ಮೊಬೈಲ್ ಕದ್ದ ಶಂಕೆ: ಬಾಲಕನನ್ನು ತಲೆ ಕೆಳಗಾಗಿ ನೇತು ಹಾಕಿ, ವಿದ್ಯುತ್‌ ಶಾಕ್ ಕೊಟ್ಟು ಕ್ರೌರ್ಯ

Date:

ಕಾರ್ಖಾನೆಯಲ್ಲಿ ತನ್ನ ಮೊಬೈಲ್‌ ಕದ್ದಿದ್ದಾನೆ ಎಂಬ ಆರೋಪದ ಮೇಲೆ ಕಾರ್ಖಾನೆ ಮಾಲೀಕನೊಬ್ಬ 14 ವರ್ಷದ ಬಾಲಕನ ಮೇಲೆ ಹಲ್ಲೆ ನಡೆಸಿ ಕ್ರೌರ್ಯ ಮೆರೆದಿರುವ ಘಟನೆ ಪಶ್ಚಮ ಬಂಗಾಳದಲ್ಲಿ ನಡೆದಿದೆ. ಸಂತ್ರಸ್ತ ಬಾಲಕನನ್ನು ತಲೆ ಕೆಳಗಾಗಿ ನೇತು ಹಾಕಿ, ವಿದ್ಯುತ್‌ ಶಾಕ್ ಕೊಟ್ಟು ಮಾಲೀಕ ವಿಕೃತಿ ಮೆರೆದಿದ್ದಾನೆ.

ಬಂಗಾಳದ ಮಹೇಶತಲಾದ ಕಂಖುಲಿ ಪುರ್ಬಪಾರ ಪ್ರದೇಶದಲ್ಲಿರುವ ಜೀನ್ಸ್‌ಗೆ ಬಣ್ಣ ಬಳಿಯುವ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಕಾರ್ಖಾನೆಯಲ್ಲಿದ್ದಾಗ ತನ್ನ ಮೊಬೈಲ್‌ಅನ್ನು ಬಾಲಕ ಕದ್ದಿದ್ದಾನೆಂದು ಕಾರ್ಖಾನೆ ಮಾಲೀಕ ಅನುಮಾನಿಸಿದ್ದಾನೆ. ಶಂಕೆಯ ಮೇಲೆ ಬಾಲಕನ ಮೇಲೆ ಕ್ರೂರವಾಗಿ ದಾಳಿ ನಡೆಸಿದ್ದಾನೆ. ಅಲ್ಲದೆ, ವಿದ್ಯುತ್‌ ಶಾಕ್ ಕೊಟ್ಟು ಕ್ರೌರ್ಯ ಎಸಗಿದ್ದಾನೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಘಟನೆಯ ಗಂಭೀರತೆಯನ್ನು ಪರಿಗಣಿಸಿ, ತ್ವರಿತ ತನಿಖೆ ನಡೆಸಲಾಗುತ್ತಿದೆ. ಬಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕನ ಕುಟುಂಬಸ್ಥರು ಮೊಬೈಲ್ ಕಳ್ಳತನದ ಆರೋಪವನ್ನು ನಿರಾಕರಿಸಿದ್ದಾರೆ. ತಮ್ಮ ಮಗ ಯಾವುದೇ ಮೊಬೈಲ್ ಕದ್ದಿಲ್ಲ, ಸುಳ್ಳು ಆರೋಪ ಮಾಡಿ, ಆತನ ಮೇಲೆ ಕ್ರೌರ್ಯ ಮೆರೆದು, ಚಿತ್ರಹಿಂಸೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.

“ಬಾಲಕ ಮೊಬೈಲ್ ಕದ್ದಿದ್ಧಾನೆ ಎಂಬ ಆರೋಪಕ್ಕೆ ಯಾವುದೇ ಪುರಾವೆಗಳಿಲ್ಲ. ವಿನಾಕಾರಣ ಬಾಲಕನಿಗೆ ಚಿತ್ರಹಿಂಸೆ ನೀಡಲಾಗಿದೆ. ನಾವು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ” ಎಂದು ಬಾಲಕನ ಕುಟುಂಬಸ್ಥರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...