ಸ್ವಾತಿ ಮಲಿವಾಲ್ ಪ್ರಕರಣ: ಅಕ್ರಮ ಬಂಧನಕ್ಕೆ ಪರಿಹಾರ ಕೋರಿ ಕೇಜ್ರಿವಾಲ್ ಆಪ್ತ ಸಹಾಯಕ ಹೈಕೋರ್ಟ್ ಮೊರೆ

Date:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ತಮ್ಮ ಬಂಧನವನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ. ಹಾಗೆಯೇ ತನ್ನ ಬಂಧನವನ್ನು ‘ಅಕ್ರಮ ಬಂಧನ’ ಎಂದು ಹೇಳಿರುವ ಭಿಬವ್ ಪರಿಹಾರ ಕೋರಿದ್ದಾರೆ.

ಅರ್ನೇಶ್ ಕುಮಾರ್ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವ ಕಾರಣ ತನ್ನ ಬಂಧನವನ್ನು ಕಾನೂನುಬಾಹಿರ ಎಂದು ಘೋಷಿಸಬೇಕೆಂದು ಬಿಭವ್ ಕುಮಾರ್ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯೊಳಗೆ ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್‌ ಅನ್ನು ಮೇ 18ರಂದು ಬಂಧಿಸಿದ್ದಾರೆ.

ಇದನ್ನು ಓದಿದ್ದೀರಾ? ಸ್ವಾತಿ ಮಲಿವಾಲ್ ಪ್ರಕರಣ| ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ಬಂಧನ

ಅದಾದ ಬಳಿಕ ನ್ಯಾಯಾಲಯವು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಮೇ 24ರಂದು ಬಿಭವ್ ಕುಮಾರ್‌ ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಮೇ 27ರಂದು ದೆಹಲಿಯ ತೀಸ್ ಹಜಾರಿ ಕೋರ್ಟ್ ಬಿಭವ್ ಕುಮಾರ್‌ಗೆ ಜಾಮೀನು ನಿರಾಕರಿಸಿತ್ತು.

ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ 7-8 ಬಾರಿ ಕಪಾಳಮೋಕ್ಷ ಮಾಡಿದ್ದಾರೆ. ಹೊಟ್ಟೆಗೆ ಒದ್ದಿದ್ದಾರೆ ಎಂದು ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ. ಇದಾದ ಬಳಿಕ ದೆಹಲಿ ಪೊಲೀಸರು ಬಿಭವ್ ಕುಮಾರ್ ವಿರುದ್ಧ ಐಪಿಸಿಯ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಎಎಪಿ ಸ್ವಾತಿ ಮಲಿವಾಲ್ ವಿರುದ್ಧ ಪ್ರತ್ಯಾರೋಪ ಮಾಡಿದೆ. ಮಲಿವಾಲ್ ಭದ್ರತಾ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕಿಳಿದಿದ್ದು ಹಲ್ಲೆ ನಡೆದಿದೆ ಎಂದು ಹೇಳಲಾದ ದಿನ ಮುಖ್ಯಮಂತ್ರಿ ನಿವಾಸದಿಂದ ಹೊರ ನಡೆದಿರುವುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ ಎಂದು ಎಎಪಿ ಹೇಳಿದೆ. ಹಾಗೆಯೇ ವಿಡಿಯೋವನ್ನು ಕೂಡಾ ಹಂಚಿಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...