ಬಿಹಾರದಿಂದ ವಲಸೆ ಬಂದ ಬಹುತೇಕರಿಗೆ ಮತದಾರರ ಪಟ್ಟಿ ಪರಿಷ್ಕರಣೆ ಪೋರ್ಟಲ್ ಬಗ್ಗೆಯೇ ತಿಳಿದಿಲ್ಲ: ಸಮೀಕ್ಷೆ

Date:

ಬಿಹಾರದಿಂದ ವಲಸೆ ಬಂದ ಬಹುತೇಕರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(SIR) ಪೋರ್ಟಲ್‌ ಬಗ್ಗೆಯೇ ಮಾಹಿತಿಯಿಲ್ಲ ಎಂಬುದನ್ನು ಸಮೀಕ್ಷೆಯೊಂದು ಬಹಿರಂಗಪಡಿಸಿದೆ. ಸ್ಟ್ರಾಂಡೆಡ್ ವರ್ಕರ್ಸ್ ಆಕ್ಷನ್ ನೆಟ್‌ವರ್ಕ್(SWAN) ನಡೆಸಿದ ಸಮೀಕ್ಷೆಯು ಬಿಹಾರದಿಂದ ವಲಸೆ ಹೋದ ಕಾರ್ಮಿಕರು ಸದ್ಯ ಎದುರಿಸುತ್ತಿರುವ ಸಮಸ್ಯೆಗಳನ್ನು ಎತ್ತಿ ತೋರಿಸಿದೆ.

ಸಮೀಕ್ಷೆಯನ್ನು 338 ವಲಸಿಗ ಕಾರ್ಮಿಕರ ಮೇಲೆ ನಡೆಸಲಾಗಿದೆ. ಈ ಪೈಕಿ ಶೇ. 75ರಷ್ಟು ಜನರು ಮಾಸಿಕ 17,000 ರೂಪಾಯಿಗಿಂತ ಕಡಿಮೆ ಆದಾಯ ಗಳಿಸುತ್ತಿದ್ದಾರೆ. ಶೇಕಡ 68ರಷ್ಟು ಜನರು ಅಗತ್ಯ ದಾಖಲೆಗಳ ಬಗ್ಗೆ ನಿಖರವಾದ ಮಾಹಿತಿಯನ್ನೂ ಹೊಂದಿಲ್ಲ ಎಂದು ಸಮೀಕ್ಷೆ ಹೇಳುತ್ತದೆ.

ಇದನ್ನು ಓದಿದ್ದೀರಾ? ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ: 64 ಲಕ್ಷಕ್ಕೂ ಅಧಿಕ ಮತದಾರರ ಹೆಸರು ‘ಡಿಲೀಟ್’

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಹಾರದಿಂದ ಹೊರಗಿರುವವರು ಪ್ರತಿಕ್ರಿಯಿಸಿದ್ದು ಶೇಕಡ 75ರಷ್ಟು ಜನರಿಗೆ ಗಣತಿ ನಮೂನೆಗಳನ್ನು ಸಲ್ಲಿಸುವ ಆನ್‌ಲೈನ್ ಪೋರ್ಟಲ್ ಇದೆ ಬಗ್ಗೆಯೇ ತಿಳಿದಿಲ್ಲ. ಶೇಕಡ 1ಕ್ಕಿಂತ ಕಡಿಮೆ ಜನರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ ಎಂದು ಸಮೀಕ್ಷೆಯಿಂದ ಬಹಿರಂಗವಾಗಿದೆ.

ಕೇವಲ ಶೇಕಡ 29ರಷ್ಟು ಮಂದಿ ಮಾತ್ರ ಬಿಹಾರದಲ್ಲಿ ಅಧಿಕಾರಿಯೊಬ್ಬರು ತಮ್ಮ ಮನೆಗೆ ಭೇಟಿ ನೀಡಿ ಫಾರ್ಮ್ ಭರ್ತಿ ಮಾಡಿ, ದಾಖಲೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಹಾಗಾದರೆ ಉಳಿದವರು ಅರ್ಹರಾಗಿದ್ದರೂ ಮತದಾನದ ತಮ್ಮ ಹಕ್ಕನ್ನು ಕಳೆದುಕೊಂಡಿದ್ದಾರೆ ಅಲ್ಲವೇ ಎಂಬ ಪ್ರಶ್ನೆ ಸದ್ಯ ಎದ್ದಿದೆ.

