್ತು

2010ರ ಕಾಮನ್‌ವೆಲ್ತ್ ಗೇಮ್ಸ್ ಆಯೋಜನೆಯಲ್ಲಿ ನಡೆದಿದೆ ಎನ್ನಲಾದ ಹಗರಣವು ದೇಶಾದ್ಯಂತ ಭಾರಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು. ಈ ಸಂಬಂಧ ಕಲ್ಮಾಡಿ ಮತ್ತು ಇತರರ ವಿರುದ್ಧ ಭ್ರಷ್ಟಾಚಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಗಳು ದಾಖಲಾಗಿದ್ದವು.

​ಆದರೆ, ಕಳೆದ 2025ರ ಏಪ್ರಿಲ್ ತಿಂಗಳಲ್ಲಿ ದೆಹಲಿಯ ನ್ಯಾಯಾಲಯವು ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿದ ‘ಕ್ಲೋಜರ್ ರಿಪೋರ್ಟ್’ (ಪ್ರಕರಣ ಮುಕ್ತಾಯ ವರದಿ) ಅನ್ನು ಅಂಗೀಕರಿಸಿತ್ತು. ಇದರೊಂದಿಗೆ 2010ರ ಕಾಮನ್‌ವೆಲ್ತ್ ಗೇಮ್ಸ್ ಸಂಘಟನಾ ಸಮಿತಿಯ ಮಾಜಿ ಮುಖ್ಯಸ್ಥರಾಗಿದ್ದ ಕಲ್ಮಾಡಿ ಮತ್ತು ಕಾರ್ಯದರ್ಶಿ ಲಲಿತ್ ಭಾನೋಟ್ ಅವರ ವಿರುದ್ಧದ 13 ವರ್ಷಗಳ ಸುದೀರ್ಘ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಕಾನೂನಾತ್ಮಕ ತೆರೆ ಬಿದ್ದಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...