ಟಿ20 ವಿಶ್ವಕಪ್ | IDN vs PAK: ಟಾಸ್‌ ವೇಳೆ ಪಾಕ್‌ ನಾಯಕನ ಜೊತೆ ಕೈಕುಲುಕುವುದಿಲ್ಲ ಸೂರ್ಯಕುಮಾರ್ ಯಾದವ್

Date:

ಟಿ20 ವಿಶ್ವಕಪ್‌ ಟೂರ್ನಿಯ ಭಾರತ ಮತ್ತು ಪಾಕ್‌ ತಂಡಗಳ ನಡುವಿನ ಪಂದ್ಯವು ಶ್ರೀಲಂಕಾದ ಕೊಲಂಬೋ ಸ್ಟೇಡಿಯಂನಲ್ಲಿ ಭಾನುವಾರ ರಾತ್ರಿ ನಡೆಯಲಿದೆ. ಪಂದ್ಯದ ವೇಳೆ, ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಜೊತೆ ಕೈಕುಲುಕದೇ ಇರಲು ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ನಿರ್ಧರಿಸಿದ್ದಾರೆ ಎಂದು ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ವಿಶ್ವಕಪ್‌ ಟೂರ್ನಿಯ ‘ಎ ಗ್ರೂಪ್‌’ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳಿವೆ. ಗುಂಪಿನೊಳಗಿನ ಪಂದ್ಯಗಳಲ್ಲಿ ಭಾರತ ಮತ್ತು ಪಾಕ್ ತಂಡಗಳಿಗೆ ಈ ಪಂದ್ಯವು ಮೂರನೇ ಪಂದ್ಯವಾಗಿದೆ. ಎರಡೂ ತಂಡಗಳು ತಮ್ಮ ಮೊದಲ ಎರಡು ಪಂದ್ಯಗಳನ್ನು ಗೆದ್ದಿವೆ. ಮೂರನೇ ಗೆಲುವಿಗಾಗಿ ಪರಸ್ಪರ ಸೆಣೆಸಡಲಿವೆ.

ಕಳೆದ ವರ್ಷ ಏಪ್ರಿಲ್‌ನಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಭೌಗೋಳಿಕ ಮತ್ತು ರಾಜಕೀಯ ಪರಿಸ್ಥಿತಿ ಹದಗೆಟ್ಟಿದೆ. ಇದು, ಕ್ರೀಡೆಯನ್ನೂ ಆವರಿಸಿಕೊಂಡಿದೆ. 2025ರ ಸೆಪ್ಟೆಂಬರ್‌ನಲ್ಲಿ ನಡೆದ ಏಷ್ಯಾ ಕಪ್‌ ಸಮಯದಲ್ಲಿಯೂ ಭಾರತವು ಪಾಕ್ ತಂಡದೊಂದಿಗೆ ‘ಹ್ಯಾಂಡ್‌ಶೇಕ್‌’ ಮಾಡುವುದಿಲ್ಲವೆಂದು ಘೋಷಿಸಿತ್ತು. ಅಂದಿನಿಂದಲೂ, ಪಾಕ್ ಆಟಗಾರರೊಂದಿಗೆ ಕೈಕುಲುವುದನ್ನು ಭಾರತದ ಆಟಗಾರರು ತಪ್ಪಿಸುತ್ತಲೇ ಬಂದಿದ್ದಾರೆ. ಈಗಲೂ, ಭಾರತೀಯ ತಂಡವು ‘ಹ್ಯಾಂಡ್‌ಶೇಕಿಂಗ್’ ಸಂಪ್ರದಾಯದ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುತ್ತದೆ. ಹೀಗಾಗಿ, ಸೂರ್ಯಕುಮಾರ್ ಅವರು ಟಾಸ್‌ನಲ್ಲಿ ಪಾಕ್ ನಾಯಕನಿಗೆ ಕೈ ಚಾಚುವುದಿಲ್ಲ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶನಿವಾರ, ಸೂರ್ಯಕುಮಾರ್ ಯಾದವ್ ಅವರಿಗೆ, ಸುದ್ದಿಗಾರರು ‘ಪಾಕಿಸ್ತಾನ ವಿರುದ್ಧದ ಪಂದ್ಯದ ಸಮಯದಲ್ಲಿ ಭಾರತವು ಹ್ಯಾಂಡ್‌ಶೇಕ್ ನಿಯಮವನ್ನು ಅನುಸರಿಸುವುದನ್ನು ಮುಂದುವರಿಸುತ್ತದೆಯೇ’ ಎಂದು ಕೇಳಿದ್ದರು. ಆದರೆ, ಸೂರ್ಯಕುಮಾರ್ ಯಾವುದೇ ಉತ್ತರ ನೀಡಿರಲಿಲ್ಲ. ಬದಲಾಗಿ, ’24 ಗಂಟೆಗಳ ಕಾಲ ಕಾಯಿರಿ. ಚೆನ್ನಾಗಿ ತಿನ್ನಿರಿ, ಚೆನ್ನಾಗಿ ನಿದ್ದೆ ಮಾಡಿ, ನಾಳೆ ನೋಡೋಣ’ ಎಂದಿದ್ದರು

ಮತ್ತೊಂದೆಡೆ, ಪಾಕಿಸ್ತಾನ ನಾಯಕ ಆಘಾ ಅವರು ತಮ್ಮ ತಂಡದೊಂದಿಗೆ ಹ್ಯಾಂಡ್‌ಶೇಕ್ ಮಾಡಬೇಕೆ ಅಥವಾ ಬೇಡವೇ ಎಂಬುದನ್ನು ನಿರ್ಧರಿಸುವುದು ಭಾರತದ ಆಟಗಾರರಿಗೆ ಬಿಟ್ಟದ್ದು ಎಂದು ಹೇಳಿದ್ದರು. “ಆಟವನ್ನು ಆಟದ ರೀತಿಯಲ್ಲಿ ನಿಜವಾದ ಉತ್ಸಾಹದಲ್ಲಿ ಆಡಬೇಕು. ಉಳಿದದ್ದು ಅವರಿಗೆ (ಭಾರತ) ಬಿಟ್ಟದ್ದು, ಅವರು ಏನು ಮಾಡಲು ಬಯಸುತ್ತಾರೆ, ಅವರೇ ನಿರ್ಧರಿಸುತ್ತಾರೆ” ಎಂದು ಅಘಾ ಹೇಳಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...