17 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ; ಸ್ವಾಮಿ ಚೈತನ್ಯಾನಂದ ಬಂಧನ

Date:

17 ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿ ಸ್ವಾಮಿ ಚೈತನ್ಯಾನಂದ ಅಲಿಯಾಸ್ ಪಾರ್ಥಸಾರಥಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಲವಾರು ದಿನಗಳಿಂದ ತಲೆ ಮರೆಸಿಕೊಂಡು, ಪದೇ-ಪದೇ ಸ್ಥಾಳ ಬದಲಿಸುತ್ತಿದ್ದ ಆರೋಪಿ ಪಾರ್ಥಸಾರಥಿಯನ್ನು ಆಗ್ರಾದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಕಳೆದ 50 ದಿನಗಳಿಂದ ಪರಾರಿಯಾಗಿದ್ದ ಸ್ವಾಮಿಯನ್ನು ತಾಜ್‌ಗಂಜ್ ಪ್ರದೇಶದ ಹೋಟೆಲ್‌ನಲ್ಲಿ ಭಾನುವಾರ ಮುಂಜಾನೆ 3.30ಕ್ಕೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಪಾರ್ಥಸಾರಥಿ ದೆಹಲಿಯ ವಸಂತ ಕುಂಜ್ ಪ್ರದೇಶದಲ್ಲಿರುವ ಖಾಸಗಿ ಎಂಜಿನಿಯರಿಂಗ್ ಸಂಸ್ಥೆ ‘ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ಮೆಂಟ್‌’ನ ವ್ಯವಸ್ಥಾಪಕನಾಗಿದ್ದಾರೆ. ಕಾಲೇಜಿನಲ್ಲಿ ಇಡಬ್ಲ್ಯೂಎಸ್ ವಿದ್ಯಾರ್ಥಿವೇತನದ ಅಡಿಯಲ್ಲಿ ‘ಸ್ನಾತಕೋತ್ತರ ಡಿಪ್ಲೊಮಾ ಇನ್ ಮ್ಯಾನೇಜ್‌ಮೆಂಟ್’ (ಪಿಜಿಡಿಎಂ) ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯರಿಗೆ ಆತ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಆತನ ವಿರುದ್ಧ ಇತ್ತೀಚೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಆತನ ಕಾಮಕೃತ್ಯಗಳಿಗೆ ಸುಮಾರು 12ರಿಂದ 17 ವಿದ್ಯಾರ್ಥಿನಿಯರು ತುತ್ತಾಗಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ವಿರುದ್ಧ ಶೃಂಗೇರಿ ಮಠ ಮತ್ತು ಮಠದ ಆಸ್ತಿಗಳ ಆಡಳಿತಾಧಿಕಾರಿ ಪಿ.ಎ ಮುರಳಿ ಅವರು 2025ರ ಆಗಸ್ಟ್ 4ರಂದು ವಸಂತ್ ಕುಂಜ್ ಉತ್ತರ ಪೊಲೀಸ್ ಠಾಣೆಯಲ್ಲಿ ಮೊದಲ ದೂರು ದಾಖಲಿಸಿದ್ದರು. ಅವರ ದೂರಿನ ಆಧಾರದ ಮೇಲೆ ಬಿಎನ್‌ಎಸ್‌ ಸೆಕ್ಷನ್ 75(2), 79 ಮತ್ತು 351(2) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

ಈ ಲೇಖನ ಓದಿದ್ದೀರಾ?: ಬಿಹಾರದ ಭೂಮಿ ಲೂಟಿ: ಅದಾನಿ ಸಾಮ್ರಾಜ್ಯದ ವಿಸ್ತರಣೆಯಲ್ಲಿ ಮೋದಿ ಸರ್ಕಾರದ ನೇರ ಪಾತ್ರ

ತನಿಖೆ ಆರಂಭಗೊಂಡ ಬಳಿಕ, ಪಾರ್ಥಸಾರಥಿಯ ಕಿರುಕುಳ/ದೌರ್ಜನ್ಯ ಪ್ರಕರಣವು ಗಂಭೀರ ಸ್ವರೂಪವನ್ನು ಪಡೆದುಕೊಂಡಿತು. ಪೊಲೀಸರ ಎದುರು ಹೇಳಿಕೆ ದಾಖಲಿಸಿದ 32 ವಿದ್ಯಾರ್ಥಿನಿಯರಲ್ಲಿ 17 ಮಂದಿ ತಮಗೆ ಪಾರ್ಥಸಾರಥಿ ವಾಟ್ಸ್‌ಆ್ಯಪ್‌ ಮತ್ತು ಎಸ್‌ಎಂಎಸ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳಿಸುತ್ತಿದ್ದರು. ಅಲ್ಲದೆ, ಅಸಭ್ಯವಾಗಿ ಮುಟ್ಟುತ್ತಿದ್ದರು ಎಂದು ಆರೋಪಿಸಿದ್ದಾರೆ ಎಂದು ತಿಳಿದುಬಂದಿದೆ.

ಆತನ ಬೇಡಿಕೆಯನ್ನು ಈಡೇರಿಸುವಂತೆ ಕೆಲವು ಅಧ್ಯಾಪಕರು ಮತ್ತು ಆಡಳಿತ ಸಿಬ್ಬಂದಿಗಳು ತಮ್ಮ ಮೇಲೆ ಒತ್ತಡ ಹೇರಿದ್ದಾರೆ ಎಂದೂ ಕೆಲವು ವಿದ್ಯಾರ್ಥಿಗಳು ಹೇಳಿಕೊಂಡಿದ್ದಾರೆ.

ಸಂಸ್ಥೆಯಿಂದ ಪಾರ್ಥಸಾರಥಿಯನ್ನು ವಜಾಗೊಳಿಸಿ, ಹೊರಹಾಕಿರುವ ಶಾರದಾ ಪೀಠವು, ಆತನ ಕೃತ್ಯಗಳಿಗೂ ಸಂಸ್ಥೆಗೂ ಸಂಬಂಧವಿಲ್ಲ ಎಂದು ಹೇಳಿಕೊಂಡಿದೆ. ಅಲ್ಲದೆ, ಆತನ ಕೃತ್ಯಗಳನ್ನು ‘ಕಾನೂನುಬಾಹಿರ, ಅನುಚಿತ ಮತ್ತು ಪೀಠದ ಹಿತಾಸಕ್ತಿಗಳಿಗೆ ಹಾನಿಕಾರಕ’ ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...