ಕೊರೋನಾ ಸಮಯದಲ್ಲಿ ತಬ್ಲಿಘಿ ಸಭೆ: 70 ಜನರ ವಿರುದ್ಧದ FIR ರದ್ದು; ಕೋರ್ಟ್‌ ಆದೇಶ

Date:

ದೇಶದಲ್ಲಿ ಕೊರೋನಾ ಆಕ್ರಮಣ ಆರಂಭವಾಗಿದ್ದ ಸಮಯ 2020ರ ಮಾರ್ಚ್‌ನಲ್ಲಿ ದೆಹಲಿಯಲ್ಲಿ ತಬ್ಲಿಘಿ ಜಮಾತ್ ಸಭೆ ನಡೆದಿತ್ತು. ಆ ಸಭೆಯಲ್ಲಿ ಭಾಗಿಯಾಗಿದ್ದ ವಿದೇಶಿಗರಿಗೆ ಆತಿಥ್ಯ ನೀಡಿದ್ದ 70 ಭಾರತೀಯರ ವಿರುದ್ಧ ದಾಖಲಾಗಿದ್ದ 16 ಪ್ರಕರಣಗಳನ್ನು ದೆಹಲಿ ಹೈಕೋರ್ಟ್‌ ರದ್ದಗೊಳಿಸಿದೆ.

2020ರ ಮಾರ್ಚ್‌ನಲ್ಲಿ ನಡೆದಿದ್ದ ಸಭೆಯಲ್ಲಿ ಭಾಗಿಯಾಗಿದ್ದ ವಿದೇಶಿಗರಿಗೆ ಆತಿಥ್ಯ ವಹಿಸಿದ್ದ ಭಾರತೀಯರು ದೇಶದಲ್ಲಿನ ಕೊರೋನಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ. ಕೊರೋನಾ ಸೋಂಕು ಹರಡುವಲ್ಲಿ ಕಾರಣರಾಗಿದ್ದಾರೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದರು. 70 ಮಂದಿ ವಿರುದ್ಧ 16 ಎಫ್‌ಐಆರ್‌ಗಳನ್ನು ದಾಖಲಿಸಿದ್ದರು.

ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಧೀಶ ನೀನಾ ಬನ್ಸಾಲ್ ಕೃಷ್ಣ ಅವರು ‘ಚಾರ್ಜ್‌ಶೀಟ್‌ಗಳನ್ನು ರದ್ದುಗೊಳಿಸಲಾಗಿದೆ’ ಎಂದು ಆದೇಶಿಸಿದ್ದಾರೆ. ನ್ಯಾಯಾಲಯದ ಆದೇಶವನ್ನು ದೆಹಲಿ ಪೊಲೀಸರು ಪ್ರಶ್ನಿಸಿ, ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ವಿರುದ್ಧದ ಪ್ರಕರಣಗಳ ರದ್ದತಿ ಕೋರಿದ್ದ ಅರ್ಜಿದಾರರು, “ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್ ಮತ್ತು ಚಾರ್ಜ್‌ಶೀಟ್‌ನಲ್ಲಿ ನಮಗೆ ಕೋವಿಡ್‌-19 ಸೋಂಕು ತಗುಲಿವೆ ಎಂಬುದಾಗಿ ಸೂಚಿಸುವ ಯಾವುದೇ ದಾಖಲೆಗಳನ್ನು ಉಲ್ಲೇಖಿಸಿಲ್ಲ. ಆದ್ದರಿಂದ, 1897ರ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿಯಲ್ಲಿ ನಮ್ಮನ್ನು ರೋಗ ಹರಡಿದ ಆರೋಪಿಗಳೆಂದು ಆರೋಪಿಸಲು ಸಾಧ್ಯವಿಲ್ಲ” ಎಂದು ವಾದಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಎಲ್ಲ ರಾಜ್ಯಗಳಲ್ಲೂ ಮತದಾರರ ಪಟ್ಟಿ ಪರಿಷ್ಕರಣೆ: ಇದು ಪರೋಕ್ಷ NRC, CAA ಜಾರಿ ಅಲ್ಲವೇ?

“ಈ ಪ್ರಕರಣಗಳು ಆಧಾರರಹಿತ ಆರೋಪಗಳಿಂದ ಕೂಡಿವೆ. ಉದ್ದೇಶಪೂರ್ವಕವಾಗಿ ಆರೋಪಗಳನ್ನು ರೂಪಿಸಲಾಗಿದೆ ಮತ್ತು ಉತ್ಪ್ರೇಕ್ಷಿಸಲಾಗಿದೆ. ಆ ಸಮಯದಲ್ಲಿ, ದೆಹಲಿ ಸರ್ಕಾರ ಹೊರಡಿಸಿದ ನಿಷೇಧಾಜ್ಞೆಗಳಲ್ಲಿ ಧಾರ್ಮಿಕ ಸಭೆಗಳನ್ನು ನಿರ್ದಿಷ್ಟವಾಗಿ ನಿಷೇಧಿಸಿದ್ದರೂ, ನಾವು ಮಸೀದಿಗಳ ಒಳಗೆ ಅಥವಾ ಮನೆಗಳಲ್ಲಿ ಇದ್ದವರಿಗೆ ಮಾತ್ರ ಕೇವಲ ಆಶ್ರಯವನ್ನಷ್ಟೇ ನೀಡಿದ್ದೀವೆ” ಎಂದು ವಾದ ಮಂಡಿಸಿದ್ದಾರೆ.

ವಾದವನ್ನು ಆಲಿಸಿದ ನ್ಯಾಯಾಧೀಶರು ಎಫ್‌ಐಆರ್‌ಗಳನ್ನು ರದ್ದುಗೊಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...