‘ಕಿರಾತಕ’ ಖ್ಯಾತಿಯ ಖಳನಟ ಡೇನಿಯಲ್ ಬಾಲಾಜಿ ನಿಧನ

Date:

ಕಿರಾತಕ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ತಮಿಳಿನ ಖ್ಯಾತ ಖಳನಟ ಡೇನಿಯಲ್ ಬಾಲಾಜಿ ಅವರು ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ವೆಟ್ಟೈಯಾಡು ವಿಲಯಾಡುವಿನಲ್ಲಿ ಅಮುಧನ್, ವಡಾ ಚೆನ್ನೈನ ತಂಬಿ ಪಾತ್ರಗಳಿಂದ ಡೇನಿಯಲ್ ಬಾಲಾಜಿ ಪ್ರಖ್ಯಾತರಾಗಿದ್ದಾರೆ. ಅವರಿಗೆ 48 ವರ್ಷ ವಯಸ್ಸಾಗಿತ್ತು.

ಡೇನಿಯಲ್ ಬಾಲಾಜಿ ಅವರಿಗೆ ಕಳೆದ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಚೆನ್ನೈನ ಕೊಟ್ಟಿವಾಕಂನಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಡೇನಿಯಲ್ ಅವರ ಪಾರ್ಥಿವ ಶರೀರವನ್ನು ಇಂದು (ಮಾರ್ಚ್ 30) ಪುರಸೈವಾಲ್ಕಂನಲ್ಲಿರುವ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತದೆ. ಇಂದು ಸಂಜೆಯೇ ಅಂತ್ಯಕ್ರಿಯೆ ನಡೆಯಲಿದೆ.

ಇದನ್ನು ಓದಿದ್ದೀರಾ?  ಧಾರವಾಡ | ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಹು ಭಾಷಾನಟನಾಗಿಯೂ ಗುರುತಿಸಿಕೊಂಡಿರುವ ಡೇನಿಯಲ್ ಬಾಲಾಜಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕಿರಾತಕ ಚಿತ್ರದಲ್ಲಿ ವಿಲನ್‌ ಆಗಿ ನಟಿಸಿದ್ದಾರೆ. ಧಾರಾವಾಹಿ ಮೂಲಕ ತಮ್ಮ ಸಿನಿವೃತ್ತಿಯನ್ನು ಆರಂಭಿಸಿದ ಬಾಲಾಜಿ ಅವರು ಚಿತ್ತಿ ಧಾರಾವಾಹಿಯಲ್ಲಿ ಡೇನಿಯಲ್ ಪಾತ್ರದಲ್ಲಿ ನಟಿಸಿದ್ದಾರೆ. ಅದಾದ ಬಳಿಕ ಡೇನಿಯಲ್ ಬಾಲಾಜಿ ಎಂದು ಜನಪ್ರಿಯರಾದರು. ಬಾಲಾಜಿ ಅತೀವ ದೈವಭಕ್ತರಾಗಿದ್ದು, ಅವಡಿಯಲ್ಲಿ ದೇವಾಲಯವನ್ನು ನಿರ್ಮಿಸುತ್ತಿದ್ದರು ಎಂದು ವರದಿ ಹೇಳುತ್ತದೆ.

ಚಿತ್ತಿ ಧಾರಾವಾಹಿ ಬಳಿಕ ಬಾಲಾಜಿ ಅವರಿಗೆ ಕಮಲ್ ಹಾಸನ್ ಜೊತೆ ನಟಿಸುವ ಅವಕಾಶ ಲಭಿಸಿದ್ದು ‘ವೆಟ್ಟೈಯಾಡು ವಿಲೈಯಾಡು’ ಸಿನಿಮಾದಲ್ಲಿ ಖಳನಟರಾಗಿದ್ದರು. ಮೋಹನ್​ಲಾಲ್ ನಟನೆಯ ಭಗವಾನ್, ಮಮ್ಮೂಟಿ ನಟನೆಯ ಬ್ಲ್ಯಾಕ್, ಡ್ಯಾಡಿ ಕೂಲ್ ಸಿನಿಮಾಗಳಲ್ಲಿ ಪಾತ್ರ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...