ಇದಲ್ಲದೆ ಶೇಕಡ 35ರಷ್ಟು ಕಾರ್ಮಿಕರು 11 ಕಡ್ಡಾಯ ಎಸ್‌ಐಆರ್ ದಾಖಲೆಗಳಲ್ಲಿ ಯಾವುದನ್ನೂ ಹೊಂದಿಲ್ಲ. ಶೇಕಡ 96ರಷ್ಟು ಮಂದಿ ಆಧಾರ್ ಕಾರ್ಡ್‌ಗಳನ್ನು ಹೊಂದಿದ್ದರು ಮತ್ತು ಶೇಕಡ 84ರಷ್ಟು ಮಂದಿ ಮತದಾರರ ಗುರುತಿನ ಚೀಟಿಗಳನ್ನು ಹೊಂದಿದ್ದರು. ಆದರೆ ಎಸ್‌ಐಆರ್‌ನ 11 ದಾಖಲೆಗಳಲ್ಲಿ ಇವರೆಡು ಇಲ್ಲದ ಕಾರಣ ಬಿಹಾರದವರಾದರೂ ಮತದಾನದ ಹಕ್ಕನ್ನೇ ಕಳೆದುಕೊಂಡಿದ್ದಾರೆ. ಒಟ್ಟಿನಲ್ಲಿ ಈ ಸಮೀಕ್ಷೆಯು ಎಸ್‌ಐಆರ್ ಪ್ರಕ್ರಿಯೆಯು ಬಿಹಾರದಲ್ಲಿ ಲಕ್ಷಾಂತರ ಜನರ ಮತದಾನದ ಹಕ್ಕು ಕಸಿದುಕೊಳ್ಳಬಹುದು ಎಂದು ಸೂಚಿಸಿವೆ.

ಇನ್ನು ಎಸ್‌ಐಆರ್‌ನಲ್ಲಿರುವ ಗೊಂದಲ ಮತ್ತು ಭ್ರಷ್ಟಾಚಾರವನ್ನು ಉಲ್ಲೇಖಿಸಿ, ಸ್ವಾನ್ ಎಸ್‌ಐಆರ್ ಪ್ರಕ್ರಿಯೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿದೆ. ಕೋವಿಡ್-19 ಪರಿಹಾರವನ್ನು ಪಡೆದ ವಲಸೆ ಕಾರ್ಮಿಕರನ್ನು ಫೋನ್ ಮೂಲಕ ಸಂಪರ್ಕಿಸಿ ಈ ಸಮೀಕ್ಷೆಯನ್ನು ಮಾಡಲಾಗಿದೆ. ಸಮೀಕ್ಷೆಗೆ ಒಳಗಾದವರ ಸಂಖ್ಯೆಯ ಲೆಕ್ಕಾಚಾರದಲ್ಲಿ ಇದು ಸಣ್ಣ ಸಮೀಕ್ಷೆಯಾದರೂ ಎಸ್‌ಐಆರ್ ಪ್ರಕ್ರಿಯೆಯಲ್ಲಿರುವ ಸವಾಲುಗಳ, ಸಮಸ್ಯೆಗಳನ್ನು ಸ್ಪಷ್ಟಪಡಿಸಿದೆ. ಚುನಾವಣಾ ಆಯೋಗದ ದತ್ತಾಂಶದ ಪ್ರಕಾರ ಒಂದು ತಿಂಗಳು ನಡೆಸಿದ ಎಸ್‌ಐಆರ್ ಪ್ರಕ್ರಿಯೆ ಬಳಿಕ 64 ಲಕ್ಷಕ್ಕೂ ಅಧಿಕ ಮತದಾರರ ಹೆಸರು ಡಿಲೀಟ್ ಆಗಿದೆ. ಸದ್ಯ ಸುಪ್ರೀಂ ಕೋರ್ಟ್‌ನತ್ತ ಎಲ್ಲರ ಚಿತ್ತ ನೆಟ್ಟಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...